ಶಿರಸಿ: ಪ್ರವಾಸಕ್ಕೆಂದು ಬಂದಿದ್ದ ಟ್ರ್ಯಾಕ್ಟರ್ ಪಲ್ಟಿ ಆಗಿ 26 ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ (Road accident) ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ನಡೆದಿದೆ.
ಜಿಲ್ಲೆಯ ಮುಂಡಗೋಡ ತಾಲೂಕಿನ ಮಳಗಿ ಪದವಿಪೂರ್ವನ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳಿದ ವೇಳೆ ಈ ಅವಘಡ ಸಂಭವಿಸಿದೆ. ಟ್ರಾಕ್ಟರ್ ನಲ್ಲಿ ಒಟ್ಟು 26 ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದು, 8 ಜನ ವಿದ್ಯಾರ್ಥಿನಿಯರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷವೇ ಇದಕ್ಕೆ ಕಾರಣ ಎನ್ನಲಾಗಿದ್ದು. ಮಳಗಿಯಿಂದ ಕೊಳಗಿಗೆ ಪ್ರವಾಸಕ್ಕೆ ತೆರಳಿದ್ದ ಮಳಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಒಂದು ಟ್ಯಾಕ್ಟರ್ ನಲ್ಲಿ 90 ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಅತೀ ವೇಗದ ಚಾಲನೆಯಿಂದ ಟ್ಯಾಕ್ಟರ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಶಿರಸಿ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಶಿರಸಿ ಗ್ರಾಮೀಣ ಠಾಣರಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ವಿದ್ಯಾರ್ಥಿನಿಯರನ್ನು ಟ್ರ್ಯಾಕ್ಟರ್‌ನಲ್ಲಿ ಯಾಕೆ ಪ್ರವಾಸಕ್ಕೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿಲ್ಲ. ಈಗ ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಟ್ರ್ಯಾಕ್ಟರ್‌ನಲ್ಲಿ ಪ್ರವಾಸ ಹೋಗುವ ಪರಿಸ್ಥಿತಿ ಯಾಕೆ ನಿರ್ಮಾಣವಾಯಿತು, ಯಾಕೆ ಇದರ ವ್ಯವಸ್ಥೆ ಮಾಡಿದರು, ಯಾರು ಪರ್ಮಿಷನ್ ನೀಡಿದರು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಇದನ್ನೂ ಓದಿ | Road Accident : ಚಾಲಕರ ಓವರ್‌ಟೇಕ್ ಹುಚ್ಚಾಟದಿಂದ ಟ್ರ್ಯಾಕ್ಟರ್ ಅಪಘಾತ; ಮೂವರ ಸಾವು, ಒಬ್ಬ ಗಂಭೀರ