ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಖುಷಿ ಸುದ್ದಿ ಸಿಕ್ಕಿದೆ. ರಾಜ್ಯ ಪೊಲೀಸ್ ಇಲಾಖೆಯ ಸಂಚಾರ ಪೊಲೀಸರು ವಿಧಿಸಿರುವ ಇ-ಚಲನ್ (Traffic E-Challan) ದಂಡ ಪಾವತಿಗೆ ಶೇ. 50 ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಆದರೆ. ಈ ರಿಯಾಯಿತಿ ಫೆ.11ರವರೆಗೆ ಮಾತ್ರ ಅನ್ವಯವಾಗಲಿದೆ.
ಇದನ್ನೂ ಓದಿ | UPSC ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ಐಆರ್‌ಎಂಎಸ್‌ಗೆ ಅಧಿಕಾರಿಗಳ ನೇಮಕ
ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾ ಬಿ.ವೀರಪ್ಪ ಅವರ ಪ್ರಸ್ತಾವನೆ ಮೇರೆಗೆ ಫೆ.11ರವರೆಗೆ ದಂಡ ಪಾವತಿಗೆ ಶೇ. 50 ರಿಯಾಯಿತಿ ನೀಡಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿದ್ದಾರೆ.