ರಾಯಚೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನೀರಮಾನ್ವಿ ಬಳಿಯ ರಾಯಚೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. 8 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಬೈಕ್ ಸವಾರ ರವಿ (25) ಮೃತ ಯುವಕ. ಮಾನ್ವಿಯಿಂದ ರಾಯಚೂರ ಕಡೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎದುರಿಗೆ ಪಲ್ಸರ್ ಬೈಕ್ ಡಿಕ್ಕಿಯಾಗಿ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಕೊನೆಯುಸಿರೆಳೆದಿದ್ದಾನೆ.
ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದ ಯುವಕ, ಇತ್ತೀಚಿಗೆ ಸಿರವಾರ ಪಟ್ಟಣದಲ್ಲಿ ಅಂಗಡಿ ಓಪನ್ ಮಾಡಿದ್ದ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Self Harming : ಹಾಸನದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ದರ್ಜೆ ಸಹಾಯಕ ಆತ್ಮಹತ್ಯೆ
ಲೋಕಾಯುಕ್ತ ಬಲೆಗೆ ಬಿದ್ದ ಕೆಎಸ್‌ಆರ್‌ಟಿ ಡಿಸಿ
ಚಿಕ್ಕಮಗಳೂರು: ಕಚೇರಿಯಲ್ಲಿ 10 ಸಾವಿರ ರೂ. ಲಂಚ ಪಡೆಯುವಾಗ ಕೆಎಸ್‌ಆರ್‌ಟಿ ಡಿ.ಸಿ.(ವಿಭಾಗೀಯ ನಿಯಂತ್ರಣಾಧಿಕಾರಿ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ. ಡ್ರೈವರ್ ನಿಂದ ಲಂಚ ಪಡೆಯುವಾಗ ಕೆ.ಎಸ್.ಆರ್.ಟಿ.ಸಿ. ಡಿಸಿ ಬಸವರಾಜ್ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು 10 ಸಾವಿರ ಲಂಚಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಬಸ್ ಡ್ರೈವರ್ ದೂರು ನೀಡಿದ್ದರು. ಹೀಗಾಗಿ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಳು, ಬಸವರಾಜ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.