ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದೆ.
ನಿನ್ನೆ ಸಂಜೆ ರಾಣಿಝರಿ ಫಾಲ್ಸ್‌ಗೆ ತೆರಳಿ ಅಲ್ಲಿಂದ ಟ್ರೆಕ್ಕಿಂಗ್‌ಗೆ ಹೋಗಿದ್ದ ಈ ವ್ಯಕ್ತಿ ಬೆಂಗಳೂರಿನವನು. ಬೆಂಗಳೂರಿನ ಜೆ.ಪಿ ನಗರದ ಪರೋಸ್ ಅಗರ್‌ವಾಲ್ ಎಂಬಾತನೇ ಈ ವ್ಯಕ್ತಿ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ರಾಣಿಝರಿ ಫಾಲ್ಸ್‌ನ ಆಸುಪಾಸು ದಟ್ಟವಾದ ಅರಣ್ಯವಿದ್ದು, ಇಲ್ಲಿ ದಾರಿ ತಿಳಿಯದವರು ಚಾರಣ ಹೋಗಿ ಸಂಕಷ್ಟಕ್ಕೆ ಸಿಲುಕಿದ ಹಲವು ಪ್ರಕರಣಗಳು ನಡೆದಿವೆ.
ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶೋಧಕ್ಕೆ ಸ್ಥಳೀಯರು ಹಾಗೂ ಪೊಲೀಸರು ತಂಡ ರಚಿಸಿ ಮುಂದಾಗಿದ್ದರು. ಬೆಳ್ತಂಗಡಿ ವ್ಯಾಪ್ತಿಯ ಬಾಳೂರು ಕಾಡಿನಲ್ಲಿ ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯರಿಂದ ಶೋಧ ಕಾರ್ಯ ನಡೆದ ಸಂದರ್ಭದಲ್ಲಿ ಈತ ಪತ್ತೆಯಾಗಿದ್ದಾನೆ. ಪತ್ತೆಯಾದ ಪರೋಸ್ ಅಗರ್‌ವಾಲ್‌ನನ್ನು ಬಾಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಲವು ವರ್ಷಗಳ ಹಿಂದೆ ಶಿರಾಡಿ ಘಾಟಿಯ ಕೆಂಪುಹೊಳೆ ಪ್ರದೇಶದಲ್ಲಿ ಚಾರಣಕ್ಕೆ ತೆರಳಿ ಅಡವಿಪಾಲಾಗಿದ್ದ ಮೂವರು ಬಳಿಕ ಶವವಾಗಿ ಪತ್ತೆಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಸಾಲಭಾದೆ ತಾಳದೆ ಇಬ್ಬರು ರೈತರ ಆತ್ಮಹತ್ಯೆ
ಮೈಸೂರು: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ತಾಲ್ಲೂಕು ಶ್ಯಾನಭೋಗನಹಳ್ಳಿಯಲ್ಲಿ ಸುರೇಶ್ (58) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನು ಹೊಂದಿದ್ದ ರೈತರಾಗಿದ್ದ ಇವರು ಬ್ಯಾಂಕ್, ಸೊಸೈಟಿ ಸೇರಿ 7 ಲಕ್ಷ ರೂ. ಸಾಲ ಮಾಡಿದ್ದಋು. ಬೆಳೆ ಕೈ ಕೊಟ್ಟ ಹಿನ್ನೆಲೆ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೂರು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮದ ರಾಜಶೆಟ್ಟಿ (78) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 5 ಎಕರೆ ಜಮೀನು ಹೊಂದಿದ್ದ ರಾಜಶೆಟ್ಟಿ ತಂಬಾಕು, ರಾಗಿ ಬೆಳೆ ಬೆಳೆದಿದ್ದರು. ಬ್ಯಾಂಕ್, ಸೊಸೈಟಿ, ಮಹಿಳಾ ಸಂಘ, ಕೈ ಸಾಲ ಸೇರಿ ಸುಮಾರು 8 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಹೆಚ್ಚಾಗಿದ್ದ ಬಡ್ಡಿ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Labourer death: ರೈಲು ಅಪಘಾತ, ಗುತ್ತಿಗೆ ಕಾರ್ಮಿಕ ಸಾವು