Site icon Vistara News

Tulunadu Daivaradhane | ದೈವಾರಾಧನೆ ಹೆಸರಲ್ಲಿ ದಂಧೆ; ದೈವಾರಾಧಕರಿಂದ ಕೊರಗಜ್ಜನಿಗೆ ದೂರು

kantara bhootaradhane ದೈವಾರಾಧನೆ ಕೊರಗಜ್ಜನಿಗೆ ದೂರು

ಮಂಗಳೂರು: ಕರಾವಳಿ ಹೊರಗಿ‌ನ ದೈವಾರಾಧನೆ (Tulunadu Daivaradhane) ವಿರುದ್ಧ ಮಂಗಳೂರಿನ ದೈವಾರಾಧಕರು ಸಿಡಿದೆದ್ದಿದ್ದು, ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ಕೊರಗಜ್ಜನ ಮೊರೆ ಹೋಗಿದ್ದಾರೆ. ಸಮಾಜವನ್ನು ದಾರಿ ತಪ್ಪಿಸುವ ಕೆಲಸ ನಿಲ್ಲಬೇಕು. ಹೀಗೆ ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ.

ಹಲವು ಸಂಘಟನೆಗಳ ನೇತೃತ್ವದಲ್ಲಿ ಹಲವಾರು ಮಂದಿ ಮಂಗಳೂರಿನ ಕುತ್ತಾರು ಬಳಿಯ ಕೊರಗಜ್ಜನ ಆದಿಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾಗಿದೆ. ತುಳುನಾಡ ದೈವಾರಾಧನಾ ಸಂರಕ್ಷಣಾ ಯುವವೇದಿಕೆ, ದೈವಾರಾಧನಾ ಸಮಿತಿ ಬೆಳ್ತಂಗಡಿ, ಹಿಂದು ಸಂರಕ್ಷಣಾ ಸಮಿತಿ ಮಂಗಳೂರು ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ.

ದೈವದ ಹೆಸರಲ್ಲಿ ಲಕ್ಷಾಂತರ ರೂಪಾಯಿ ಲೂಟಿ
ಮೈಸೂರು, ಬೆಂಗಳೂರಿನಲ್ಲಿ ಕೊರಗಜ್ಜ ದೈವದ ಹೆಸರಲ್ಲಿ ದಂಧೆ ಶುರುವಾಗಿದೆ ಎಂದು ಈ ಸಮಿತಿಗಳ ಮುಖಂಡರು, ಪದಾಧಿಕಾರಿಗಳು ಆರೋಪ ಮಾಡಿದ್ದಾರೆ. ದೈವದ ಕೋಲ, ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಲೂಟಿ ಮಾಡುತ್ತಿದ್ದಾರೆ ಎಂದು ಇವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | ಮಂಗಳೂರು ಸ್ಫೋಟ | ಉಡುಪಿಗೂ ಬಂದಿದ್ನಾ ಉಗ್ರ ಶಾರಿಕ್; ಕೃಷ್ಣ ಮಠ ಟಾರ್ಗೆಟ್ ಆಗಿತ್ತಾ?

ಕಾನೂನು ಹೋರಾಟಕ್ಕೆ ಸಿದ್ಧತೆ
ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ. ಆದಿ ಸ್ಥಳ ಮತ್ತು ತುಳು‌ನಾಡು ಹೊರತುಪಡಿಸಿ ಕೊರಗಜ್ಜನ ‌ಪ್ರತಿಷ್ಠೆಗೆ ಅವಕಾಶ ‌ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಮೂಲದ ಕೆಲವು ಭಕ್ತರಿಂದಲೂ ಇಂತಹ ಅಕ್ರಮದ ವಿರುದ್ಧ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಕೆಯಾಗಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ‌ಕಡೆ ಆರಾಧನೆ ಮಾಡಿ ವ್ಯವಹಾರ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಇದನ್ನು ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಸಿನಿಮಾ ಮತ್ತು ಸಾಮಾಜಿಕ ತಾಣಗಳ ಕಾರಣದಿಂದ ಈ ದಂಧೆ ನಡಿಯುತ್ತಾ ಇದೆ. ಇದನ್ನು ನಿಲ್ಲಿಸದೇ ಇದ್ದರೆ ಉಗ್ರ ಹೋರಾಟವನ್ನು ಮಾಡಲಾಗುವುದು. ದೈವದ ಹೆಸರಿನಲ್ಲಿ ಅಕ್ರಮ ಮಾಡುವವರನ್ನು ನಾವು ಸಹಿಸುವುದಿಲ್ಲ. ಇದು ಕರಾವಳಿ ಭಾಗದ ಜನರ ಧಾರ್ಮಿಕ ಭಾವನೆಯ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ದೈವಾರಾಧಕರು ಕೊರಗಜ್ಜನ ಮೊರೆ ಹೋಗಿದ್ದಾರೆ.

ಇದನ್ನೂ ಓದಿ | ಮಂಗಳೂರು ಸ್ಫೋಟ | ಚಾರ್ಮಾಡಿ ತಪ್ಪಲಲ್ಲಿ ನಡೀತಾ ಟ್ರಯಲ್‌ ಬ್ಲಾಸ್ಟ್? ಸ್ಯಾಟಲೈಟ್‌ ಫೋನ್‌ ತನಿಖೆ ವೇಳೆ ಸಿಕ್ಕ ಸ್ಫೋಟಕ ಮಾಹಿತಿ

Exit mobile version