Site icon Vistara News

High Court order: ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಗೌರಿಶಂಕರ್‌ ಶಾಸಕತ್ವದಿಂದ ಅನರ್ಹ: ಕೋರ್ಟ್‌ ಆದೇಶ

Gowrishankar

#image_title

ತುಮಕೂರು/ ಬೆಂಗಳೂರು: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಜಾತ್ಯತೀತ ಜನತಾದಳಕ್ಕೆ ತೀವ್ರ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರದ ಜೆಡಿಎಸ್‌ ಶಾಸಕ ಗೌರಿಶಂಕರ್‌ (JDS MLA Gowrishankar) ಅವರನ್ನು ರಾಜ್ಯ ಹೈಕೋರ್ಟ್‌ (High Court order) ಶಾಸಕತ್ವದಿಂದ ಅನರ್ಹಗೊಳಿಸಿದೆ. ಆದರೆ, ಈ ಆದೇಶ ಈ ಅವಧಿಗೆ ಮಾತ್ರ ಸೀಮಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ.

ಗೌರಿ ಶಂಕರ್‌ ಅವರು 2018ರ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಮತದಾರರಿಗೆ ನಕಲಿ ಬಾಂಡ್ ಹಂಚಿಕೆ‌ ಮಾಡಿದ್ದರು ಎಂಬ ಆಪಾದನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ಯಾದವ್ ಅವರ ನೇತೃತ್ವದ ಪೀಠ ಬುಧವಾರ ಈ ತೀರ್ಪು ನೀಡಿದ್ದು, ಗೌರಿಶಂಕರ್‌ಗೆ ದೊಡ್ಡ ಮಟ್ಟದ ಹಿನ್ನಡೆ ಉಂಟಾದಂತಾಗಿದೆ.

ಮತದಾರರಿಗೆ ನಕಲಿ ಬಾಂಡ್‌ ಕೇಸ್‌

ಗೌರಿಶಂಕರ್‌ ಅವರು ಕಳೆದ ಚುನಾವಣೆಯ ಅವಧಿಯಲ್ಲಿ ಗ್ರಾಮಾಂತರ ಕ್ಷೇತ್ರದ ಮತದಾರರಿಗೆ ವಿಮಾ ಬಾಂಡ್‌ಗಳನ್ನು ನೀಡುವ ಆಮಿಷ ಒಡ್ಡಿದ್ದರು. ಜತೆಗೆ ನಂತರ ನೀಡಿದ ವಿಮಾ ಬಾಂಡ್‌ಗಳು ನಕಲಿಯಾಗಿದ್ದವು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಹಲವು ಸುತ್ತಿನ ವಿಚಾರಣೆ ಬಳಿಕ ಬುಧವಾರ ಅಂತಿಮ ಆದೇಶ ಹೊರಬಿದ್ದಿದೆ.

ಹೈಕೋರ್ಟ್ ಕಲಬುರಗಿ ಪೀಠದಿಂದ ಹೊರ ಬಿದ್ದಿರುವ ಈ ತೀರ್ಪಿನಿಂದ ಗೌರಿಶಂಕರ್‌ ಮತ್ತು ಜೆಡಿಎಸ್‌ಗೆ ಹಿನ್ನಡೆಯಾಗಿದೆ. 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ಅನ್ನು ಗೌರಿಶಂಕರ್‌ ವಿತರಿಸಿದ್ದರು ಎಂಬ ಆರೋಪವನ್ನು ಎದುರಿಸುತ್ತಿದ್ದರು. ಈಗ ಆ ಪ್ರಕರಣ ಕೋರ್ಟ್‌ನಲ್ಲಿ ಸಾಬೀತಾಗಿದೆ.

ಇದನ್ನೂ ಓದಿ: Rape and murder : ಬೆಂಗಳೂರಿನ ಐಟಿ ಉದ್ಯೋಗಿ ಪ್ರತಿಭಾ ಅತ್ಯಾಚಾರ, ಕೊಲೆ ಪ್ರಕರಣ; ಕ್ಯಾಬ್‌ ಡ್ರೈವರ್‌ಗೆ 30 ವರ್ಷ ಜೈಲು

ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವ ಅವಕಾಶ

ಇದೇ ವೇಳೆ ಈ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಗೌರಿ ಶಂಕರ್ ಅರ್ಜಿ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಆಯ್ಕೆ ಅಸಿಂಧು ಮಾಡಿದ ಆದೇಶ ಜಾರಿಗೆ ಒಂದು ತಿಂಗಳ ಕಾಲ ತಡೆಯಾಜ್ಞೆಯನ್ನೂ ನೀಡಿದೆ. ಇದೇ ವೇಳೆ ಗೌರಿ ಶಂಕರ್‌ ಸಹ ಸುಪ್ರೀಂ ಕೋರ್ಟ್‌ನಲ್ಲಿ ತೀರ್ಪು ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

Exit mobile version