Site icon Vistara News

Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

Accident Case

ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ಕಾರ್ಮಿಕರಿಬ್ಬರು ಪ್ರಾಣವನ್ನು (Accident Case) ಕಳೆದುಕೊಂಡಿದ್ದಾರೆ. ಹುಣಸೆ ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಕಬ್ಬಿಗೆರೆ ಗ್ರಾಮದಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಗುಡ್ಡದ ಜೋಗಿಹಳ್ಳಿ ಮೂಲದ ಮಂಜುನಾಥ್ (32) ಮೃತ ದುರ್ದೈವಿ.

ಕಬ್ಬಿಗೆರೆ ಗ್ರಾಮದಲ್ಲಿ ಜವರೇಗೌಡ ಎಂಬುವವರ ಜಮೀನಿನಲ್ಲಿ ಹುಣಸೆ ಹಣ್ಣನ್ನು ಕೀಳಲು ಮಂಜುನಾಥ್‌ ಹೋಗಿದ್ದರು. ಮಂಜುನಾಥ್ ಹುಣಸೆ ಹಣ್ಣು ಬಡಿಯಲು ಮರ ಹತ್ತಿದ್ದರು. ಮರ ಹತ್ತಿ ಕೋಲಿನಿಂದ ಹಣ್ಣು ಬಡಿಯುತ್ತಿದ್ದಾಗ ಆಯತಪ್ಪಿ ಮರದಿಂದ ಕೆಳಗೆ ಬಿದ್ದಿದ್ದಾರೆ.

ಮರದಿಂದ ಕೆಳಗೆ ಬಿದ್ದ ರಭಸಕ್ಕೆ ಮಂಜುನಾಥ್‌ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

ವಿದ್ಯುತ್ ಶಾಕ್‌ನಿಂದ ದಿನಗೂಲಿ ಕಾರ್ಮಿಕ ಸಾವು

ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರಿನ ಕ್ಯಾದಗೊಂಡನಹಳ್ಳಿಯಲ್ಲಿ ಅವಘಡ ನಡೆದಿದೆ. ನರೇಂದ್ರ ಕುಮಾರ್ (25) ಮೃತ ದುರ್ದೈವಿ. ನರೇಂದ್ರ ಕುಮಾರ್‌ ತುಮಕೂರಿನ ಮಧುಗಿರಿ ತಾಲೂಕಿನ ದೊಡ್ಡಯಲ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ.

ವಿದ್ಯುತ್ ತಂತಿಗೆ ಅಡ್ಡಿಯಾಗಿದ್ದ ಮರವನ್ನು ಕಡಿಯುವಾಗ ವಿದ್ಯುತ್ ಸ್ಪರ್ಶ ಆಗಿದೆ. ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ. ಇತ್ತ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಮಧುಗಿರಿ ಸರ್ಕಾರಿ ಆಸ್ಪತ್ರೆ ಎದುರು ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version