Blast in Bus : ತುಮಕೂರು ಬಳಿ ಗಣಪತಿ ಬಸ್ಸಿನಲ್ಲಿ ನಿಗೂಢ ಸ್ಫೋಟ; ಮುಸ್ಲಿಂ ಮಹಿಳೆ ವಿಚಾರಣೆ - Vistara News

ತುಮಕೂರು

Blast in Bus : ತುಮಕೂರು ಬಳಿ ಗಣಪತಿ ಬಸ್ಸಿನಲ್ಲಿ ನಿಗೂಢ ಸ್ಫೋಟ; ಮುಸ್ಲಿಂ ಮಹಿಳೆ ವಿಚಾರಣೆ

Blast in Bus : ತುಮಕೂರು ಸಮೀಪ ಖಾಸಗಿ ಬಸ್ಸಿನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಮುಸ್ಲಿಂ ಮಹಿಳೆಯೊಬ್ಬರು ಕೈಯಲ್ಲಿ ಹಿಡಿದುಕೊಂಡಿದ್ದ ಆಸಿಡ್‌ ಬಾಟಲಿ ಸ್ಫೋಟಗೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

VISTARANEWS.COM


on

Blast in Bus1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ತುಮಕೂರು: ತುಮಕೂರಿನ (Tumkur News) ಗೂಳೂರು ಎಂಬಲ್ಲಿ ಕುಣಿಗಲ್‌ನಿಂದ ತುಮಕೂರಿಗೆ ಬರುತ್ತಿದ್ದ ಶ್ರೀ ಗಣಪತಿ (Sri Ganapati Bus) ಎಂಬ ಹೆಸರಿನ ಖಾಸಗಿ ಬಸ್‌ನಲ್ಲಿ ಬುಧವಾರ ಸಂಜೆ ನಿಗೂಢ ಸ್ಫೋಟವೊಂದು (Blast in Bus) ಸಂಭವಿಸಿದ್ದು ಭಾರಿ ಆತಂಕಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮುಸ್ಲಿಂ ಮಹಿಳೆಯೊಬ್ಬರ (Muslim woman) ಕೈಯಲ್ಲಿದ್ದ ಆ್ಯಸಿಡ್ ಬಾಟಲ್ ಸ್ಫೋಟಗೊಂಡು (Acid Bottle Blast) ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ತುಮಕೂರು ತಾಲೂಕಿನ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ನಿಂದ ಬರ್ತಿದ್ದ ಮಹಿಳೆ ಶಕೀಲಾ ಬಾನು (48) ಕೈಯಲ್ಲಿ ಟಾಯ್ಲೆಟ್‌ಗೆ ಬಳಸುವ ಆ್ಯಸಿಡ್ ತುಂಬಿದ್ದ ಬಾಟಲನ್ನು ‌ ಹಿಡಿದುಕೊಂಡಿದ್ದರು ಎನ್ನಲಾಗಿದೆ. ಅದು ಒಮ್ಮೆಗೇ ಸ್ಫೋಟಗೊಂಡು ಸದ್ದಿನೊಂದಿಗೆ ಸಿಡಿದಿದೆ. ಘಟನೆಯಿಂದಾಗಿ ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಶಾಕ್‌ಗೆ ಒಳಗಾಗಿದ್ದಾರೆ. ಸಣ್ಣ ಪುಟ್ಟ ಗಾಯವಾದವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾರಿಗೂ ಪ್ರಾಣಾಪಾಯವಿಲ್ಲ.

Blast in Bus1

ಮೇಲ್ನೋಟಕ್ಕೆ ಇದು ಆಸಿಡ್‌ ಒತ್ತಡಕ್ಕೆ ಒಳಗಾಗಿ ಸ್ಫೋಟಿಸಿದೆ ಎಂದು ನಂಬಲಾಗಿದೆ. ಸದ್ಯ ಜಿಲ್ಲೆಯಲ್ಲಿ ಆಸಿಡ್‌ ಮಾರಾಟಕ್ಕೆ ನಿಷೇಧವಿದೆ. ಈ ಮಹಿಳೆ ತಾನು ಕೆಲಸ ಮಾಡುತ್ತಿದ್ದ ಗುಜರಿ ಅಂಗಡಿಯಿಂದ ಆ್ಯಸಿಡ್ ತಂದಿರುವುದಾಗಿ ಹೇಳಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : LPG Cylinder Blast: ವಿಜಯಪುರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರಿಗೆ ಗಂಭೀರ ಗಾಯ

ಗುಜರಿ ಅಂಗಡಿಯಲ್ಲಿ ಕೆಲಸಕ್ಕೆ ಇರುವ ಮಹಿಳೆಯ ವಿಚಾರಣೆ ಎಂದ ಎಸ್ಪಿ

ʻʻಇವತ್ತು ಸಂಜೆ 6.30ಕ್ಕೆ ನಮಗೆ ಒಂದು ಮಾಹಿತಿ ಬಂತು. ಒಂದು ಖಾಸಗಿ ಬಸ್ ಕುಣಿಗಲ್ ನಿಂದ ತುಮಕೂರಿಗೆ ಬರುತ್ತಿರುವಾಗ ಗೂಳೂರು ಬಸ್ ಸ್ಟಾಂಡ್ ಹತ್ತಿರ ಒಬ್ಬ ಮಹಿಳೆಯ ಬಳಿ ಇದ್ದ ಆ್ಯಸಿಡ್ ಬಾಟಲಿ ಚೆಲ್ಲಿ ಅಕ್ಕಪಕ್ಕದಲ್ಲಿದ್ದವರಿಗೆ ಗಾಯಗಳಾಗಿವೆ ಅನ್ನೋ ಮಾಹಿತಿ ಬಂತು. ತಕ್ಷಣವೇ ನಮ್ಮ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಶಕೀಲಾ ಬಾನು ಎಂಬ ಸುಮಾರು 48 ವರ್ಷ ವಯಸ್ಸಿನ ಮಹಿಳೆ ಗುಜರಿ ಅಂಗಡಿಯಲ್ಲಿ ಕೆಲಸ ಮಾಡ್ತಾ ಇದ್ದರು. ಅಲ್ಲಿಂದ ತುಮಕೂರಿಗೆ ಹೋಗುವಾಗ ಕೂಲ್ ಡ್ರಿಂಕ್ ಬಾಟಲಿಯಲ್ಲಿ ಆ್ಯಸಿಡ್ ತರುತ್ತಿದ್ದರು. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಘಟನೆಯ ಬಗ್ಗೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ವಿಸ್ತಾರ ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ.

Blast in Bus

ಎಫ್ಐಆರ್ ದಾಖಲಿಸಿ ಮಹಿಳೆಯ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇಂಡಸ್ಟ್ರೀಯಲ್ ಉದ್ದೇಶಕ್ಕೆ ಗುಜರಿ ಅಂಗಡಿಗಳಲ್ಲಿ ಆ್ಯಸಿಡ್ ಬಳಸಲು ಅನುಮತಿ ಇದೆ. ಆ ಅಂಗಡಿಯ ಲೈಸನ್ಸ್ ಕೂಡ ಚೆಕ್ ಮಾಡ್ತೀವಿ. ಒಂದು ವೇಳೆ ಸೂಕ್ತ ದಾಖಲಾತಿ ಇಲ್ಲದೇ ಇದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್‌ಪಿ ತಿಳಿಸಿದರು.

ಈ ನಡುವೆ ಬಸ್‌ನಲ್ಲಿ ಆ್ಯಸಿಡ್ ಸ್ಫೋಟಗೊಂಡ ಸ್ಥಳಕ್ಕೆ ಎಫ್ಎಸ್ ಎಲ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ ನೊಳಗೆ ಬಿದ್ದಿದ್ದ ಆ್ಯಸಿಡ್ ಮಾದರಿ ಕಲೆಹಾಕಿ ಪರಿಶೀಲನೆ ನಡೆದಿದೆ. ಆ್ಯಸಿಡ್ ಕೊಂಡೊಯ್ಯುತ್ತಿದ್ದ ಮಹಿಳೆಯ ಮೇಲೆ ಎಫ್ಐಆರ್ ದಾಖಲಿಸಲು ಪೊಲೀಸರು ಸಜ್ಜಾಗಿದ್ದಾರೆ.

ಮರಳೂರು ದಿಣ್ಣೆ ಮೂಲದ ಶಕೀಲಾ ಬಾನು ವಿರುದ್ಧ ಐಪಿಸಿ ಸೆಕ್ಷನ್ 285, 337 ಅಡಿಯಲ್ಲಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ. ಇದು ಬೆಂಕಿ ಅಥವಾ ದಹನಕಾರಿ ವಸ್ತುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ ಎಂಬ ಸೆಕ್ಷನ್‌ ಆಗಿದೆ. ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕ್ರಿಯೆ ಆರೋಪದಡಿ ಪ್ರಕರಣ ದಾಖಲಿಸಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬಿಸಿಲಿನ ತಾಪಕ್ಕೆ 32 ನವಿಲುಗಳ ಸಾವು: ತುಮಕೂರು ಜಿಲ್ಲೆಯಲ್ಲಿ ಹೀಟ್‌ಸ್ಟ್ರೋಕ್ ಭೀತಿ!

VISTARANEWS.COM


on

ತುಮಕೂರು: ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲು ಅಕ್ಷರಶಃ ಮೃತ್ಯುಕೂಪವಾಗಿ ಪರಿಣಮಿಸಿದ್ದು, ಕಳೆದ ಐದಾರು ದಿನಗಳಲ್ಲಿ ಬರೋಬ್ಬರಿ 32 ನವಿಲುಗಳು ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿಯಾಗಿದೆ. ತುಮಕೂರು ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ ಮತ್ತು ಹುಲ್ಲೆನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ 21ರ ಅವಧಿಯಲ್ಲಿ ಈ ರಾಷ್ಟ್ರಪಕ್ಷಿಗಳು ಮೃತಪಟ್ಟಿವೆ. ತೀವ್ರವಾಗಿ ಏರುತ್ತಿರುವ ತಾಪಮಾನ ಮತ್ತು ನೀರಿನ ಹಸಿವಿನಿಂದಾಗಿ ಉಂಟಾಗುವ ‘ಹೀಟ್‌ಸ್ಟ್ರೋಕ್’ (Heatsroke) ಈ ಸಾವಿಗೆ ಪ್ರಮುಖ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಒಂದೇ ಭಾಗದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನವಿಲುಗಳು ಬಲಿಯಾಗಿರುವುದು ಅರಣ್ಯ ಇಲಾಖೆ ಅಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಈ ಸಾವು ಕೇವಲ ಬಿಸಿಲಿನ ಧಗೆಯಿಂದ ಸಂಭವಿಸಿದೆಯೇ ಅಥವಾ ಯಾವುದಾದರೂ ಸಾಂಕ್ರಾಮಿಕ ರೋಗ ಹರಡಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ಖಚಿತತೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಪ್ರಯೋಗಾಲಯದ ವರದಿ ಬಂದ ನಂತರವಷ್ಟೇ ಸಾವಿನ ಹಿಂದಿನ ನಿಖರ ಕಾರಣ ಪತ್ತೆಯಾಗಲಿದೆ.

ಬಿಸಿಲಿನ ತಾಪದಿಂದ ವನ್ಯಜೀವಿಗಳನ್ನು ರಕ್ಷಿಸಲು ಅರಣ್ಯ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಟ್ಟಿಗಳನ್ನು ಭರ್ತಿ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ವ್ಯಾಪ್ತಿಯಲ್ಲಿ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪಕ್ಷಿ ಸಂಕುಲದ ಮೇಲೆ ಇದು ಗಂಭೀರ ಪರಿಣಾಮ ಬೀರುತ್ತಿದೆ. ವರದಿ ಬರುವವರೆಗೆ ಗ್ರಾಮಸ್ಥರು ಮತ್ತು ಅರಣ್ಯ ರಕ್ಷಕರು ಜಾಗೃತರಾಗಿರುವಂತೆ ಸೂಚಿಸಲಾಗಿದ್ದು, ಈ ಘಟನೆಯು ಜಿಲ್ಲೆಯಲ್ಲಿ ಭೀತಿ ಹುಟ್ಟಿಸಿದೆ.

Continue Reading

ಪ್ರಮುಖ ಸುದ್ದಿ

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಮೃತಪಟ್ಟರೆ, ಕೆರೆಗೆ ಕಾಲು ಜಾರಿ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ.

VISTARANEWS.COM


on

Medical negligence

ವಿಜಯನಗರ: ವೈದ್ಯರ ನಿರ್ಲಕ್ಷ್ಯಕ್ಕೆ ಐದು ವರ್ಷದ ಮಗು ಮೃತಪಟ್ಟಿರುವುದಾಗಿ (Medical Negligence) ಆರೋಪ ಕೇಳಿ ಬಂದಿದೆ. ಕುಶಾಲ್( 05) ಮೃತಪಟ್ಟವರು. ವಿಜಯನಗರದ ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ದಂಪತಿಯ ಮಗು ಕುಶಾಲ್‌ ಜ್ವರದಿಂದ ಬಳಲುತ್ತಿದ್ದ.

ಹೀಗಾಗಿ ಬೆಳಗ್ಗೆ 7 ಗಂಟೆಗೆ ಬಂದಾಗ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಇರಲಿಲ್ಲ. ಜ್ವರ ಹೆಚ್ಚಿದೆ ಅಂತ ಖಾಸಗಿ ಆಸ್ಪತ್ರೆಗೆ ರೇಫರ್ ಮಾಡಿದ್ದರು. ಆ ಖಾಸಗಿ ಆಸ್ಪತ್ರೆಯಿಂದ ಮತ್ತೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹೋಗಿದ್ದರು. ಮಗು ಚೆನ್ನಾಗಿದೆ ಅಂತ ಹೇಳಿ ವೈದ್ಯರು ಕಳಿಸಿದ್ದರು. ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಬರಲು ಜ್ವರ ಹೆಚ್ಚಿತ್ತು, ಬಂದಾಗ ತುರ್ತು ಚಿಕಿತ್ಸೆಗೆ ವೈದ್ಯರಿರಲಿಲ್ಲಾ ಅಂತ ಪೊಷಕರು ಆರೋಪಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತ ಮಗುವಿನ ತಾಯಿ ಗೋಳಾಟ ಜೋರಾಗಿತ್ತು. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಹಂಸ (19) ಮೃತ ದುರ್ದೈವಿ. ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ ನಿನ್ನೆ ರಜೆ ಹಿನ್ನೆಲೆಯಲ್ಲಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಅಲ್ಲೆ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು ಈ ವೇಳೆ ಕೆರೆ ಕೋಡಿ ನೋಡುವ ವೇಳೆ ಕಾಲು ಜಾರಿ ಬಿದ್ದಿದ್ದಾಳೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿ ಮೃತದೇಹ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ 766EEಯ ಹಾರೂಗಾರ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರ ಅಮ್ಮಿನಳ್ಳಿಯ ಅಡಳ್ಳಿ ಮೂಲದವರು ಎನ್ನಲಾಗಿದೆ. ಬೆಳಗಿನ ಜಾವ ಶಿರಸಿಯತ್ತ ತೆರಳುತ್ತಿದ್ದ ಬೈಕ್ ಸವಾರ, ರಸ್ತೆಯಂಚಿಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಆಂಬ್ಯುಲೆನ್ಸ್ ತಲುಪುವ ವೇಳೆಗಾಗಲೇ ಸವಾರ ಮೃತಪಟ್ಟಿದ್ದಾರೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಿವೈಡರ್‌ಗೆ ಕೇರಳ ಬಸ್‌; ಚಾಲಕ ಸ್ಪಾಟ್‌ ಡೆತ್‌

ಚಾಲಕನ ನಿಯಂತ್ರಣ ತಪ್ಪಿ ಕೇರಳ ಬಸ್‌ವೊಂದು ರೋಡ್ ಡಿವೈಡರ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಗೆಜ್ಜಲಗೆರೆ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೇರಳ ಬಸ್‌ ಚಾಲಕ ಹಸೀಬ್ (48) ಸ್ಥಳದಲ್ಲೇ ಮೃತಪಟ್ಟವರು. ಚಾಲಕನ ಮೃತದೇಹ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest17 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest18 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ18 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest19 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest21 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest23 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌