Site icon Vistara News

Accident | ತುಮಕೂರಿನಲ್ಲಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಯರಿದ್ದ ಆಟೊ ಪಲ್ಟಿ, ಐವರಿಗೆ ಗಾಯ

Accident

ತುಮಕೂರು: ತುಮಕೂರಿನಲ್ಲಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಯರನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ನಡೆದಿದೆ. ಚಾಲಕ ಹಾಗೂ ಆಟೋದಲ್ಲಿದ್ದ ಐವರು ಮಹಿಳೆಯರಿಗೆ ಗಂಭೀರ ಗಾಯವಾಗಿದೆ.
ತುಮಕೂರು ರಿಂಗ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಗಾರ್ಮೆಂಟ್ಸ್ ಕಂಪನಿಗೆ ಕೆಲಸಕ್ಕೆ ಹೋಗುತ್ತಿದ್ದ ಯಮುನಾ, ಕಮಲಾ, ಸವಿತಾ, ಲತಾ, ರೇಖಾ ಗಾಯಗೊಂಡರು.

ಹಠಾತ್‌ ಎದುರಾದ ಬೈಕ್ ನಡುವೆ ಅಪಘಾತ ತಪ್ಪಿಸಲು ಹೋಗಿ ಆಟೋ ಪಲ್ಟಿಯಾಯಿತು. ಪದೇ ಪದೇ ಈ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

Exit mobile version