ಶಿರಾ: ನಗರದ ಪ್ರೆಸಿಡೆನ್ಸಿ ಪಬ್ಲಿಕ್ ಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು ಕುರಿತು ಜಾಗೃತಿ ಕಾರ್ಯಕ್ರಮವನ್ನು (Awareness Programme) ಹಮ್ಮಿಕೊಳ್ಳಲಾಗಿತ್ತು.
ಶಿರಾ ಉಪ ವಿಭಾಗದ ಡಿವೈಎಸ್ಪಿ ಶೇಖರ್ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿದಿಸೆಯಿಂದಲೇ ಮಾದಕ ವಸ್ತುಗಳನ್ನು ಬಳಕೆ ಮಾಡದೇ, ಇತರರಲ್ಲೂ ಅದರ ದುಷ್ಪರಿಣಾಮ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳುಬೇಕು ಎಂದರೆ ದುಶ್ಚಟಗಳಿಂದ ದೂರವಿರಬೇಕು. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ, ಸಲಹೆ ನೀಡುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಲು ತಮ್ಮದೇ ಆದ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದನ್ನೂ ಓದಿ: Ranji Trophy: ಕರ್ನಾಟಕ ತಂಡ ಸೇರಿದ ವೇಗಿ ಪ್ರಸಿದ್ಧ್ ಕೃಷ್ಣ
ಶಿರಾ ನಗರ ಠಾಣೆಯ ಸಿಪಿಐ ಮಂಜುನಾಥ್ ಗೌಡ ಮಾತನಾಡಿ, ಇಂದು ಮಾದಕ ವಸ್ತುಗಳಿಗೆ ದಾಸರಾಗಿ ಸಂಸಾರಗಳನ್ನು ಹಾಳುಮಾಡಿಕೊಂಡು ಬೀದಿಪಾಲಾಗಿರುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಈಗಿನಿಂದಲೇ ಎಚ್ಚೆತ್ತು ಇಂತಹ ಪಿಡುಗುಗಳ ವಿರುದ್ಧ ಹೋರಾಟ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದರು.
ಇದನ್ನೂ ಓದಿ: NEET PG 2024: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ; ಹೊಸ ದಿನಾಂಕ ಘೋಷಣೆ
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಚಾರ್ಯ ಜಾರ್ಜ್ ಮ್ಯಾಥಿವ್, ಆಡಳಿತಾಧಿಕಾರಿ ಸಿದ್ಧೇಶ್ವರ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.