Site icon Vistara News

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

baby Death

ತುಮಕೂರು: ತುಮಕೂರು ರೈಲ್ವೆ ನಿಲ್ದಾಣದಲ್ಲಿ ಹಸೂಗೂಸಿನ ಶವವೊಂದು (Dead body) ಪತ್ತೆಯಾಗಿತ್ತು. ಪೊಲೀಸರು ಪ್ರಕರಣದ ತನಿಖೆಗಿಳಿದಾಗ, ಶವ ಸಾಗಿಸಲು (Baby Death) ಹಣವಿಲ್ಲದೆ ಪೋಷಕರು ರೈಲ್ವೆ ನಿಲ್ದಾಣದಲ್ಲಿ (Tumkur railway station) ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕಳೆದ 27ರಂದು ತುಮಕೂರು ರೈಲ್ವೆ ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಹಸೂಗೂಸಿನ ಶವ ಪತ್ತೆಯಾಗಿತ್ತು. ಇದನ್ನೂ ಗಮನಿಸಿದ ಪ್ರಯಾಣಿಕರು ಕೂಡಲೇ ಪೊಲೀಸರಿಗೆ ‌ಮಾಹಿತಿ ನೀಡಿದ್ದರು. ತನಿಖೆಗಿಳಿದ ಪೊಲೀಸರು ಹಸುಗೂಸಿನ ಕೈಗೆ ಹಾಕಿದ್ದ ಟ್ಯಾಗ್‌ನಿಂದ ಪೋಷಕರ ಸುಳಿವು ಸಿಕ್ಕಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕುಂದರ್ತಿ ಮಂಡಲದ ಅಂಬಿಕಾಗೆ ಎಂಬುವವರಿಗೆ ಇದೇ ತಿಂಗಳ 23ರಂದು ಪಾವಗಡ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಮಗುವಿಗೆ ಉಸಿರಾಟದ ತೊಂದರೆ ಇದ್ದ ಕಾರಣಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಂಬಿಕಾಳ ಪತಿ ಜತೆಗೆ ಆಕೆ ತಾಯಿಯು ಮಗುವನ್ನು ಆಸ್ಪತ್ರೆಗೆ ಕರೆತಂದಿದ್ದರು.

ಈ ವೇಳೆ ಆಸ್ಪತ್ರೆ ಖರ್ಚಿಗೆ ಹಣ ತರಲು ಮಗುವಿನ ತಂದೆ ಬೆಂಗಳೂರಿಗೆ ಹೋಗಿದ್ದರು. ಆದರೆ ಅನಾರೋಗ್ಯದಿಂದ ಹಸುಗೂಸು ಮೃತಪಟ್ಟಿತ್ತು. ಇತ್ತ ಮಗುವಿನ ಅಜ್ಜಿ ಊರಿಗೆ ಶವ ಸಾಗಿಸಲು ಹಣವಿಲ್ಲದೇ ರೈಲು ನಿಲ್ದಾಣದಲ್ಲಿಯೇ ಬಿಟ್ಟು ಹೋಗಿದ್ದರು. ಸದ್ಯ ತನಿಖೆ ನಡೆಸಿ ಮೃತ ಮಗುವಿನ ಪೋಷಕರ ವಿಳಾಸ ಪತ್ತೆ ಹಚ್ಚಿರುವ ತಿಲಕ್ ಪಾರ್ಕ್ ಪೊಲೀಸರು, ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಇದನ್ನೂ ಓದಿ: Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು

ಬೆಂಗಳೂರು: ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶು (Newborn Baby) ಪತ್ತೆಯಾಗಿದೆ. ಜನಿಸಿದ ನಾಲ್ಕೈದು ಗಂಟೆಯಲ್ಲೇ ಗಂಡು ಮಗುವೊಂದು ನರಳಾಡಿ ಪ್ರಾಣ ಬಿಟ್ಟಿದೆ. ಪಾಪಿ ತಾಯಿಯೊಬ್ಬಳು ರೈಲಿನಲ್ಲೇ ಹೆರಿಗೆಯಾಗಿ ಡಸ್ಟ್ ಬಿನ್‌ನಲ್ಲೇ ಶಿಶುವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಅಮಾನವೀಯ ಕೃತ್ಯಕ್ಕೆ ಎಲ್ಲೆಡೆ ವ್ಯಾಪಕ ಟೀಕೆಗಳು (Yelahanka Railway ) ವ್ಯಕ್ತವಾಗಿವೆ.

ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಬುಧವಾರ ಮುಂಜಾನೆ ಭುವನೇಶ್ವರದಿಂದ ಬೆಂಗಳೂರಿಗೆ ಬಂದಿದ್ದ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ರೂರಿ ತಾಯಿಯೊಬ್ಬಳು ಗಂಡು ಮಗುವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಕಸದ ಬುಟ್ಟಿಯಲ್ಲಿ ಹಾಕಿ ಹೋಗಿದ್ದಾಳೆ.

ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹ ಕಂಡ ಪ್ರಯಾಣಿಕರೊಬ್ಬರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಯಶವಂತಪುರ ರೈಲ್ವೆ ಪೊಲೀಸರು ಮೃತದೇಹವನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮಗು ಯಾರದ್ದು? ಯಾರು ಬಿಸಾಡಿ ಹೋಗಿರುವುದು ಎಂದು ತಿಳಿಯಲು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version