ತುಮಕೂರು: ಬಾಯ್ಲರ್ ಸ್ಪೋಟಗೊಂಡು (Boiler Blast) ಕಾರ್ಮಿಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಘಟನೆ ನಡೆದಿದೆ. ಕೊರಟಗೆರೆಯ ಶ್ರೀಕಂಠೇಶ್ವರ ಮಿಲ್ಕ್ -ಪುಣ್ಯಕೋಟಿ ಮಜ್ಜಿಗೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ.
ಕೊರಟಗೆರೆ ತಾಲೂಕಿನ ಮಲ್ಲೇಶಪುರದ ನಿವಾಸಿ ಯತೀಶ್ ಎಂಬುವವರಿಗೆ ಸುಟ್ಟಗಾಯಗಳಾಗಿವೆ. ಬಾಯ್ಲರ್ ಸ್ಫೋಟದ ರಭಸಕ್ಕೆ ಯತೀಶ್ ಮೈ ಪೂರ್ತಿ ಸುಟ್ಟಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಯರ್ ಸ್ಫೋಟವು ಮುಖಕ್ಕೆ ಸಿಡಿದಿದ್ದು, ಕಣ್ಣಿಗೂ ಹಾನಿಯಾಗಿದೆ. ಸುಟ್ಟಗಾಯಗಳಿಂದ ಯತೀಶ್ ನರಳಾಟ ಮುಂದುವರಿದಿದೆ.
ಫೋನ್ ಕಸಿದು ಕೊಳ್ಳಲು ಯತ್ನ
ಇನ್ನೂ ವಿಡಿಯೊ ಚಿತ್ರಿಕರಣ ಮಾಡಲು ಹೋದವರ ಮೇಲೆ ಕಾರ್ಖಾನೆ ಮಾಲೀಕ ಅವಾಜ್ ಹಾಕಿದ್ದು, ಪೋನ್ ಕಸಿದುಕೊಳ್ಳಲು ಯತ್ನಿಸಿದ್ದಾನೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಯರ್ ಸ್ಫೋಟ ಯಾಕೆ ಆಯಿತು? ಕಾರ್ಖಾನೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ವಾ? ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್ ಜಡಿದ ಪೊಲೀಸರು!
ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ- ಐವರು ಗಂಭೀರ
ರಾಜಧಾನಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡ್ ಸ್ಫೋಟಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ರಾಕೇಶ್, ಕೃಷ್ಣ, ಹರಿರಾಮ್, ರಾಮ್ ಧನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಗಾಯಾಳುಗಳು ಮೂಲತಃ ಉತ್ತರ ಪ್ರದೇಶದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು.
ಬೆಳಗ್ಗೆ ಕೆಲಸಕ್ಕೆ ಹೋಗಲು ತಿಂಡಿ ಸಿದ್ಧ ಮಾಡುತ್ತಿದ್ದಾಗ ಸಿಲಿಂಡರ್ ಬ್ಲಾಸ್ ಆಗಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಜಿ ರಸ್ತೆಯಲ್ಲಿ ಸುಟ್ಟು ಭಸ್ಮವಾದ ಬಿಎಂಟಿಸಿ ಬಸ್
ಬೆಂಗಳೂರು: ರಾಜಧಾನಿಯ ಜನನಿಬಿಡ ಹಾಗೂ ವಾಹನನಿಬಿಡವಾದ ಎಂಜಿ ರೋಡ್ (MG Road) ನಟ್ಟ ನಡುವೆ ಬಿಎಂಟಿಸಿ ಬಸ್ (BMTC Bus Fire) ಒಂದು ಇಂದು ಬೆಳಗ್ಗೆ ಬೆಂಕಿಯ ಕೆನ್ನಾಲಗೆಗೆ ಸುಟ್ಟು ಭಸ್ಮವಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ರೋಸ್ ಗಾರ್ಡನ್‌ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿದ್ದ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತುಕೊಂಡ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರು ಪ್ರಯಾಣಿಕರನ್ನು ಕೆಳಗೆ ಇಳಿಸಿದರು. ಬಸ್ಸಿನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ಚಾಲಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಧಾವಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ