ತುಮಕೂರು: ಕೆಪಿಸಿಸಿ ಅಧಯಕ್ಷ ಸ್ಥಾನವನ್ನು ನಿಭಾಯಿಸಲು ಡಿ.ಕೆ. ಶಿವಕುಮಾರ್ ಅವರು ಹೆಣಗಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪರಮೇಶ್ವರ್ ಭಾಷಣ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನಾನು ಸತತವಾಗಿ 8 ವರ್ಷಗಳ ಕಾಲ ಕುಳಿತು ನಿಭಾಯಿಸಿದ್ದೇನೆ. ಅದು ಅಷ್ಟು ಸುಲಭದ ಮಾತಲ್ಲ. ಕಾಂಗ್ರೆಸ್ ಪಕ್ಷವೇ ನನ್ನ ಮೇಲೆ ನಂಬಿಕೆಯಿಟ್ಟು, ಅಷ್ಟು ದೊಡ್ಡ ಜವಾಬ್ದಾರಿಯನ್ನು ನೀಡಿತ್ತು. ಆದರೆ ಈಗ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಆ ಸ್ಥಾನವನ್ನು ನಿಭಾಯಿಸಲು ಒಮ್ಮೊಮ್ಮೆ ಗಾಬರಿಪಡುತ್ತಾರೆ. ಇಡೀ ರಾಜ್ಯದಲ್ಲಿ ಪಕ್ಷದ ಆಗುಹೋಗುಗಳನ್ನು ನಿಭಾಯಿಸಲು ಡಿ.ಕೆ. ಶಿವಕುಮಾರ್ ಕೂಡ ಹೆಣಗಾಡುತ್ತಿದ್ದಾರೆ. ನಾವೆಲ್ಲರೂ ಇದ್ದೇವೆ ಎಂದು ನಾನು ಧೈರ್ಯ ಕೊಡುತ್ತೇನೆ ಎಂದಿದ್ದಾರೆ.
ಪರಮೇಶ್ವರ್ ಈ ಮಾತನ್ನು, ಕೆಪಿಸಿಸಿ ಅಧ್ಯಕ್ಷರ ಕಾರ್ಯದ ಒತ್ತಡದ ಕುರಿತು ಹೇಳಿದಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದರೆ ಅವರು ಇದನ್ನು ಡಿ.ಕೆ. ಶಿವಕುಮಾರ್ ಅವರ ಸಾಮರ್ಥ್ಯವನ್ನು ಪ್ರಶ್ನಿಸಲು ಹೇಳಿದ್ದಾರೆಯೋ ಅಥವಾ ಅಧ್ಯಕ್ಷರ ಮೇಲೆ ಅನಗತ್ಯ ಒತ್ತಡವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಣ ಹೇರುತ್ತಿದೆ ಎಂದು ಸೂಚ್ಯವಾಗಿ ತಿಳಿಸಿದ್ದಾರೆಯೇ ಎಂದು ಪಕ್ಷದ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.
ಇದನ್ನೂ ಓದಿ | DK Shivakumar | ದುಬೈನಲ್ಲಿ ಜಾಲಿ ಮೂಡ್‌ನಲ್ಲಿರುವ ಡಿ.ಕೆ ಶಿವಕುಮಾರ್, ಶಾಸಕ ಹ್ಯಾರಿಸ್ ನಲಪಾಡ್ ಸಾಥ್