Site icon Vistara News

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Due to heavy rain in Shira water entered houses and shops

ಶಿರಾ: ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, (Heavy Rain) ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭಾನುವಾರ ಸಂಜೆಯಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಇಲ್ಲಿನ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ ಚರಂಡಿಗಳಲ್ಲಿ ಮಳೆ ನೀರು ಸುಗಮವಾಗಿ ಹರಿದು ಹೋಗದ ಕಾರಣ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

ಇದನ್ನೂ ಓದಿ: IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಇನ್ನು ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿ ಕೆಲ ಮನೆಗಳಿಗೆ ಮಳೆ ನೀರು ನುಗ್ಗಿ, ಮನೆಯಲ್ಲಿನ ಆಹಾರ ಪದಾರ್ಥಗಳು, ವಿದ್ಯುತ್‌ ಉಪಕರಣಗಳು ಸೇರಿದಂತೆ ಇತರೆ ವಸ್ತುಗಳು ನೀರು ಪಾಲಾಗಿವೆ.

ನಗರದ 18ನೇ ವಾರ್ಡ್‌ನ ದೊಡ್ಡಕೆರೆ ಅಂಗಳದ ಬಳಿ ಭಾರೀ ಮಳೆಗೆ ಚರಂಡಿಯಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ಆಕಳ ಕರುವನ್ನು ಸ್ಥಳೀಯ ಯುವಕರು ರಕ್ಷಿಸಿ, ಚರಂಡಿಯಿಂದ ಹೊರ ತೆಗೆದಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಇದನ್ನೂ ಓದಿ: Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Exit mobile version