ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಭಸ್ಮ - Vistara News

ತುಮಕೂರು

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಭಸ್ಮ

ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ನಡೆದ ಘಟನೆ | ಸತತ ಮಳೆಯಿಂದ ತೇವಗೊಂಡಿದ್ದ ಕಟ್ಟಡ | 10 ಲಕ್ಷ ರೂ. ಮೌಲ್ಯದ ವಸ್ತುಗಳು ಆಹುತಿ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಮಳೆಯಿಂದ ತೇವಗೊಂಡಿದ್ದರಿಂದ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ಸಂಭವಿಸಿ ಹೋಟೆಲ್‌ ಒಂದು ಭಸ್ಮವಾದ ಘಟನೆ ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಶನಿವಾರ ಸಂಭವಿಸಿದೆ.

ಗುಬ್ಬಿಯ ತಾಲೂಕು ಕಚೇರಿಯ ಮುಂಭಾಗದಲ್ಲಿದ್ದ ಗೌರಮ್ಮ ಹೋಟೆಲ್‌ನಲ್ಲಿ ಶುಕ್ರವಾರ ಮಧ್ಯರಾತ್ರಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿತ್ತು. ಇದ್ದಕ್ಕಿದ್ದಂತೆಯೇ ಈ ಬೆಂಕಿ ಹೋಟೆಲ್‌ ಅನ್ನು ಆವರಿಸಿಕೊಂಡಿದ್ದು, ಒಳಗಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿವೆ. ಸಾವಿರಾರು ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿ, ಅಡುಗೆ ಪದಾರ್ಥಗಳು, ಪ್ರಿಡ್ಜ್‌, ಪಾತ್ರೆಗಳು ಸುಟ್ಟು ಹೋಗಿವೆ. ಸುಮಾರು 10 ಲಕ್ಷ ರೂಪಾಯಿ ನಷ್ಟವಾಗಿರಬಹುದೆಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳದವರು ಬಂದು ಬೆಂಕಿಯನ್ನು ಆರಿಸಿದರು. ಆದರೂ ನಷ್ಟ ತಪ್ಪಿಸಲಾಗಿಲ್ಲ. ಆದರೆ ಬೆಂಕಿಯು ಬೇರೆಡೆ ಹರಡುವ ಅಪಾಯವನ್ನು ತಪ್ಪಿಸಲಾಯಿತೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಗುಬ್ಬಿ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ| ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹುಲ್ಲಿನ ಬಣವೆಗೆ ಬೆಂಕಿ

ಮಳೆಯಿಂದಾಗಿ ಕಟ್ಟಡ ತೇವಗೊಂಡಿದ್ದರಿಂದ ಈ ಶಾರ್ಟ್‌ ಸರ್ಕ್ಯೂಟ್ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಬೆಸ್ಕಾಂಗೆ ಮಾಹಿತಿ ನೀಡಿದರೂ ಸಿಬ್ಬಂದಿ ಸಕಾಲದಲ್ಲಿ ಸ್ಥಳಕ್ಕೆ ಹಾಜರಾಗಿರಲಿಲ್ಲ ಎಂದು ಪ್ರತ್ಯಕ್ಷ ದರ್ಶಿಗಳು ದೂರಿದ್ದಾರೆ. ಮಧ್ಯರಾತ್ರಿ ಅನಾಹುತ ಸಂಭವಿಸಿದ್ದರಿಂದ ಜೀವ ಹಾನಿಯಾಗಿಲ್ಲ.

ಮಂಜುನಾಥ್ ಎನ್ನುವವರಿಗೆ ಸೇರಿದ ಹೋಟೆಲ್ ಇದಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪಂಚಾಯತ್‌ನ ಸದಸ್ಯರು, ಹೋಟೆಲ್‌ ಮಾಲಿಕರ ಸಂಘದ ಪದಾಧಿಕಾರಿಗಳು ಕೂಡ ಭೇಟಿ ನೀಡಿದ್ದರು.

ಇದನ್ನೂ ಓದಿ| ದೆಹಲಿ ಅಗ್ನಿ ದುರಂತ: 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ; 27 ಸಾವು, 19 ಜನ ನಾಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ತುಮಕೂರು

Tumkur News: ಜೂ. 9ಕ್ಕೆ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ವಾರ್ಷಿಕೋತ್ಸವ

Tumkur News: ಕೊರಟಗೆರೆ ತಾಲೂಕಿನ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವಾರ್ಷಿಕೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ಮತ್ತು ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತ್ಯೋತ್ಸವ, ಉಚಿತ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶವನ್ನು ಜೂ.9 ರಂದು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Shrikhshetra Siddrabetta Balehonnur Khasa Shakha Math 18th year Anniversary on June 9 says sri veerabhadra shivacharya swamiji
Koo

ಕೊರಟಗೆರೆ: ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವಾರ್ಷಿಕೋತ್ಸವವನ್ನು ಜೂ.9ರಂದು ಆಯೋಜನೆ ಮಾಡಲಾಗಿದೆ ಎಂದು ಸಿದ್ದರಬೆಟ್ಟದ ಶ್ರೀಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ (Tumkur News) ತಿಳಿಸಿದರು.

ತಾಲೂಕಿನ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ 18ನೇ ವಾರ್ಷಿಕೋತ್ಸವದ ಪೂರ್ವಭಾವಿ ಸಭೆಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಠದ ಸದ್ಭಕ್ತರ ಸಹಕಾರದಿಂದ ಶ್ರೀ ಮಠದ 18ನೇ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶ್ರೀ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು ದೇಶ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲಿ ಉನ್ನತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಬಂಗಾರ ಖರೀದಿಸುವವರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್‌

ಇನ್ಪೋಸಿಸ್ ಫೌಂಡೇಶನ್‌ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರ ಸಲಹೆಯಂತೆ ಕಳೆದ 17 ವರ್ಷಗಳಿಂದಲೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದ್ದು, ಸುಮಾರು 800ಕ್ಕೂ ಹೆಚ್ಚು ವಿವಾಹಗಳು ನಡೆದಿದೆ. ಇದರಿಂದ ಸಾಕಷ್ಟು ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದರು.

ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ಮತ್ತು ಸಿದ್ದರಬೆಟ್ಟದ ಶ್ರೀಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ 18ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯರ ಮತ್ತು ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತ್ಯೋತ್ಸವ, ಉಚಿತ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶ ನಡೆಯಲಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

ಈ ಸಂದರ್ಭದಲ್ಲಿ ತುಮಕೂರು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮೋಹನ್‌ ಕುಮಾರ್, ತಾಲೂಕು ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ನಾಗರಾಜು, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಾಗರಾಜು, ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ದರ್ಶನ್, ಪರ್ವತಯ್ಯ ಸೇರಿದಂತೆ ಮಠದ ಭಕ್ತರು ಹಾಜರಿದ್ದರು.

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Self Harming: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಜರುಗಿದೆ. ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಜಮೀನಿನಲ್ಲಿ 5 ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

VISTARANEWS.COM


on

farmer commits suicide in Kabbigere Gollarhatti village
Koo

ಕೊರಟಗೆರೆ: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು, ಜಮೀನಿನಲ್ಲಿ 5ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಕಳೆದ ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣದ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು. ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ? ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು. ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.

Continue Reading
Advertisement
70.94 percent voting in Koppal Lok Sabha constituency says Koppal DC Nalin Atul
ಕೊಪ್ಪಳ26 mins ago

Lok Sabha Election 2024: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94ರಷ್ಟು ಮತದಾನ

Rampura PSI Mahesh Hosapete admitted to the hospital Hanagal village road accident injured persons
ಕರ್ನಾಟಕ29 mins ago

Road Accident: ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸಿದ ಪಿಎಸ್‌ಐ

Lok Sabha Election 2024
ಕರ್ನಾಟಕ38 mins ago

Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

Mayawati
ಪ್ರಮುಖ ಸುದ್ದಿ55 mins ago

Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

IPL 2024
ಪ್ರಮುಖ ಸುದ್ದಿ1 hour ago

IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

Music Festival
ಬೆಂಗಳೂರು1 hour ago

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Amanatullah Khan
ದೇಶ2 hours ago

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Yuzvendra Chahal
ಕ್ರಿಕೆಟ್2 hours ago

Yuzvendra Chahal : ಟಿ20 ವಿಕೆಟ್​​ಗಳ ಗಳಿಕೆಯಲ್ಲಿ ನೂತನ ದಾಖಲೆ ಬರೆದ ಸ್ಪಿನ್ನರ್ ಯಜ್ವೇಂದ್ರ ಚಹಲ್​

Bescom Helpline
ಕರ್ನಾಟಕ2 hours ago

BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

Nissan India
ಆಟೋಮೊಬೈಲ್2 hours ago

Nissan India : ಉಚಿತ ಏಸಿ ರಿಪೇರಿ ಮಾಡಿಸಿಕೊಳ್ಳಲು ನಿಸ್ಸಾನ್ ಕಾರು ಮಾಲೀಕರಿಗೆ ಇಲ್ಲಿದೆ ಅವಕಾಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ4 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ7 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ9 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌