Site icon Vistara News

Fire Accident: ಬೆಂಚೆ ಗ್ರಾಮದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಗುಡಿಸಲು, ಅಂಗಡಿ

Box shop and hut burnt due to fire accident in Benche village

ಶಿರಾ: ಆಕಸ್ಮಿಕ ಅಗ್ನಿ ಅವಘಡ (Fire Accident) ಸಂಭವಿಸಿ, ಗುಡಿಸಲು ಮತ್ತು ಪೆಟ್ಟಿಗೆ ಅಂಗಡಿಯೊಂದು ಸುಟ್ಟು ಭಸ್ಮವಾಗಿರುವ ಘಟನೆಯು ಶಿರಾ ತಾಲೂಕಿನ ಕಳ್ಳಂಬೆಳ್ಖ ಹೋಬಳಿಯ ಬೆಂಚೆ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ಬೆಂಚೆ ಗ್ರಾಮದ ಶಿವಣ್ಣ ಎಂಬುವವರಿಗೆ ಸೇರಿದ ಗುಡಿಸಲು, ಪೆಟ್ಟಿಗೆ ಅಂಗಡಿಯು ಸುಟ್ಟು ಭಸ್ಮವಾಗಿದೆ. ಗ್ಯಾಸ್‌ ಸಿಲಿಂಡರ್‌ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಪೆಟ್ಟಿಗೆ ಅಂಗಡಿಗೆ ಹೊಂದಿಕೊಂಡಿದ್ದ ಗುಡಿಸಲಿಗೂ ಬೆಂಕಿ ಹೊತ್ತಿಕೊಂಡು ಗುಡಿಸಲೂ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

ಬೆಂಕಿ ದುರಂತದಿಂದ ಪೆಟ್ಟಿಗೆ ಅಂಗಡಿ ಹಾಗೂ ಗುಡಿಸಲಿನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳಂಬೆಳ್ಖ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version