Site icon Vistara News

CP Moodalagiriyappa : 4 ಬಾರಿ ಗೆದ್ದಿದ್ದ ಚಿತ್ರದುರ್ಗದ ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ ಇನ್ನಿಲ್ಲ

CP Moodalagiriyappa death News

ಶಿರಾ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ (Chitradurga Lokasabha Constituency) ಮಾಜಿ ಸಂಸದ ಹಾಗೂ ಶಿರಾ ಕ್ಷೇತ್ರದ ಮಾಜಿ ಶಾಸಕ ಸಿಪಿ.ಮೂಡಲಗಿರಿಯಪ್ಪ (CP Moodalagiriyappa) ನಿಧನರಾಗಿದ್ದಾರೆ. ಅವರಿಗೆ 85 ವರ್ಷ ಆಗಿತ್ತು. ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದರು. ಶಿರಾ ಕ್ಷೇತ್ರದ ಒಂದು ಬಾರಿ ಶಾಸಕರಾಗಿದ್ದರು.

ಸಿ.ಪಿ.ಮೂಡಲಗಿರಿಯಪ್ಪ ಅವರಿಗೆ ಉಸಿರಾಟದ ತೀವ್ರ ಸಮಸ್ಯೆ ಉಂಟಾದ ಕಾರಣ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಶನಿವಾರ ಶನಿವಾರ ಮಧ್ಯಾಹ್ನ 1 ಗಂಟೆಗೆ ನಿಧನರಾದರು. ಸಿ.ಪಿ.ಮೂಡಲಗಿರಿಯಪ್ಪ ಅವರಿಗೆ ಪತ್ನಿ, ಪುತ್ರ, ಮಾಜಿ ಶಾಸಕ ರಾಜೇಶ್‌ ಗೌಡ ಮತ್ತು ಪುತ್ರಿಯರಿದ್ದಾರೆ. ತಾಲೂಕಿನ ಚಿರತಹಳ್ಳಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಅವರ ಅಣ್ಣನ ಮಗ ಪ್ರಕಾಶ್ ಗೌಡ
ತಿಳಿಸಿದ್ದಾರೆ.

ಮೂಡಲಗಿರಿಯಪ್ಪ ರಾಜಕೀಯ ಬದುಕು

ಮೂಡಲಗಿರಿಯಪ್ಪ ಅವರು ಮೂಲತಃ ತುಮಕೂರು ಜಿಲ್ಲೆಯ (Tumkur News) ಶಿರಾ ತಾಲ್ಲೂಕು ಚಿರತಹಳ್ಳಿ ಗ್ರಾಮದವರಾಗಿದ್ದು, ಜೂನ್ 24, 1940ರಂದು ಜನಿಸಿದರು. ಇವರು ತಮ್ಮ ಶಿಕ್ಷಣವನ್ನು ಸರ್ಕಾರಿ ಕಾನೂನು ಕಾಲೇಜು ಮತ್ತು ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು (ಕರ್ನಾಟಕ)ದಿಂದ ಬಿಎ ಮತ್ತು ಬಿಎಲ್‌ನಲ್ಲಿ ಪೂರ್ಣಗೊಳಿಸಿದರು.

ಇದನ್ನೂ ನೋಡಿ : Death News : ಕಟ್ಟಿಂಗ್​ ಮೆಷಿನ್​ ಉಲ್ಟಾ ಹೊಡೆದು ಕಾರ್ಮಿಕನ ಕುತ್ತಿಗೆ ಕಟ್ ​​

ಕಾಂಗ್ರೆಸ್‌ನಲ್ಲಿ ಹಲವು ಹುದ್ದೆ, ಸಂಸದರಾಗಿ ಜವಾಬ್ದಾರಿ

1989-1991ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ನಂತರ 1991-1996ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 2ನೇ ಬಾರಿಗೆ ಸಂಸದರಾಗಿ ಆಯ್ಕೆಯಾದರು. 1979 ಮತ್ತು 1982 ಜಿಲ್ಲಾ ಕಾಂಗ್ರೆಸ್ ಸಮಿತಿ (ಇಂದಿರಾ) ಡಿಸಿಸಿ (ಐ), ಕರ್ನಾಟಕ ಪ್ರಧಾನ ಕಾರ್ಯದರ್ಶಿಯಾಗಿದ್ದರು. 1979 ಮತ್ತು 1989ರಲ್ಲಿ ಕರ್ನಾಟಕದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಇಂದಿರಾ) ಪಿಸಿಸಿ (ಐ) ಕಾನೂನು ಕೋಶದ ಅಧ್ಯಕ್ಷರಾಗಿದ್ದರು.

ನಂತರ 1980ರಲ್ಲಿ ಕರ್ನಾಟಕ ಸರ್ಕಾರದಲ್ಲಿ ಸಂವಿಧಾನ ತಿದ್ದುಪಡಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇದಾದ ಬಳಿಕ 1985 ಮತ್ತು 1989 ಶಿರಾ ಕ್ಷೇತ್ರದ ವಿಧಾನಸಭಾ ಸದಸ್ಯರಾದರು. ಜೊತೆಗೆ ಅಧೀನ ಶಾಸನ ಸಮಿತಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದರು. 1989 ಹಾಗೂ 1991 ಚಿತ್ರದುರ್ಗದಿಂದ 9ನೇ ಲೋಕಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು. ಇದರ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕವಾದರು.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಮಾಜಿ ಸಂಸದರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಕುಟುಂಬದೊಂದಿಗೆ ಹೆಚ್ಚು ಒಡನಾಟ ಹೊಂದಿದ್ದರು. ಸಿಪಿ ಮೂಡಲಗಿರಿಯಪ್ಪನವರ
ಪುತ್ರ ಮಾಜಿ ಶಾಸಕ ರಾಜೇಶ್‌ ಗೌಡ ಹಾಗೂ ಮೂಡಲಗಿರಿಯಪ್ಪನವರ ಅಣ್ಣ ಸಿ.ಪಿ. ಮೂಡ್ಡೆಗೌಡ
ಕೂಡ ಶಿರಾ ಕ್ಷೇತ್ರದ ಶಾಸಕರಾಗಿ ಸೇವೆ ಮಾಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಮಾಜಿ ಸಂಸದ ಮೂಡಲಗಿರಿಯಪ್ಪ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಪಕ್ಷದ ಕಟ್ಟಾಳು ಮೂಡಲಗಿರಿಯಪ್ಪ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಮೂಡಲಗಿರಿಯಪ್ಪ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 2 ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾಗಿ, ಕೆಪಿಸಿಸಿ ಕಾನೂನು ಕೋಶದ ಅಧ್ಯಕ್ಷರಾಗಿ ಅತ್ಯಂತ ಸಮರ್ಥವಾಗಿ ಹುದ್ದೆಗಳನ್ನು ನಿಭಾಯಿಸಿದ್ದರು. 1985 ಮತ್ತು 1989 ಸಿರಾ ಕ್ಷೇತ್ರದ ವಿಧಾನಸಭಾ ಸದಸ್ಯರಾಗಿ, ಅಧೀನ ಶಾಸನ ಸಮಿತಿಯ ಸದಸ್ಯರಾಗಿ ಮತ್ತು ಸಂಸತ್ತಿನ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ಕರ್ನಾಟಕದ ಪರವಾಗಿ ಸಂಸತ್ತಿನಲ್ಲಿ ದನಿ ಎತ್ತಿದವರು.ಇವರ ಆತ್ಮಕ್ಕೆ ಶಾಂತಿ ದೊರೆಯಲಿ. ಇವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದ್ಯರು ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಈ ಮೂಲಕ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ.

Exit mobile version