Site icon Vistara News

ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರದ ಆದ್ಯತೆ: ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಶಿಕ್ಷಕರು ಸಿದ್ಧರಾಗಿ ವಿದ್ಯಾರ್ಥಿಗಳನ್ನು ತಯಾರು ಮಾಡಬೇ. ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದ್ದಾರೆ. ತುಮಕೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಂಪ್ರೆಸ್ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವದಲ್ಲಿ ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

ಶಾಲಾ ಶಿಕ್ಷಕರ ಕೊರತೆ ಕಡಿಮೆ ಮಾಡಲು ಸರ್ಕಾರ ಎಲ್ಲ ಪ್ರಯತ್ನ ಮಾಡುತ್ತಿದೆ. ಪ್ರಾಥಮಿಕ ಶಾಲೆಗೆ 15,000 ಹಾಗೂ ಪ್ರೌಢಶಾಲೆಗೆ 2,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದೆ. ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ.

ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಶಾಲೆಗಳಲ್ಲಿ ಕ್ರೀಡೆಗೆ ಇನ್ನೂ ಹೆಚ್ಚಿನ ಒತ್ತು ನೀಡುವ ಭರವಸೆ ನೀಡಿದರು. ಕ್ರೀಡೆಗಾಗಿ ಈ ವರ್ಷ ₹10 ಕೋಟಿ ಮೀಸಲಿಟ್ಟಿದ್ದೀವಿ ಎಂದು ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಬಿ.ಸಿ ನಾಗೇಶ್ ಮಾತನಾಡಿ, ಕಲಿಕಾ ಚೇತರಿಕೆ ಕಾರ್ಯಕ್ರಮ ಕೇವಲ 15 ದಿನದ ಕಾರ್ಯಕ್ರಮ ಅಲ್ಲ, ಪೂರ್ಣ ವರ್ಷದ ಕಾರ್ಯಕ್ರಮ. ಮೊದಲ ಮೂರು ತಿಂಗಳ ಕಾಲ ವಿದ್ಯಾಪ್ರವೇಶ ಕಾರ್ಯಕ್ರಮ ಮಾಡುತ್ತೇವೆ. 9ನೇ ತರಗತಿವರೆಗಿನ ಹಿಂದಿನ ಎರಡು ವರ್ಷದ ಸಿಲೆಬಸ್ ಅನ್ನು ತಿಳಿಸುವ ಪ್ರಯತ್ನ ಮಾಡುತ್ತೇವೆ‌. ಮಕ್ಕಳು ಏನೇನು ಕಳೆದುಕೊಂಡರೋ ಅದನ್ನು ಕಟ್ಟಿಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೃಹಸಚಿವ ಆರಗ ಜ್ಞಾನೆಂದ್ರ, ಸಂಸದ ಜಿ.ಎಸ್. ಬಸವರಾಜು, ಶಾಸಕ ಜ್ಯೋತಿ ಗಣೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ ಮತ್ತಿತರರಿದ್ದರು.

ಇದನ್ನೂ ಓದಿ| ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನಿರ್ವಹಣೆ ಕುರಿತು ಪರಿಶೀಲನೆ: ಸಿಎಂ ಬಸವರಾಜ ಬೊಮ್ಮಾಯಿ

Exit mobile version