ಕೊರಟಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಎಲ್ಲೆಡೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಕೊರಟಗೆರೆಯಲ್ಲಿ ಬೃಹತ್ ಬೈಕ್ ರ‍್ಯಾಲಿಯನ್ನು ನಡೆಸಲಾಗಿದೆ.
ಕೊರಟಗೆರೆ ತಾಲೂಕು ಪಂಚಾಯ್ತಿ ಆವರಣದಿಂದ ಪ್ರಾರಂಭಗೊಂಡ ರ‍್ಯಾಲಿ ತಾಲೂಕಿನ ಚನ್ನರಾಯನದುರ್ಗ ಮಾರ್ಗವಾಗಿ ಸಾಗಿತು. ಜಿಲ್ಲಾಡಳಿತದ ಸಹಯೋಗದೊಂದಿಗೆ ತಾಲೂಕು ಪಂಚಾಯಿತಿಯ ಅನುಷ್ಠಾನಾಧಿಕಾರಿಗಳ ನೇತೃತ್ವದಲ್ಲಿ ರ‍್ಯಾಲಿ ನಡೆಸಲಾಯಿತು. ಎಲ್ಲ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ ತಂಡಗಳು ರ‍್ಯಾಲಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದವು.
ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಅಗ್ರಹಾರ, ಬುಕ್ಕಾಪಟ್ಟಣ, ಕುರಂಕೋಟೆ, ತೋವಿನಕೆರೆ, ಬೂದಗವಿ ಮತ್ತು ತುಂಬಾಡಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇದನ್ನೂ ಓದಿ: ಪಲ್ಟಿ ಹೊಡೆಸದೇ ಇದ್ದಿದ್ದರೆ ನಾನು ಸಿಎಂ ಆಗಿರುತ್ತಿದ್ದೆ: ಕೊರಟಗೆರೆಯಲ್ಲಿ ಡಾ. ಜಿ. ಪರಮೇಶ್ವರ್ ಹೇಳಿಕೆ
ಈ ಬೈಕ್ ರ‍್ಯಾಲಿಯಲ್ಲಿ ತಾಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿಡಿಪಿಒ ಅಂಬಿಕಾ, ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ದೀಪ ಹಾಗೂ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯಿತಿ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್‌ಗಳು ಹಾಗೂ ಇತರೆ ಸಿಬ್ಬಂದಿ ಪಾಲ್ಗೊಂಡಿದ್ದರು.