Site icon Vistara News

Karnataka Election: ಚಿಕ್ಕನಾಯಕನಹಳ್ಳಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಸ್‌. ಕಿರಣ್‌ ನಾಮಪತ್ರ ಸಲ್ಲಿಕೆ

#image_title

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ (Karnataka Election) ಕಾಂಗ್ರೆಸ್ ಅಭ್ಯರ್ಥಿಯಾದ ಕೆ.ಎಸ್. ಕಿರಣ್ ಕುಮಾರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಕಿರಣ್‌ ಅವರು ಇತಿಹಾಸ ಪ್ರಸಿದ್ಧ ಹಳೇಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಸಾಗಿ ಹಿಂದು ಮುಸ್ಲಿಂ ಭಾವೈಕ್ಯತೆಯ ಸಂಕೇತದ ತಾತಯ್ಯನ ಗೋರಿಗೆ ಪೂಜೆ ಸಲ್ಲಿಸಿದರು. ಬೃಹತ್ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತಲುಪಿದ ಅವರು ಅಲ್ಲಿ ನಾಮಪತ್ರ ಸಲ್ಲಿಸಿದರು.

ಕಿರಣ್‌ ಕುಮಾರ್‌ ಅವರಿಗೆ ಮಾಜಿ ಶಾಸಕರಾದ ಬಿ. ಲಕ್ಕಪ್ಪನವರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಸವರಾಜು, ಪಿ.ಟಿ.ಚಿಕ್ಕಣ್ಣ, ರೇಣುಕಾಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪಂಚಾಕ್ಷರಿ, ವೈ.ಸಿ. ಸಿದ್ದರಾಮಯ್ಯ, ಮುಖಂಡರಾದ ಸಿ.ಡಿ. ಚಂದ್ರಶೇಖರ್, ಬುಳ್ಳೇನಲ್ಲಿ ಪ್ರಕಾಶ್, ಎಂ.ಎಂ.ಜಗದೀಶ್ ಸೇರಿ ಅನೇಕರು ಸಾಥ್‌ ನೀಡಿದರು. ನಗರದ ಪ್ರಮುಖ ಬೀದಿಗಳಲ್ಲಿ ಸುಡು ಬಿಸಿಲನ್ನು ಲೆಕ್ಕಿಸದೆ ಸಹಸ್ರಾರು ಕಾರ್ಯಕರ್ತರು ರೋಡ್‌ ಶೋ ನಡೆಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಕಿರಣ್‌ ಕುಮಾರ್‌, “ಬಿಜೆಪಿಯವರು ಬರೀ ಭ್ರಷ್ಟಾಚಾರದಿಂದ ಸರ್ಕಾರ ನಡೆಸಿದ್ದಾರೆ. ಕೋಮು ಗಲಭೆಯನ್ನು ಸೃಷ್ಟಿಸಿ ಜನಸಾಮಾನ್ಯರಲ್ಲಿ ಅಶಾಂತಿ ವಾತಾವರಣ ಮೂಡಿಸಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಯಾವುದೇ ಕೆಲಸಗಳು ಆಗಿಲ್ಲ. ದುರಹಂಕಾರದ ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ 40% ಕಮಿಷನ್‌ಗಾಗಿ ಕಳಪೆ ಕಾಮಗಾರಿ ಮಾಡಿದ್ದಾರೆಯೇ ಹೊರತು ಯಾವುದೇ ಕೆಲಸಗಳು ಆಗಿಲ್ಲ” ಎಂದು ದೂರಿದರು.

ಇದನ್ನೂ ಓದಿ: Karnataka Elections 2023 : ಬಿಜೆಪಿ ಟಿಕೆಟ್‌ ಸಿಗದ್ದಕ್ಕೆ ಸೊಗಡು ಶಿವಣ್ಣ ಬಂಡಾಯ, ತುಮಕೂರು ನಗರ ಕ್ಷೇತ್ರದಿಂದ ಪಕ್ಷೇತರನಾಗಿ ಕಣಕ್ಕೆ

ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಾಲಿ ಮತ್ತು ಮಾಜಿ ಪುರಸಭಾ ಸದಸ್ಯರು, ಹಾಲಿ ಮತ್ತು ಮಾಜಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರು, ಹಾಲಿ ಮತ್ತು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಕಾಂಗ್ರೆಸ್ ಸಮಿತಿಯ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Exit mobile version