Site icon Vistara News

Karnataka Election: ಸ್ವಪಕ್ಷದ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿದ ಮೈಲಾರೆಡ್ಡಿ; ಕಾಂಗ್ರೆಸ್‌ನಿಂದ ಉಚ್ಚಾಟನೆ

#image_title

ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ (Karnataka Election) ಕಾಂಗ್ರೆಸ್‌ ಭರದಿಂದ ಪ್ರಚಾರ ನಡೆಸುತ್ತಿದೆ. ಆದರೆ ರಾಜ್ಯ ಹಿಂದುಳಿದ ವರ್ಗಗಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಮೈಲಾರೆಡ್ಡಿ ಅವರು ಕ್ಷೇತ್ರದಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧವೇ ಕೆಲಸ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಆ ಹಿನ್ನೆಲೆ ಕಾಂಗ್ರೆಸ್‌ ಪಕ್ಷವು ಮೈಲಾರೆಡ್ಡಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಮೈಲಾರೆಡ್ಡಿ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿರುವುದಾಗಿ ಗ್ರಾಮಾಂತರ ಅಧ್ಯಕ್ಷ ರಾಮಾಂಜಿನಪ್ಪ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಜಿ. ಸುದೇಶ್‌ ಕುಮಾರ್ ಅವರು ತಾಲ್ಲೂಕು ಕಾಂಗ್ರೆಸ್ ಸಮಿತಿ, ಜಿಲ್ಲಾ ಕಾಂಗ್ರೆಸ್ ಸಮಿತಿಗೆ ದೂರು ನೀಡಿದ್ದಾರೆ. ಅದರ ಅನ್ವಯ ಕಾಂಗ್ರೆಸ್‌ ಮೈಲಾರೆಡ್ಡಿ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಇದನ್ನೂ ಓದಿ: Karnataka Election : ಹರತಾಳು ಹಾಲಪ್ಪ ಬಗ್ಗೆ ಅಪಪ್ರಚಾರ; ಕಾನೂನು ವಿಭಾಗದ ಸಂಚಾಲಕ ಪ್ರವೀಣ್‌ ಆಕ್ಷೇಪ

ಈ ಬಗ್ಗೆ ಮೈಲಾರೆಡ್ಡಿ ಅವರಿಗೆ ನೋಟಿಸ್‌ ಕೊಟ್ಟಿರುವ ಕಾಂಗ್ರೆಸ್‌, “ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವರಿಷ್ಠರ ಅನುಮೋದನೆ ಹಾಗೂ ಆದೇಶದ ಮೇರೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟನೆ ಮಾಡಲಾಗಿದೆ” ಎಂದು ನೋಟಿಸ್‌ನಲ್ಲಿ ತಿಳಿಸಿದೆ.

Exit mobile version