ಕೊರಟಗೆರೆ: ಲೋಕಸಭಾ ಸಾರ್ವತ್ರಿಕ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಸಾರ್ವಜನಿಕರಲ್ಲಿ ಪ್ರೇರೇಪಿಸಲು ಸಿಐಎಸ್‌ಎಫ್ ಯೋಧರು ಮತ್ತು ಪೊಲೀಸರಿಂದ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪಥಸಂಚಲನ ನಡೆಸಲಾಯಿತು.
ಇದನ್ನೂ ಓದಿ: ಕನ್ನಡಿಗರ ಮನೆಗಳನ್ನು ನೆಲಸಮಗೊಳಿಸಿದ ಗೋವಾ ಸರ್ಕಾರ; ನಾರಾಯಣ ಗೌಡ ಖಂಡನೆ
ಕೊರಟಗೆರೆ ಪೊಲೀಸ್ ಠಾಣೆಯ ಪಿ.ಎಸ್.ಐ ಮಂಜುನಾಥ್ ಮತ್ತು ಎ.ಎಸ್.ಐ ಮಂಜುನಾಥ್ ಅವರ ನೇತೃತ್ವದಲ್ಲಿ ಅಗ್ರಹಾರ, ಬುಕ್ಕಪಟ್ಟಣ, ತೋವಿನಕೆರೆ, ನೇಗಲಾಲ, ಬೂದಗವಿ ಹಾಗೂ ತುಂಬಾಡಿ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಸಿ.ಐ.ಎಸ್.ಎಫ್ ಯೋಧರು ಮತ್ತು ಪೊಲೀಸರು ಪಥ ಸಂಚಲನ ನಡೆಸಿದರು.
ಇದನ್ನೂ ಓದಿ: 2nd PUC Exam: ದ್ವಿತೀಯ ಪಿಯುಸಿ; ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಪಡೆಯಲು ನಾಳೆಯೇ ಕೊನೇ ದಿನ!
ಈ ಸಂದರ್ಭದಲ್ಲಿ ಕೊರಟಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಕುಮಾರ್, ಅಗ್ರಹಾರ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.