Site icon Vistara News

Love case : 50 ವರ್ಷದ ಅಂಕಲ್‌ ಜತೆಗೆ 19ರ ಯುವತಿ ನಾಪತ್ತೆ; ಕುಟುಂಬಸ್ಥರು ಪ್ರೀತಿಗೆ ಒಪ್ಪದ್ದಕ್ಕೆ ಕೆರೆಗೆ ಹಾರಿಬಿಟ್ಟರೆ!

Love Case

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ (Love case) ನಾಪತ್ತೆ (Missing Case) ಆಗಿದ್ದು, ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿವೆ. ಕೆರೆ ಬಳಿ ಕಾರು ನಿಲ್ಲಿಸಿ ಮೊಬೈಲ್‌ಗಳನ್ನು ಕಾರಿನೊಳಗೆ ಇಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಘಟನೆ ನಡೆದಿದೆ.

ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ನಾಪತ್ತೆಯಾದವರು. ವಯಸ್ಸಿನ ಅಂತರ ಇದ್ದರೂ, ಇವರಿಬ್ಬರ ನಡುವೆ ಅದ್ಹೇಗೋ ಪ್ರೀತಿ ಚಿಗುರಿತ್ತು. ಕದ್ದುಮುಚ್ಚಿ ಇದ್ದ ಇವರಿಬ್ಬರ ಪ್ರೀತಿ ಕುಟುಂಬಸ್ಥರಿಗೆ ತಿಳಿದುಹೋಗಿತ್ತು. ಈ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ, ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎನ್ನಲಾಗಿದೆ.

ಕಳೆದ 3 ದಿನಗಳ ಹಿಂದೆ ಅನನ್ಯ ಮನೆಯಿಂದ ನಾಪತ್ತೆಯಾಗಿದ್ದಳು. ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಮಾವತ್ತೂರು ಕೆರೆ ಬಳಿ ಆಕೆಯ ಚಪ್ಪಲಿ ಪತ್ತೆಯಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೋಟ್ ಸಹಾಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್‌ಐ ರೇಣುಕಾ ಯಾದವ್, ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bengaluru news : ಸೋಪಿನ ಮೇಲೆ ಕಾಲಿಟ್ಟು ಆಯತಪ್ಪಿ ಕಟ್ಟಡದ ಮೇಲಿಂದ ಹಾರಿ ಬಿದ್ದಳು; ಎದೆ ಝಲ್​ ಎನಿಸುವ ದೃಶ್ಯ ಸೆರೆ

ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೆ ಯತ್ನಿಸಿದ ಕಾಮುಕ

ರಾಯಚೂರು: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ (Physical Abuse) ಎಸಗಿ ಬಳಿಕ ಕೊಲೆಗೆ ಯತ್ನಿಸಿರುವ ಅಮಾನವೀಯ ಘಟನೆ ನಡೆದಿದೆ. ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಂಡಸಾಗರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಬಾಲಕಿಯೊಬ್ಬಳು ಬಹಿರ್ದೆಸೆಗೆಂದು ಹೋಗಿದ್ದಳು. ಇವಳನ್ನೇ ಹಿಂಬಾಲಿಸಿಕೊಂಡು ಬಂದಿದ್ದ ಕಾಮುಕ ಬಸವರಾಜ ಎಂಬಾತ ಅತ್ತಿಂದಿತ್ತ ಕಣ್ಣಾಡಿಸಿದ್ದ. ಯಾರು ಇಲ್ಲದೆ ಇರುವುದನ್ನು ತಿಳಿದು ಏಕಾಏಕಿ ಹಿಂದಿನಿಂದ ಬಂದು ಬಾಲಕಿಯನ್ನು ಗಟ್ಟಿಯಾಗಿ ಹಿಡಿದು ಬಾಯಿಗೆ ಬಟ್ಟೆಯನ್ನು ತುರುಕಿದ್ದಾನೆ. ಆತನ ಮುಷ್ಠಿಯಿಂದ ಬಿಡಿಸಿಕೊಳ್ಳಲು ಆಗದೇ ಇದ್ದಾಗ ಬಾಲಕಿಯ ಅಸಹಾಯಕತೆಯನ್ನೇ ದುರುಪಯೋಗ ಮಾಡಿಕೊಂಡು ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ.

ಅತ್ಯಾಚಾರ ಎಸಗಿದ ಬಳಿಕ ಸಿಕ್ಕಿ ಬೀಳುವ ಭೀತಿಯಲ್ಲಿ ಕಾಮುಕ ಬಸವರಾಜ, ಅಸ್ವಸ್ಥಳಾಗಿದ್ದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಆದರೆ ಅದ್ಹೇಗೋ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದಿದ್ದು, ನಡೆದಿದ್ದ ಎಲ್ಲ ಘಟನೆಯನ್ನು ಪೋಷಕರಿಗೆ ಹೇಳಿದ್ದಾಳೆ.

ಕೂಡಲೇ ಪೋಷಕರು ಸಂತ್ರಸ್ತೆ ಜತೆಗೂಡಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಲಿಂಗಸಗೂರು ಪೊಲೀಸರು ಕೃತ್ಯ ನಡೆದ ಕೆಲವೇ ಗಂಟೆಯಲ್ಲಿ ಅತ್ಯಾಚಾರಿ ಆರೋಪಿ ಬಸವರಾಜ ದ್ಯಾವಪ್ಪ ಆದಾಪುರನನ್ನು ಅರೆಸ್ಟ್‌ ಮಾಡಿದ್ದಾರೆ. ಸದ್ಯ ಈ ಸಂಬಂಧ ಲಿಂಗಸಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version