Murder Case : ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಕೊಲೆ; ಜಮೀನಿನಲ್ಲಿ ಎಸೆದು ಕ್ರೌರ್ಯ - Vistara News

ತುಮಕೂರು

Murder Case : ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಕೊಲೆ; ಜಮೀನಿನಲ್ಲಿ ಎಸೆದು ಕ್ರೌರ್ಯ

Murder Case : ತುಮಕೂರಿನ ಕುಣಿಗಲ್‌ನಲ್ಲಿ ಮುಂಜಾನೆಯೇ ಜಮೀನಿನಲ್ಲಿ ಅತಿಥಿ ಶಿಕ್ಷಕರೊಬ್ಬರ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಅವರನ್ನು ಅಲ್ಲಿಗೆ ಕರೆ ತಂದು ಕೊಲೆ ಮಾಡಿರುವ ಸಾಧ್ಯತೆ ಕಂಡುಬಂದಿದೆ.

VISTARANEWS.COM


on

Murder Case tumkur teacher
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಅತಿಥಿ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ (Guest teacher Murder) ಮಾಡಿದ ಭೀಕರ ಘಟನೆ (Murder Case) ಕುಣಿಗಲ್ ತಾಲೂಕಿನ (Tumkur News) ಕುಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಮರಿಯಪ್ಪ (47) ಅವರೇ ಕೊಲೆಯಾದವರು.

ಮೋದೂರು ಶಾಲೆಯಲ್ಲಿ ಶಿಕ್ಷಕರಾಗಿದ್ದು ಜನಾನುರಾಗಿಯಾಗಿದ್ದ ಮರಿಯಪ್ಪ ಅವರ ಶವ ಕುಳ್ಳನಂಜಯ್ಯನ ಪಾಳ್ಯದ ಜಮೀನೊಂದರಲ್ಲಿ ಶನಿವಾರ ಮುಂಜಾನೆ ಪತ್ತೆಯಾಗಿದ್ದು ತಲ್ಲಣದ ಅಲೆಗಳನ್ನು ಸೃಷ್ಟಿಸಿದೆ. ದುಷ್ಕರ್ಮಿಗಳು ಅವರನ್ನು ಜಮೀನಿನ ಮಧ್ಯ ಭಾಗದಲ್ಲಿ ಕೊಲೆ ಮಾಡಿ ಎಸೆದು ಹೋಗಿದ್ದಾರೆ. ಅವರ ತಲೆ ಮತ್ತು ಭುಜದ ಭಾಗಕ್ಕೆ ಮಚ್ಚಿನಿಂದ ಕಡಿಯಲಾಗಿದೆ. ಹಲವಾರು ಬಾರಿ ತಲೆಯನ್ನು ಕೊಚ್ಚಿದಂತೆ ಕಾಣುತ್ತಿದ್ದು, ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದಷ್ಟು ಜನ ಜಮೀನಿಗೆ ಬಂದು ಜತೆಯಾಗಿ ಕುಳಿತು ಬಳಿಕ ಕೊಲೆ ಮಾಡಿದಂತೆ ಕಾಣುತ್ತಿದೆ. ಯಾಕೆಂದರೆ ಕೊಲೆ ನಡೆದ ಜಾಗದಲ್ಲಿ ಮಾತ್ರ ರಕ್ತ ಹರಿದಿದೆ. ಮರಿಯಪ್ಪ ಅವರು ಸ್ವಲ್ಪ ಮಟ್ಟಿಗೆ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದಂತೆ ಕಾಣುತ್ತಿದೆಯಾದರೂ ಎದ್ದು ನಿಲ್ಲುವಷ್ಟಕ್ಕೆ ಅವಕಾಶ ಸಿಕ್ಕಿಲ್ಲ ಎಂಬಂತೆ ಕಾಣುತ್ತಿದೆ.

ಸದ್ಯದ ಮಟ್ಟಿಗೆ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಬೆಳಗ್ಗೆ ಶವ ಪತ್ತೆಯಾಗುತ್ತಿದ್ದಂತೆಯೇ ಸಾವಿರಾರು ಮಂದಿ ಜಮೀನಿನ ಸುತ್ತ ನೆರೆದಿದ್ದಾರೆ. ಅವರ ಗೆಳೆಯರು ಮತ್ತು ಯಾರ ಜತೆ ದ್ವೇಷವಿತ್ತು, ಅವರ ವೈಯಕ್ತಿಕ ನಡವಳಿಕೆಗಳ ವಿಚಾರದಲ್ಲಿ ಜನ ಚರ್ಚೆ ಮಾಡುತ್ತಿದ್ದಾರೆ. ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶ್ವಾನದಳವನ್ನು ಕೂಡಾ ಕರೆಸಲಾಗಿದೆ. ಈ ಕೊಲೆ ಪ್ರಕರಣವನ್ನು ಬೇಧಿಸಲು ಸಾಧ್ಯವಿದೆ ಎಂಬ ನಂಬುಗೆಯನ್ನು ಜನರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : Constable Exam : ಫೆ. 25ರಂದು ಕಾನ್‌ಸ್ಟೇಬಲ್‌ ನೇಮಕ ಪರೀಕ್ಷೆ; ಶರ್ಟ್‌ಗೆ ಕಾಲರ್‌ ಇರಬಾರ್ದು, ಶೂ ಹಾಕ್ಲೇಬಾರ್ದು!

ಬೆಂಗಳೂರಿನಲ್ಲಿ ಬೆಳಗ್ಗೆ ಬೆಳಗ್ಗೆ ಹಿಟ್‌ ಅಂಡ್‌ ರನ್‌ಗೆ ಮಹಿಳೆ ಬಲಿ

ಬೆಂಗಳೂರಿನಲ್ಲಿ ಬೆಳಗ್ಗೆ ಬೆಳಗ್ಗೆ ಹಿಟ್​ ಆ್ಯಂಡ್​ ರನ್​ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು 62 ವರ್ಷದ ಆಶಾರಾಣಿ ಎಂಬವರು ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾರೆ.

Hit and Run Case Bangalore1

ಆಶಾರಾಣಿ ಅವರು ಮಹಾಲಕ್ಷ್ಮಿ ಲೇಔಟ್‌ನ ನಿವಾಸಿಯಾಗಿದ್ದು, ಅವರು ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ‌ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಯಾವುದೋ ವಾಹನ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.

ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಪತ್ತೆಯಾಗಿಲ್ಲ. ಇದೀಗ ಪೊಲೀಸರು ಆ ಭಾಗದಲ್ಲಿ ಆ ಹೊತ್ತಿನ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಹಿಟ್‌ ಎಂಡ್‌ ರನ್‌ ಮಾಡಿ ಹೋದ ವಾಹನವನ್ನು ಪತ್ತೆ ಹಚ್ಚಲು ಯತ್ನಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

BCM Hostel : ಹಾಸ್ಟೆಲ್‌ಗೆ ಸಿದ್ದಗಂಗಾ ಮಠದಿಂದ ಅಕ್ಕಿ; ಇನ್ನೊಬ್ಬ ಅಧಿಕಾರಿ ತಲೆದಂಡ

BCM Hostel : ತುಮಕೂರಿನ ಬಿಸಿಎಂ ಹಾಸ್ಟೆಲ್‌ಗೆ ಸಿದ್ದಗಂಗಾ ಮಠದಿಂದ ಅಕ್ಕಿ ಪಡೆದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನೇ ವರ್ಗಾವಣೆ ಮಾಡಲಾಗಿದೆ. ಇದು ಪ್ರಕರಣಕ್ಕೆ ಸಂಬಂಧಿಸಿ ಮಾಡಿರುರುವ ಎರಡನೇ ತಲೆದಂಡ.

VISTARANEWS.COM


on

BCM Hostel Case Officer Transfer
Koo

ತುಮಕೂರು: ತುಮಕೂರು ಜಿಲ್ಲೆಯ (Tumkur News) ಹಿಂದುಳಿದ ವರ್ಗಗಳ ಹಾಸ್ಟೆಲ್​ಗೆ (BCM Hostel) ಸಿದ್ಧಗಂಗಾ ಮಠದಿಂದ ಅಕ್ಕಿ (Rice from Siddaganga Matt) ಎರವಲು ಪಡೆದು ವಿತರಿಸಿದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ (Karnataka Government) ಮತ್ತೊಬ್ಬ ಅಧಿಕಾರಿಯ ತಲೆದಂಡ ಪಡೆದಿದೆ. ಮಂಗಳವಾರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿದ್ದ ಸರ್ಕಾರ ಇದೀಗ ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಎತ್ತಂಗಡಿ (Office transfer) ಮಾಡಿದೆ. ಅಂದರೆ ಈಗ ಜಿಲ್ಲಾ ಮತ್ತು ತಾಲೂಕು ಮಟ್ಟದ ಇಬ್ಬರೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಂತಾಗಿದೆ.

ರಾಜ್ಯ ಸರ್ಕಾರ ಸೂಕ್ತ ಪ್ರಮಾಣದಲ್ಲಿ ಅಕ್ಕಿಯನ್ನು ಸರಬರಾಜು ಮಾಡಿದ್ದರೂ ಅದನ್ನು ಸೂಕ್ತ ಸಮಯದಲ್ಲಿ ಬಿಸಿಎಂ ಹಾಸ್ಟೆಲ್‌ ಸರಬರಾಜು ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

BCM Hostel  Anna Bhagya Scheme

ಗಂಗಪ್ಪ ಅವರ ಸ್ಥಾನಕ್ಕೆ ಸೋನಿಯಾ ವರ್ಣೇಕರ್‌

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆಗಿರುವ ಹೇಮಲತಾ ಎಂ. ಅವರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರ ವರ್ಗಾವಣೆಗೆ ಆದೇಶ ಹೊರಡಿಸಿದ್ದಾರೆ. ಗಂಗಪ್ಪ ಅ ಮಾತೃ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶ ನೀಡಲಾಗಿದೆ. ಗಂಗಪ್ಪ ಅವರ ಸ್ಥಾನಕ್ಕೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯಾಗಿದ್ದ ಸೋನಿಯಾ ವರ್ಣಿಕರ್ ಅವರನ್ನು ನೇಮಕ ಮಾಡಲಾಗಿದೆ.

ಏನಿದು ಪ್ರಕರಣ?

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆಯಲಾಗಿತ್ತು. ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್‌ಗಳಿಗೆ ಸರ್ಕಾರದಿಂದ ಸಕಾಲಕ್ಕೆ ರೇಷನ್ ಪೂರೈಕೆಯಾಗುತ್ತಿಲ್ಲ. ಆದರೆ, ಮಕ್ಕಳನ್ನು ಹೊಟ್ಟೆಗಿಲ್ಲದೆ ಕೂರಿಸಲು ಸಾಧ್ಯವೇ? ಆ ಸಕಾರಣದಿಂದ ಬಿಸಿಎಂ ಇಲಾಖೆ ಅಧಿಕಾರಿಗಳು ಸಿದ್ದಗಂಗಾ ಮಠದಿಂದ ಅಕ್ಕಿ ದಾಸ್ತಾನು ಸಾಲ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಸುಮಾರು 500 ಚೀಲ ಅಕ್ಕಿಯನ್ನು ಸಾಲವಾಗಿ ಪಡೆದಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು.

ಮಠದ ಆಡಳಿತಾಧಿಕಾರಿ ಸ್ಟಷ್ಟನೆ ಕೊಟ್ಟಿದ್ದರು

ಬಿಸಿಎಂ ಹಾಸ್ಟೆಲ್‌ಗಳಿಗೆ ಅಕ್ಕಿ ಸಾಲ ಕೊಟ್ಟಿರುವುದು ಹೌದು. ಈಗಾಗಲೇ ಈ ರೀತಿ ಎರಡು ಬಾರಿ ತೆಗೆದುಕೊಂಡು ಹೋಗಿದ್ದಾರೆ. ಒಮ್ಮೆ ವಾಪಸ್‌ ಕೊಟ್ಟಿದ್ದಾರೆ. ಈಗ ವಾಪಸ್‌ ಕೊಡಲಾಗಿದೆಯಾ? ಇಲ್ಲವಾ? ಎಂಬ ಸಂಗತಿ ಬಗ್ಗೆ ನನಗೆ ಇನ್ನೂ ಮಾಹಿತಿ ಇಲ್ಲ. ಉಗ್ರಾಣದಲ್ಲಿ ಈ ಎಲ್ಲ ಮಾಹಿತಿ ಇರುತ್ತದೆ. ನಮ್ಮ ಸಿಬ್ಬಂದಿಗೆ ಈ ವಿಷಯ ಗೊತ್ತಿರುತ್ತದೆ. ಅಕ್ಕಿ ಸಾಲದ ರೂಪದಲ್ಲಿ ಬೇಕು ಎಂದು ಕೇಳಿದಾಗ ಕೊಡಲು ನಾನು ಸೂಚನೆ ನೀಡಿದ್ದೆ. ತರುವಾಯ ಬಂತೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ ಎಂದು ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ : ಸಿದ್ದಗಂಗಾ ಮಠದಿಂದ ಅಕ್ಕಿ ಎರವಲು ಪ್ರಕರಣ; ಕಲ್ಯಾಣಾಧಿಕಾರಿ ಗೀತಮ್ಮ ತಲೆದಂಡ

ಸಚಿವ ಶಿವರಾಜ್‌ ತಂಗಡಗಿ ಸ್ಪಷ್ಟನೆ ನೀಡಿದ್ದರು

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನಿದ್ದು, ಯಾವುದೇ ಕೊರತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದರು.

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ತುಮಕೂರು ಜಿಲ್ಲೆಯಲ್ಲಿ 111 ಹಾಸ್ಟೆಲ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿನ ಎಲ್ಲಾ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಮಾಸಿಕ ಬೇಡಿಕೆಗಳಿಗೆ ಅನುಗುಣವಾಗಿ ಅಕ್ಕಿ ಮತ್ತು ಗೋಧಿ ಹಂಚಿಕೆಯಾಗಿರುತ್ತದೆ.‌ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ‌ ಅಕ್ಕಿ ಕೊರತೆ ಇಲ್ಲ. ಅಕ್ಕಿ ಇಲ್ಲ ಎಂಬ ವದಂತಿ ಬೆನ್ನಲ್ಲೇ ತುಮಕೂರಿನ ಹಿಂದುಳಿದ ವರ್ಗದ ಜಿಲ್ಲಾ ಕಲ್ಯಾಣ ಅಧಿಕಾರಿಯಿಂದ ಕೂಡ ಮಾಹಿತಿ ಪಡೆದಿದ್ದೇನೆ. ಅಕ್ಕಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದರು.

Continue Reading

ಪ್ರಮುಖ ಸುದ್ದಿ

ಸಿದ್ದಗಂಗಾ ಮಠದಿಂದ ಅಕ್ಕಿ ಎರವಲು ಪ್ರಕರಣ; ಕಲ್ಯಾಣಾಧಿಕಾರಿ ಗೀತಮ್ಮ ತಲೆದಂಡ

ಅಕ್ಕಿ ಲಭ್ಯವಾಗಿದ್ದ ಹೊರತಾಗಿಯೂ ಕಲ್ಯಾಣಾಧಿಕಾರಿಯಾಗಿದ್ದ ಗೀತಮ್ಮ ಅವರು ಹಾಸ್ಟೆಲ್​ಗಳಿಗೆ ಸರಬರಾಜು ಮಾಡಿಲ್ಲ ಎಂದು ಸರ್ಕಾರ ಹೇಳಿದೆ.

VISTARANEWS.COM


on

Siddaganaga mutt
Koo

ಬೆಂಗಳೂರು: ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್​ಗೆ ಸಿದ್ದಂಗಾ ಮಠದಿಂದ ಅಕ್ಕಿ ಎರವಲು ಪಡೆದು ವಿತರಿಸಿದ್ದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿ ಸರ್ಕಾರ (Karanataka Government) ಆದೇಶ ಹೊರಡಿಸಿದೆ. ಪ್ರಕರಣ ಬಯಲಿಗೆ ಬಂದು ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಅಧಿಕಾರಿಯ ತಲೆದಂಡ ಮಾಡಿ ಪ್ರಕರಣವನ್ನು ಕೊನೆಗೊಳಿಸಲು ಯತ್ನಿಸಿದೆ.

ರಾಜ್ಯ ಸರ್ಕಾರ ಸೂಕ್ತ ಪ್ರಮಾಣದಲ್ಲಿ ಅಕ್ಕಿಯನ್ನು ಸರಬರಾಜು ಮಾಡಿದೆ. ಅದರೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಿತಮ್ಮ ಅವರು ಅವುಗಳನ್ನು ಸೂಕ್ತ ಸಮಯಕ್ಕೆ ಬಿಸಿಎಂ ಹಾಸ್ಟೆಲ್​ಗಳಿಗೆ ವಿತರಿಸಲು ವಿಫಲಗೊಂಡಿದ್ದಾರೆ. ಈ ಮೂಲಕ ಅವರು ತಮ್ಮ ಕರ್ತವ್ಯ ಪೂರೈಸಲು ವಿಫಲಗೊಂಡಿದ್ದಾರೆ. ತಪ್ಪಿನ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.

ಏನಿದು ಪ್ರಕರಣ?

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆಯಲಾಗಿತ್ತು. ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್‌ಗಳಿಗೆ ಸರ್ಕಾರದಿಂದ ಸಕಾಲಕ್ಕೆ ರೇಷನ್ ಪೂರೈಕೆಯಾಗುತ್ತಿಲ್ಲ. ಆದರೆ, ಮಕ್ಕಳನ್ನು ಹೊಟ್ಟೆಗಿಲ್ಲದೆ ಕೂರಿಸಲು ಸಾಧ್ಯವೇ? ಆ ಸಕಾರಣದಿಂದ ಬಿಸಿಎಂ ಇಲಾಖೆ ಅಧಿಕಾರಿಗಳು ಸಿದ್ದಗಂಗಾ ಮಠದಿಂದ ಅಕ್ಕಿ ದಾಸ್ತಾನು ಸಾಲ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಸುಮಾರು 500 ಚೀಲ ಅಕ್ಕಿಯನ್ನು ಸಾಲವಾಗಿ ಪಡೆದಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು.

ಇದನ್ನೂ ಓದಿ : Govt. Employees : ಸರ್ಕಾರಿ ನೌಕರರು ಕೋರ್ಟ್‌ನಲ್ಲಿ ಜಾಮೀನು ಪಡೆದರೂ ಶಿಸ್ತುಕ್ರಮದಿಂದ ವಿನಾಯಿತಿ ಇಲ್ಲ

ಮಠದ ಆಡಳಿತಾಧಿಕಾರಿ ಸ್ಟಪಷ್ಟನೆ ಕೊಟ್ಟಿದ್ದರು

ಬಿಸಿಎಂ ಹಾಸ್ಟೆಲ್‌ಗಳಿಗೆ ಅಕ್ಕಿ ಸಾಲ ಕೊಟ್ಟಿರುವುದು ಹೌದು. ಈಗಾಗಲೇ ಈ ರೀತಿ ಎರಡು ಬಾರಿ ತೆಗೆದುಕೊಂಡು ಹೋಗಿದ್ದಾರೆ. ಒಮ್ಮೆ ವಾಪಸ್‌ ಕೊಟ್ಟಿದ್ದಾರೆ. ಈಗ ವಾಪಸ್‌ ಕೊಡಲಾಗಿದೆಯಾ? ಇಲ್ಲವಾ? ಎಂಬ ಸಂಗತಿ ಬಗ್ಗೆ ನನಗೆ ಇನ್ನೂ ಮಾಹಿತಿ ಇಲ್ಲ. ಉಗ್ರಾಣದಲ್ಲಿ ಈ ಎಲ್ಲ ಮಾಹಿತಿ ಇರುತ್ತದೆ. ನಮ್ಮ ಸಿಬ್ಬಂದಿಗೆ ಈ ವಿಷಯ ಗೊತ್ತಿರುತ್ತದೆ. ಅಕ್ಕಿ ಸಾಲದ ರೂಪದಲ್ಲಿ ಬೇಕು ಎಂದು ಕೇಳಿದಾಗ ಕೊಡಲು ನಾನು ಸೂಚನೆ ನೀಡಿದ್ದೆ. ತರುವಾಯ ಬಂತೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ ಎಂದು ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದರು.

ಸಚಿವ ಶಿವರಾಜ್‌ ತಂಗಡಗಿ ಸ್ಪಷ್ಟನೆ ನೀಡಿದ್ದರು

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನಿದ್ದು, ಯಾವುದೇ ಕೊರತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದರು.

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ತುಮಕೂರು ಜಿಲ್ಲೆಯಲ್ಲಿ 111 ಹಾಸ್ಟೆಲ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿನ ಎಲ್ಲಾ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಮಾಸಿಕ ಬೇಡಿಕೆಗಳಿಗೆ ಅನುಗುಣವಾಗಿ ಅಕ್ಕಿ ಮತ್ತು ಗೋಧಿ ಹಂಚಿಕೆಯಾಗಿರುತ್ತದೆ.‌ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ‌ ಅಕ್ಕಿ ಕೊರತೆ ಇಲ್ಲ. ಅಕ್ಕಿ ಇಲ್ಲ ಎಂಬ ವದಂತಿ ಬೆನ್ನಲ್ಲೇ ತುಮಕೂರಿನ ಹಿಂದುಳಿದ ವರ್ಗದ ಜಿಲ್ಲಾ ಕಲ್ಯಾಣ ಅಧಿಕಾರಿಯಿಂದ ಕೂಡ ಮಾಹಿತಿ ಪಡೆದಿದ್ದೇನೆ. ಅಕ್ಕಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದರು.

ಇನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಪ್ರಧಾನ‌ ಕಾರ್ಯದರ್ಶಿ ಅವರೊಂದಿಗೂ ಕೂಡ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಅವರು ಕೂಡ ಅಕ್ಕಿ‌ ಮತ್ತು ಗೋಧಿ ಪೂರೈಕೆಯಲ್ಲಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿ ನಿಲಯಗಳಿಗೆ ಪ್ರಥಮ ಆದ್ಯತೆಯಲ್ಲಿ‌ ಆಹಾರ ಸರಬರಾಜು ಪೂರೈಕೆ ಮಾಡುವಂತೆ‌ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದೇನೆ. ಅಲ್ಲದೆ, ಈ ಕುರಿತು ಯಾವುದೇ ತೊಂದರೆಯಾಗದಂತೆ ಕ್ರಮವಹಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ ಎಂದು ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದರು.

Continue Reading

ತುಮಕೂರು

Tumkur News: ಜಿಲ್ಲೆಯಲ್ಲಿ ವಸತಿಹೀನ ಬಡವರಿಗೆ ಸುಮಾರು 40 ಸಾವಿರ ನಿವೇಶನಗಳ ಹಂಚಿಕೆ: ಸಚಿವ ಡಾ.ಜಿ.ಪರಮೇಶ್ವರ್

Tumkur News: ತುಮಕೂರು ಜಿಲ್ಲೆಯಲ್ಲಿ ಸುಮಾರು 40 ಸಾವಿರ ನಿವೇಶನಗಳನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಮುಂದಿನ ದಿನಗಳಲ್ಲಿ ವಸತಿ ಹೀನ ಬಡವರಿಗೆ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

VISTARANEWS.COM


on

Tumkur District In charge Minister Dr G Parameshwar latest statement at koratagere
Koo

ಕೊರಟಗೆರೆ: ತುಮಕೂರು ಜಿಲ್ಲೆಯಲ್ಲಿ ಸುಮಾರು 40 ಸಾವಿರ ನಿವೇಶನಗಳನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಮುಂದಿನ ದಿನಗಳಲ್ಲಿ ವಸತಿಹೀನ ಬಡವರಿಗೆ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ (Tumkur News) ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಸತಿ ಹೀನ ಬಡ ಕುಟುಂಬಗಳನ್ನು ಗುರುತಿಸಿ ನಿವೇಶಗಳನ್ನು ಹಂಚುವ ಕೆಲಸವನ್ನು ಮಾಡಲಾಗುವುದು, ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸರ್ಕಾರಿ ಭೂಮಿಗಳನ್ನು ಗುರುತಿಸಲಾಗಿದೆ. ಅವುಗಳನ್ನು ನಿವೇಶನಗಳಾಗಿ ಮಾಡಿ ಬಡವರಿಗೆ ಹಂಚಿಕೆ ಮಾಡಲಾಗುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

ಕೊರಟಗೆರೆ ತಾಲೂಕಿನಲ್ಲೂ 1600 ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು, ರಾಜ್ಯದಲ್ಲಿ ಗ್ಯಾರಂಟಿಗಳ ಅನುಷ್ಠಾನಗಳೊಂದಿಗೆ ಬಡವರ ಇತರ ಕಲ್ಯಾಣ ಯೋಜನೆಗಳನ್ನು ಮುಂದುವರೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಆಯವ್ಯಯದಲ್ಲಿ ಎಲ್ಲಾ ವರ್ಗಗಳ ಜನರಿಗೆ, ರೈತರಿಗೆ, ಮಹಿಳೆಯರಿಗೆ ಅನುಕೂಲವಾಗುವಂತೆ ಬಜೆಟ್ ಮಂಡಿಸಿದ್ದಾರೆ ಎಂದರು.

ಇದನ್ನೂ ಓದಿ:Jio Airfiber: ಈಗ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರ, 200ಕ್ಕೂ ಹೆಚ್ಚು ನಗರಗಳಲ್ಲಿ ಜಿಯೋಏರ್ ಫೈಬರ್!

ಕೊರಟಗೆರೆ ಪಟ್ಟಣದ ಅಭಿವೃದ್ಧಿಗೆ, ವೈಟ್ ಟ್ಯಾಪಿಂಗ್ ರಸ್ತೆಗೆ, ಸ್ಲಮ್‌ ಬೋರ್ಡ್ ಮನೆಗಳ ನಿರ್ಮಾಣಕ್ಕೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಈಗಾಗಲೇ 30 ಕೋಟಿ ರೂಗಳ ವಿಶೇಷ ಅನುದಾನ ಮಂಜೂರು ಮಾಡಲಾಗಿದೆ, ಪಟ್ಟಣದ ಬಸ್‌ ನಿಲ್ದಾಣದ ಬಳಿಯಿರುವ ಹಲವಾರು ವರ್ಷಗಳಿಂದ ವಾಸಿಸಲು ಯೋಗ್ಯವಿಲ್ಲದ ಸರ್ಕಾರಿ ಕಟ್ಟಡಗಳನ್ನು ತೆರವು ಮಾಡಲಾಗಿದೆ, ಮುಂದೆ ಅಲ್ಲಿ ಬೃಹತ್ ಕಲಾಭವನವನ್ನು, ಪಟ್ಟಣ ಪಂಚಾಯತಿಗೆ ಆದಾಯ ತರುವ ನಿಟ್ಟಿನಲ್ಲಿ ಶಾಪಿಂಗ್ ಮಾಲ್‌ಗಳನ್ನು ಮತ್ತು ಇತರ ವ್ಯಾಪಾರಿ ಕೆಂದ್ರಗಳನ್ನು ಮಾಡಲಾಗುವುದು ಮತ್ತು ಪ್ರಯಾಣಿಕರಿಗೆ ಉತ್ತಮ ತಂಗುದಾಣಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡಗಳ ನಿರ್ಮಾಣಕ್ಕೆ 1.30 ಕೋಟಿ ಅನುದಾನ ಮಂಜೂರು ಮಾಡಿಸಲಾಗಿದೆ ಹಾಗೂ ಜಿಲ್ಲೆ ಮತ್ತು ಕ್ಷೇತ್ರದಲ್ಲಿನ ಎಲ್ಲಾ ಸರ್ಕಾರಿ ಶಾಲಾ-ಕಾಲೇಜಿಗಳ ಮೂಲಭೂತ ಸೌಕರ್ಯಗಳಿಗೆ ಅದ್ಯತೆ ನೀಡಲಾಗುವುದು ಎಂದರು.

ಇದನ್ನೂ ಓದಿ: Mahindra Thar : ಥಾರ್ ಅಭಿಮಾನಿಗಳಿಗೆ ಖುಷಿಯ ವಿಚಾರ, ಕಾಯುವಿಕೆ ಅವಧಿ ಇಳಿಕೆ

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ತಹಸೀಲ್ದಾರ್ ಮಂಜುನಾಥ್, ತಾ.ಪಂ. ಇಒ ಅಪೂರ್ವ, ಪ.ಪಂ.ಸಿ.ಒ. ಭಾಗ್ಯಮ್ಮ, ಸದಸ್ಯರುಗಳಾದ ಬಲರಾಮಯ್ಯ, ನಂದೀಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಾಂಶುಪಾಲ ಡಾ.ವೀರಪ್ಪನಾಯ್ಕ, ಉಪನ್ಯಾಸಕ ಶಿವರಾಮಯ್ಯ, ಮುಖಂಡರುಗಳಾದ ಕೆಂಪಣ್ಣ, ಕೆ.ಬಿ.ಲೋಕೇಶ್, ಚಂದ್ರು, ಅರವಿಂದ್. ಕೆ.ಎಲ್.ಮಂಜುನಾಥ್, ಭೈರೇಶ್, ದೀಪಕ್, ಗೋಪಿನಾಥ್, ರಾಜು, ಸೇರಿದಂತೆ ಇತರರು ಹಾಜರಿದ್ದರು.

Continue Reading

ತುಮಕೂರು

Road Accident : ಆಂಬ್ಯುಲೆನ್ಸ್‌ ಟೈರ್‌ ಸಿಡಿದು, ಬೈಕ್‌ಗೆ ಬಡಿದು ಸವಾರ ಸ್ಥಳದಲ್ಲೇ ಮೃತ್ಯು

Road Accident : ಸಾವು ಹೇಗೆಲ್ಲ ಸಂಭವಿಸಬಹುದು ಎಂಬುದಕ್ಕೆ ಈ ಅವಘಡವೇ ಸಾಕ್ಷಿ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನ ಟೈರ್‌ ಸಿಡಿದು, ಬೈಕ್‌ ಸವಾರನಿಗೆ ಬಡಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

By

Road Accident tumkur news
Koo

ತುಮಕೂರು: ಇದು ರಕ್ಷಿಸುವವರೇ ಪ್ರಾಣ ತೆಗೆದುದಕ್ಕೆ ಹೋಲಿಸಬಹುದಾದ ಘಟನೆ. ಆಂಬ್ಯುಲೆನ್ಸ್‌ ಅಂದರೆ ನಮಗೆ ಪ್ರಾಣ ರಕ್ಷಣೆಯ ನೆನಪಾಗುತ್ತದೆ. ಆದರೆ, ಇಲ್ಲಿ ಅದೇ ಒಬ್ಬನ ಪ್ರಾಣ ತೆಗೆದಿದೆ. ಹಾಗಂತ, ಯಾವುದೂ ಉದ್ದೇಶಪೂರ್ವಕ ಅಲ್ಲ. ವಿಧಿ ಲಿಖಿತ ಎಂದೇ ಹೇಳಬಹುದೇನೊ! ಆಗಿದ್ದೇನೆಂದರೆ, ಆಂಬುಲೆನ್ಸ್‌ನಿಂದ ಸಿಡಿದ ಟೈರ್, ಬೈಕ್‌ಗೆ ಬಡಿದು ಬೈಕ್ ಸವಾರ ಸ್ಥಳದಲ್ಲೇ ಸಾವು (Road Accident) ಕಂಡಿದ್ದಾರೆ.

ತುಮಕೂರು-ಕೊರಟಗೆರೆ ರಸ್ತೆಯ ಗೇರಹಳ್ಳಿ ಬಳಿ ಘಟನೆ ನಡೆದಿದೆ. ಬೈಕ್ ಸವಾರ ಮಂಜು (38) ಮೃತ ದುರ್ದೈವಿ. ಮಂಜು ದಾರಿಯಲ್ಲಿ ಹೋಗುತ್ತಿದ್ದಾಗ ಅವರ ಹಿಂದಿನಿಂದ ಬರುತ್ತಿದ್ದ ಆಂಬ್ಯುಲೆನ್ಸ್‌ನಿಂದ ಟೈರ್‌ ಸಿಡಿದಿದೆ. ಅದು ನೇರವಾಗಿ ಬೈಕ್‌ಗೆ ಬಡಿದು ಅನಾಹುತ ಉಂಟಾಗಿದೆ.

ಇದನ್ನೂ ಓದಿ: Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ’ ಹೇಳಿಕೆ; ಕ್ಷಮೆ ಕೇಳಿದ್ರೆ ಸರಿ ಎಂದು ಜಗ್ಗೇಶ್​ಗೆ ಎಚ್ಚರಿಕೆ!

ಮಂಜು ಅವರಿಗೆ ಕೊರಟಗೆರೆ ಪಟ್ಟಣದಲ್ಲಿ ಸ್ಟುಡಿಯೋ ಇತ್ತು. ಹೀಗಾಗಿ ಸ್ಟುಡಿಯೋ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಲಿಸುತ್ತಿದ್ದಾಗಲೇ ಆಂಬ್ಯುಲೆನ್ಸ್‌ ವಾಹನದ ಟೈರ್ ಸಿಡಿದ ಪರಿಣಾಮ ಮುಂದೆ ಹೋಗುತ್ತಿದ್ದ ಬೈಕ್‌ಗೆ ಬಡಿದಿದೆ. ಈ ವೇಳೆ ಬೈಕ್‌ನ ನಿಯಂತ್ರಣ ಕಳೆದುಕೊಂಡ ಮಂಜು ರಸ್ತೆ ಬದಿಯ ಕಲ್ಲಿನ ಮೇಲೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಮಂಜು ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಜು ಜತೆಗೆ ಬೈಕ್‌ನಲ್ಲಿದ್ದ ರವಿ ಎಂಬುವವರು ಸಣ್ಣ-ಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
shishya sweekara Mahotsav in shri swarnavalli maha samsthana matha dharmasabhe
ಉತ್ತರ ಕನ್ನಡ7 seconds ago

Sirsi News: ಅಪಕಾರ ಮಾಡಿದವರಿಗೂ ಉಪಕಾರ ಬಯಸುವ ಸದ್ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಿ: ಶ್ರೀವಿದ್ಯಾವಿಶ್ವೇಶ್ವರ ಭಾರತೀ ಸ್ವಾಮೀಜಿ

Gurpatwant Singh Pannun
ಕ್ರೀಡೆ6 mins ago

IND vs ENG: ರಾಂಚಿ ಟೆಸ್ಟ್​ ಪಂದ್ಯಕ್ಕೆ ಖಲಿಸ್ತಾನಿ ಉಗ್ರನಿಂದ ಬೆದರಿಕೆ; ಸ್ಟೇಡಿಯಂಗೆ ಬಿಗಿ ಭದ್ರತೆ!

Hello-minister-N-chaluvarayaswamy-in-vistara-news-2
ಕರ್ನಾಟಕ20 mins ago

Krishi Bhagya Scheme: 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಮರು ಜಾರಿ: ಎನ್. ಚಲುವರಾಯಸ್ವಾಮಿ

bike accident
ಪ್ರಮುಖ ಸುದ್ದಿ1 hour ago

Road Accident: ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ; ಬಸ್-ಬೈಕ್ ಡಿಕ್ಕಿಯಾಗಿ ನಾಲ್ವರ ದುರ್ಮರಣ

vistara top ten
ಟಾಪ್ 10 ನ್ಯೂಸ್1 hour ago

VISTARA TOP 10 NEWS: ನಾಡಗೀತೆಯಲ್ಲೂ ಸರಕಾರ ಎಡವಟ್ಟು ಪಬ್ಲಿಕ್‌ ಪ್ಲೇಸಲ್ಲಿ ಸೇದಬಾರದು ಸಿಗರೇಟು.. ಮತ್ತು ಇತರ ಸುದ್ದಿಗಳು

Vamshi Krishna hits six sixes
ಕ್ರೀಡೆ2 hours ago

C K Nayudu Trophy: ಒಂದೇ ಓವರ್​ನಲ್ಲಿ 6 ಸಿಕ್ಸರ್ ಬಾರಿಸಿದ ವಂಶಿ ಕೃಷ್ಣ; ವಿಡಿಯೊ ವೈರಲ್​

IT department has withdrawn 65 crore rupees from the Congress party accounts
ದೇಶ2 hours ago

Congress Party: ಕಾಂಗ್ರೆಸ್‌ ಖಾತೆಗಳಿಂದ 65 ಕೋಟಿ ರೂ. ವಿತ್‌ಡ್ರಾ ಮಾಡಿದ ಐಟಿ ಇಲಾಖೆ!

Minister Madhu Bangarappa inauguration by Beneficiaries convention of guarantee schemes in Soraba
ಶಿವಮೊಗ್ಗ2 hours ago

Shivamogga News: ಸೊರಬದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಚಾಲನೆ

No water supply
ಬೆಂಗಳೂರು2 hours ago

No Water Supply: ಫೆ.27, 28ರಂದು ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ

Rahul Gandhi used Aishwarya Rai name to criticize Modi Says Sona Mohapatra
ದೇಶ2 hours ago

Sona Mohapatra: ಮೋದಿ ಟೀಕಿಸಲು ಐಶ್ವರ್ಯಾ ಹೆಸರು ಬಳಕೆ, ರಾಹುಲ್ ಗಾಂಧಿ ವಿರುದ್ಧ ಆಕ್ರೋಶ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for february 21 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ2 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ3 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ4 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ4 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

read your daily horoscope predictions for february 17 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Karnataka Budget Session 2024 siddaramaiah use cinema Lines
ಸಿನಿಮಾ5 days ago

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

read your daily horoscope predictions for february 16 2024
ಭವಿಷ್ಯ6 days ago

Dina Bhavishya : ಈ ಹಿಂದೆ ಹಣ ಹೂಡಿಕೆ ಮಾಡಿದ್ದರೆ ಇಂದು ಈ ರಾಶಿಯವರಿಗೆ ಡಬಲ್‌ ಲಾಭ

Siddaramaiah
ರಾಜಕೀಯ6 days ago

Karnataka Budget Session 2024: ಬಿಜೆಪಿಯವರು ಗೂಂಡಾಗಳು ಎಂದ ಸಿಎಂ; ತೊಡೆ ತಟ್ಟಿದ್ದು ನಾವಾ – ನೀವಾ ಎಂದ ವಿಪಕ್ಷ!

ಟ್ರೆಂಡಿಂಗ್‌