Site icon Vistara News

ಹಾಸ್ಟೆಲ್‌ನಲ್ಲಿ ಪಿಯು ವಿದ್ಯಾರ್ಥಿ ಆತ್ಮಹತ್ಯೆ

student

ತುಮಕೂರು: ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಡೊಮಿನಿಕ್ ಕರಣ್ (17) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಈತ ಬೆಂಗಳೂರು ಮೂಲದ ವಿದ್ಯಾರ್ಥಿಯಾಗಿದ್ದು, SC-ST ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಸಿದ್ದಗಂಗಾ ಪಿ.ಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. NEPS ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. NEPS ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Suicide case | ಪೊಲೀಸರ ಕಿರುಕುಳದಿಂದ ಕಾರು ಪಾರ್ಕಿಂಗ್ ಕೆಲಸ ಮಾಡುತಿದ್ದ ಯುವಕ ಆತ್ಮಹತ್ಯೆ?

Exit mobile version