BCM Hostel : ಹಾಸ್ಟೆಲ್‌ಗೆ ಸಿದ್ದಗಂಗಾ ಮಠದಿಂದ ಅಕ್ಕಿ; ಇನ್ನೊಬ್ಬ ಅಧಿಕಾರಿ ತಲೆದಂಡ - Vistara News

ತುಮಕೂರು

BCM Hostel : ಹಾಸ್ಟೆಲ್‌ಗೆ ಸಿದ್ದಗಂಗಾ ಮಠದಿಂದ ಅಕ್ಕಿ; ಇನ್ನೊಬ್ಬ ಅಧಿಕಾರಿ ತಲೆದಂಡ

BCM Hostel : ತುಮಕೂರಿನ ಬಿಸಿಎಂ ಹಾಸ್ಟೆಲ್‌ಗೆ ಸಿದ್ದಗಂಗಾ ಮಠದಿಂದ ಅಕ್ಕಿ ಪಡೆದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನೇ ವರ್ಗಾವಣೆ ಮಾಡಲಾಗಿದೆ. ಇದು ಪ್ರಕರಣಕ್ಕೆ ಸಂಬಂಧಿಸಿ ಮಾಡಿರುರುವ ಎರಡನೇ ತಲೆದಂಡ.

VISTARANEWS.COM


on

BCM Hostel Case Officer Transfer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ತುಮಕೂರು ಜಿಲ್ಲೆಯ (Tumkur News) ಹಿಂದುಳಿದ ವರ್ಗಗಳ ಹಾಸ್ಟೆಲ್​ಗೆ (BCM Hostel) ಸಿದ್ಧಗಂಗಾ ಮಠದಿಂದ ಅಕ್ಕಿ (Rice from Siddaganga Matt) ಎರವಲು ಪಡೆದು ವಿತರಿಸಿದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ (Karnataka Government) ಮತ್ತೊಬ್ಬ ಅಧಿಕಾರಿಯ ತಲೆದಂಡ ಪಡೆದಿದೆ. ಮಂಗಳವಾರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿದ್ದ ಸರ್ಕಾರ ಇದೀಗ ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಎತ್ತಂಗಡಿ (Office transfer) ಮಾಡಿದೆ. ಅಂದರೆ ಈಗ ಜಿಲ್ಲಾ ಮತ್ತು ತಾಲೂಕು ಮಟ್ಟದ ಇಬ್ಬರೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಂತಾಗಿದೆ.

ರಾಜ್ಯ ಸರ್ಕಾರ ಸೂಕ್ತ ಪ್ರಮಾಣದಲ್ಲಿ ಅಕ್ಕಿಯನ್ನು ಸರಬರಾಜು ಮಾಡಿದ್ದರೂ ಅದನ್ನು ಸೂಕ್ತ ಸಮಯದಲ್ಲಿ ಬಿಸಿಎಂ ಹಾಸ್ಟೆಲ್‌ ಸರಬರಾಜು ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

BCM Hostel  Anna Bhagya Scheme

ಗಂಗಪ್ಪ ಅವರ ಸ್ಥಾನಕ್ಕೆ ಸೋನಿಯಾ ವರ್ಣೇಕರ್‌

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆಗಿರುವ ಹೇಮಲತಾ ಎಂ. ಅವರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರ ವರ್ಗಾವಣೆಗೆ ಆದೇಶ ಹೊರಡಿಸಿದ್ದಾರೆ. ಗಂಗಪ್ಪ ಅ ಮಾತೃ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶ ನೀಡಲಾಗಿದೆ. ಗಂಗಪ್ಪ ಅವರ ಸ್ಥಾನಕ್ಕೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯಾಗಿದ್ದ ಸೋನಿಯಾ ವರ್ಣಿಕರ್ ಅವರನ್ನು ನೇಮಕ ಮಾಡಲಾಗಿದೆ.

ಏನಿದು ಪ್ರಕರಣ?

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆಯಲಾಗಿತ್ತು. ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್‌ಗಳಿಗೆ ಸರ್ಕಾರದಿಂದ ಸಕಾಲಕ್ಕೆ ರೇಷನ್ ಪೂರೈಕೆಯಾಗುತ್ತಿಲ್ಲ. ಆದರೆ, ಮಕ್ಕಳನ್ನು ಹೊಟ್ಟೆಗಿಲ್ಲದೆ ಕೂರಿಸಲು ಸಾಧ್ಯವೇ? ಆ ಸಕಾರಣದಿಂದ ಬಿಸಿಎಂ ಇಲಾಖೆ ಅಧಿಕಾರಿಗಳು ಸಿದ್ದಗಂಗಾ ಮಠದಿಂದ ಅಕ್ಕಿ ದಾಸ್ತಾನು ಸಾಲ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಸುಮಾರು 500 ಚೀಲ ಅಕ್ಕಿಯನ್ನು ಸಾಲವಾಗಿ ಪಡೆದಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು.

ಮಠದ ಆಡಳಿತಾಧಿಕಾರಿ ಸ್ಟಷ್ಟನೆ ಕೊಟ್ಟಿದ್ದರು

ಬಿಸಿಎಂ ಹಾಸ್ಟೆಲ್‌ಗಳಿಗೆ ಅಕ್ಕಿ ಸಾಲ ಕೊಟ್ಟಿರುವುದು ಹೌದು. ಈಗಾಗಲೇ ಈ ರೀತಿ ಎರಡು ಬಾರಿ ತೆಗೆದುಕೊಂಡು ಹೋಗಿದ್ದಾರೆ. ಒಮ್ಮೆ ವಾಪಸ್‌ ಕೊಟ್ಟಿದ್ದಾರೆ. ಈಗ ವಾಪಸ್‌ ಕೊಡಲಾಗಿದೆಯಾ? ಇಲ್ಲವಾ? ಎಂಬ ಸಂಗತಿ ಬಗ್ಗೆ ನನಗೆ ಇನ್ನೂ ಮಾಹಿತಿ ಇಲ್ಲ. ಉಗ್ರಾಣದಲ್ಲಿ ಈ ಎಲ್ಲ ಮಾಹಿತಿ ಇರುತ್ತದೆ. ನಮ್ಮ ಸಿಬ್ಬಂದಿಗೆ ಈ ವಿಷಯ ಗೊತ್ತಿರುತ್ತದೆ. ಅಕ್ಕಿ ಸಾಲದ ರೂಪದಲ್ಲಿ ಬೇಕು ಎಂದು ಕೇಳಿದಾಗ ಕೊಡಲು ನಾನು ಸೂಚನೆ ನೀಡಿದ್ದೆ. ತರುವಾಯ ಬಂತೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ ಎಂದು ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ : ಸಿದ್ದಗಂಗಾ ಮಠದಿಂದ ಅಕ್ಕಿ ಎರವಲು ಪ್ರಕರಣ; ಕಲ್ಯಾಣಾಧಿಕಾರಿ ಗೀತಮ್ಮ ತಲೆದಂಡ

ಸಚಿವ ಶಿವರಾಜ್‌ ತಂಗಡಗಿ ಸ್ಪಷ್ಟನೆ ನೀಡಿದ್ದರು

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನಿದ್ದು, ಯಾವುದೇ ಕೊರತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದರು.

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ತುಮಕೂರು ಜಿಲ್ಲೆಯಲ್ಲಿ 111 ಹಾಸ್ಟೆಲ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿನ ಎಲ್ಲಾ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಮಾಸಿಕ ಬೇಡಿಕೆಗಳಿಗೆ ಅನುಗುಣವಾಗಿ ಅಕ್ಕಿ ಮತ್ತು ಗೋಧಿ ಹಂಚಿಕೆಯಾಗಿರುತ್ತದೆ.‌ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ‌ ಅಕ್ಕಿ ಕೊರತೆ ಇಲ್ಲ. ಅಕ್ಕಿ ಇಲ್ಲ ಎಂಬ ವದಂತಿ ಬೆನ್ನಲ್ಲೇ ತುಮಕೂರಿನ ಹಿಂದುಳಿದ ವರ್ಗದ ಜಿಲ್ಲಾ ಕಲ್ಯಾಣ ಅಧಿಕಾರಿಯಿಂದ ಕೂಡ ಮಾಹಿತಿ ಪಡೆದಿದ್ದೇನೆ. ಅಕ್ಕಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಾಮರಾಜನಗರ

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

Road Accident : ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವಾಗ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್‌ ಸ್ಫೋಟಗೊಂಡು ಕಾರು ಅಪಘಾತಕ್ಕೀಡಾಗಿದೆ. ಇತ್ತ ತುಮಕೂರಿನಲ್ಲಿ ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.

VISTARANEWS.COM


on

By

Road Accident in Chamarajanagar
Koo

ಚಾಮರಾಜನಗರ/ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು (Road Accident) ಸಂಭವಿಸಿವೆ. ಮೈಸೂರಿನ ಹೊರವಲಯದ ನಾಡನಹಳ್ಳಿಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ (MLA A R Krishnamurthy) ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Road Accident

ಕೊಳ್ಳೆಗಾಲದ ಕಾಂಗ್ರೆಸ್ ಶಾಸಕ ಎಆರ್ ಕೃಷ್ಣಮೂರ್ತಿ ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ರಸ್ತೆ ಬಿಟ್ಟು ಪಕ್ಕಕ್ಕೆ ಇಳಿದಿದೆ.

Road Accident in Chamarajnagar

ಇದನ್ನೂ ಓದಿ: IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿ, ಇಬ್ಬರು ಸಾವು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತ ದುರ್ದೈವಿ. ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.

Road Accident in Tumkur

ದ್ರಾಕ್ಷಿ ತುಂಬಿಸಿಕೊಂಡು ಬೆಂಗಳೂರು ಕಡೆ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Road Accident: ದ್ರಾಕ್ಷಿ ತುಂಬಿಕೊಂಡು ಬರುತ್ತಿದ್ದ ಬೊಲೆರೋ ಲಾರಿಗೆ ಡಿಕ್ಕಿ, ಇಬ್ಬರು ಸಾವು

Road Accident: ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು.

VISTARANEWS.COM


on

road accident tumkur news
Koo

ತುಮಕೂರು: ಲಾರಿಯ ಹಿಂಬದಿಗೆ ವೇಗವಾಗಿ ಬಂದ ಬೊಲೆರೋ (Lorry Bolero Hit) ವಾಹನ ಡಿಕ್ಕಿಯಾಗಿ (Road Accident) ಇಬ್ಬರು (two death) ಸಾವಿಗೀಡಾಗಿದ್ದಾರೆ. ತುಮಕೂರು (tumkur news) ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH 48) ಈ ದುರ್ಘಟನೆ ನಡೆದಿದೆ.

ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.

ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ಅಪಘಾತ ನಡೆದಿದೆ. ಬೊಲೆರೋ ವಾಹನ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಡುರಾತ್ರಿ ಲಾರಿಯ ವೇಗ ಗೊತ್ತಾಗದೆ ಬೊಲೆರೋ ವಾಹನ ಚಾಲಕ ಹಿಂದಿನಿಂದ ಬಂದು ಅಪ್ಪಳಿಸಿದ್ದಾನೆ ಎಂದು ಶಂಕಿಸಲಾಗಿದೆ.

ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

ರಾಯಚೂರು: ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಇಬ್ಬರು ಬೈಕ್ ಸವಾರರು ದುರ್ಮರಣ ಹೊಂದಿದ ಘಟನೆ (Road Accident) ಜಿಲ್ಲೆಯ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಜಾಲಹಳ್ಳಿ ನಿವಾಸಿಗಳಾದ ಗುತ್ತೆಪ್ಪ (45), ಜಗದೀಶ್ (50) ಮೃತರು. ದೇವದುರ್ಗ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು 10 ಕುರಿಗಳ ಸಾವು

ವಿಜಯಪುರ: ಸಿಡಿಲು ಬಡಿದು 10 ಕುರಿಗಳು ಮೃತಪಟ್ಟ ಘಟನೆ ಜಿಲ್ಲೆಯ ದೇವರ ಹಿಪ್ಪರಗಿಯ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಸುಬ್ಬರಾಯ ನಾಟೀಕಾರ ಎಂಬುವವರ 10 ಕುರಿಗಳು ಮೃತಪಟ್ಟಿವೆ. ಜಮೀನಿನಲ್ಲಿ ಕುರಿಗಳು ಮೇಯಲು ಹೋದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ.

ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Road accident in Ankola The biker was burnt to death

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

Continue Reading

Lok Sabha Election 2024

Lok Sabha Election 2024: ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

Lok Sabha Election 2024: ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

VISTARANEWS.COM


on

Lok Sabha Election 2024 General holiday for first phase of polling on April 26
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ (Voting in Karnataka) ನಡೆಯಲಿದೆ. ಅಂದು ಎಲ್ಲ ಕಾರ್ಮಿಕರು, ಅರ್ಹ ಮತದಾರರು (Labour Voters) ಮತದಾನ ಮಾಡುವ ಸಲುವಾಗಿ ಸಾರ್ವತ್ರಿಕ ರಜೆ (General holiday for voting) ಘೋಷಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಈ ಬಗ್ಗೆ ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ದಿನಾಂಕವನ್ನು 2024ರ ಮಾರ್ಚ್‌ 16ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ. ಏಪ್ರಿಲ್‌ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಹಾಗೂ ಮೇ 07ರ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು ಸಹ ಮತದಾನ ಮಾಡಬೇಕಿದೆ. ಹಾಗಾಗಿ ಅಂದು ಕಾರ್ಮಿಕರಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆದೇಶದಲ್ಲೇನಿದೆ?

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

ತುಮಕೂರು

Lok Sabha Election 2024: ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮತಯಾಚನೆ

Lok Sabha Election 2024: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಮಂಗಳವಾರ ಶಿರಾ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು, ಮತ ಯಾಚನೆ ನಡೆಸಿದರು.

VISTARANEWS.COM


on

Chitradurga Lok Sabha Constituency BJP candidate Govinda M karajola election campaign in shira
Koo

ಶಿರಾ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಮಂಗಳವಾರ ಶಿರಾ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚನೆ (Lok Sabha Election 2024) ನಡೆಸಿದರು.

ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಶ್ರೀ ಬಂಡಿ ರಂಗನಾಥ ಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಬಳಿಕ ಮಾತನಾಡಿದ ಗೋವಿಂದ ಎಂ.ಕಾರಜೋಳ, ಸ್ವಾತಂತ್ರ್ಯ ನಂತರ 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಸರ್ಕಾರ ಯಾವುದೇ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ವಿಫಲವಾಗಿದ್ದು, ಪ್ರಧಾನಿ ಮೋದಿ ಅವರು ಕೇವಲ 10 ವರ್ಷದ ಆಡಳಿತದಲ್ಲಿ ವಿಶ್ವವೇ ಭಾರತದತ್ತ ನೋಡುವಂತೆ ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಜನರು ಮತ್ತೊಮ್ಮೆ ತಮ್ಮನ್ನು ಆಯ್ಕೆ ಮಾಡುವಂತೆ ಮತದಾರರದಲ್ಲಿ ಅವರು ಮನವಿ ಮಾಡಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಸತ್ಯಪ್ರಕಾಶ್‌ ಮಾತನಾಡಿ, ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ, ಸುಳ್ಳಿನ ಹೇಳಿಕೆಗೆ ಬೆಲೆ ಕೊಡದೆ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಶಿರಾ ವಿಧಾನಸಭಾ ಕ್ಷೇತ್ರದ ಹುಲಿಕುಂಟೆ ಹೋಬಳಿಯ ಬರಗೂರಿನಲ್ಲಿ, ಕಸಬಾ ಹೋಬಳಿಯ ಮದಲೂರಿನಲ್ಲಿ, ಕಳ್ಳಂಬೆಳ್ಳ ಹೋಬಳಿಯ ಹನುಮಂತಪುರ, ಗೌಡಗೆರೆ ಹೋಬಳಿಯ ತಾವರೆಕೆರೆ ಹಾಗೂ ಶಿರಾ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ, ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿದರು.

ಇದನ್ನೂ ಓದಿ: IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜೆಡಿಎಸ್ ಮುಖಂಡ ಅರ್. ಉಗ್ರೇಶ್, ಮುಖಂಡರಾದ ಎಸ್.ಆರ್. ಗೌಡ್, ಬಿ.ಕೆ. ಮಂಜುನಾಥ್ ಹಾಗೂ ಬಿಜೆಪಿ- ಜೆಡಿಎಸ್ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading
Advertisement
Election Commission
ದೇಶ14 mins ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

arunachal pradesh landslide
ವೈರಲ್ ನ್ಯೂಸ್32 mins ago

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Neha Murder case CID Officer
ಹುಬ್ಬಳ್ಳಿ39 mins ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Virender Sehwag
ಕ್ರೀಡೆ48 mins ago

Virender Sehwag: ಬಡ ದೇಶದ ಕ್ರಿಕೆಟ್​ ಲೀಗ್​ ಆಡಲ್ಲ ಎಂದ ವೀರೇಂದ್ರ ಸೆಹವಾಗ್; ಕಾರಣವೇನು?

Guru Raghavendra and Vasishta Co operative Bank fraud handed over to SIT says DK Shivakumar
ಬೆಂಗಳೂರು50 mins ago

Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

Shakhahaari Movie In OTT amzon Prime
ಸ್ಯಾಂಡಲ್ ವುಡ್56 mins ago

Shakhahaari Movie: ಒಟಿಟಿಗೆ ಎಂಟ್ರಿ ಕೊಡ್ತಿದೆ ʻಶಾಖಾಹಾರಿʼ ಸಿನಿಮಾ! ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Xiaomi EV
ಆಟೋಮೊಬೈಲ್57 mins ago

Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

Nilkrishna Gajare JEE main 2024 result AIR 1
ಅಂಕಣ1 hour ago

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

Aircraft Crash
ದೇಶ1 hour ago

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Lok Sabha Election 2024 vote for better future and 98 year old woman dies when returning officer arrives at home to cast her vote
ಪ್ರಮುಖ ಸುದ್ದಿ1 hour ago

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ39 mins ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌