ತುಮಕೂರು: ಲಾರಿಯ ಹಿಂಬದಿಗೆ ವೇಗವಾಗಿ ಬಂದ ಬೊಲೆರೋ (Lorry Bolero Hit) ವಾಹನ ಡಿಕ್ಕಿಯಾಗಿ (Road Accident) ಇಬ್ಬರು (two death) ಸಾವಿಗೀಡಾಗಿದ್ದಾರೆ. ತುಮಕೂರು (tumkur news) ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH 48) ಈ ದುರ್ಘಟನೆ ನಡೆದಿದೆ.
ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.
ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ಅಪಘಾತ ನಡೆದಿದೆ. ಬೊಲೆರೋ ವಾಹನ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಡುರಾತ್ರಿ ಲಾರಿಯ ವೇಗ ಗೊತ್ತಾಗದೆ ಬೊಲೆರೋ ವಾಹನ ಚಾಲಕ ಹಿಂದಿನಿಂದ ಬಂದು ಅಪ್ಪಳಿಸಿದ್ದಾನೆ ಎಂದು ಶಂಕಿಸಲಾಗಿದೆ.
ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ
ರಾಯಚೂರು: ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಇಬ್ಬರು ಬೈಕ್ ಸವಾರರು ದುರ್ಮರಣ ಹೊಂದಿದ ಘಟನೆ (Road Accident) ಜಿಲ್ಲೆಯ ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಜಾಲಹಳ್ಳಿ ನಿವಾಸಿಗಳಾದ ಗುತ್ತೆಪ್ಪ (45), ಜಗದೀಶ್ (50) ಮೃತರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು 10 ಕುರಿಗಳ ಸಾವು
ವಿಜಯಪುರ: ಸಿಡಿಲು ಬಡಿದು 10 ಕುರಿಗಳು ಮೃತಪಟ್ಟ ಘಟನೆ ಜಿಲ್ಲೆಯ ದೇವರ ಹಿಪ್ಪರಗಿಯ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಸುಬ್ಬರಾಯ ನಾಟೀಕಾರ ಎಂಬುವವರ 10 ಕುರಿಗಳು ಮೃತಪಟ್ಟಿವೆ. ಜಮೀನಿನಲ್ಲಿ ಕುರಿಗಳು ಮೇಯಲು ಹೋದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ.
ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್ ಸವಾರ ಸುಟ್ಟು ಕರಕಲು!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.
ಬೈಕ್ ಸವಾರರು ಮಂಗಳವಾರ (ಏಪ್ರಿಲ್ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್ ಸವಾರನ ಮೇಲೆ ಬೈಕ್ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.
ಗಾಯಾಳುಗಳು ಆಸ್ಪತ್ರೆಗೆ ದಾಖಲು
ಗಾಯಾಳುಗಳಾದ ಸುಮಿತ್ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್ ರವಿ ಕಾನಾ