ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ಗೆ (KSRTC Bus) ಸಿಲುಕಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರು ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದಲ್ಲಿ ಅಪಘಾತ (Road Accident) ಸಂಭವಿಸಿದೆ. ತುಮಕೂರು ನಗರದ ಚೇತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿ.
ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಂದ್ರಶೇಖರ್ ಬೈಕ್‌ನಲ್ಲಿ ಬಟವಾಡಿ ಕಡೆಯಿಂದ ಮಹಾತ್ಮ ಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದರು. ಬಲ ತಿರುವು ಪಡೆದು ಮುಂದೆ ಹೋಗಬೇಕು ಎನ್ನುವಾಗ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ಕೆಳಗೆ ಬಿದ್ದ ಚಂದ್ರಶೇಖರ್ ಅವರ ಮೇಲೆ ಬಸ್ ಹರಿದಿದೆ. ಬಸ್ ನಡಿ ಸಿಲುಕಿ ಗಂಭೀರ ಗಾಯಗೊಂಡಿದ್ದ ಚಂದ್ರಶೇಖರ್ ಅವರನ್ನು ಸ್ಥಳೀಯರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ತುಮಕೂರಿನ ಎನ್‌ಇಪಿಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ: Electrocution: ಡಿಜೆ ವಾಹನಕ್ಕೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಆಘಾತ; 8 ಮಂದಿ ಭಕ್ತರ ಸಾವು
ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು
ಬೆಂಗಳೂರಿನ ಚಿಕ್ಕಬಾಣವಾರ ಸಮೀಪದ ಬ್ಯಾಲಕೆರೆ ರಸ್ತೆಯಲ್ಲಿ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್‌ರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಕ್ಲೀನರ್ ರಾಮನಂದ್ ಸಿಂಗ್ (42) ಮೃತ ದುರ್ದೈವಿ.
ಲಾರಿ ರಿವರ್ಸ್ ತೆಗೆಯಬೇಕಾದರೆ ಈ ದುರ್ಘಟನೆ ನಡೆದಿದೆ. ಸದ್ಯ ಲಾರಿ ಹಾಗೂ ಚಾಲಕನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ