Site icon Vistara News

Road accident : ತುಮಕೂರಿನಲ್ಲಿ ಕ್ಯಾಂಟರ್‌ ಡಿಕ್ಕಿಯಾಗಿ ವ್ಯಕ್ತಿ ಸಾವು, ಚಾಲಕನಿಗೆ ಗಾಯ

road accident

#image_title

ತುಮಕೂರು : ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಟ್ಯಾಂಕರ್‌ ಚಲಾಯಿಸುತ್ತಿದ್ದ ಚಾಲಕನಿಗೆ ಗಾಯವಾಗಿದೆ. (Road accident) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ನಂ.48 ರಲ್ಲಿ ಬುಧವಾರ ತಡರಾತ್ರಿ ಘಟನೆ ನಡೆದಿದೆ.

ಶಿರಾ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ಯಾಂಟರ್ಚಿ, ಕ್ಕನಹಳ್ಳಿ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಬಳಿ ಇದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಬಳಿಕ ಕ್ಯಾಂಟರ್ ಪಲ್ಟಿಯಾಗಿದ್ದು ಚಾಲಕನಿಗೂ ಗಾಯವಾಗಿದೆ. ಹಾಸನ ಜಿಲ್ಲೆಯ ಕುರುಬರಹಳ್ಳಿಯ ಚಾಲಕ ರಾಜು ಗಂಭೀರ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Exit mobile version