ತುಮಕೂರು: ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ- ಮಗಳು ಸ್ಥಳದಲ್ಲೇ ದುರ್ಮರಣ (Road Accident) ಹೊಂದಿದ್ದಾರೆ. ಕಮಲಮ್ಮ (35), ವೀಣಾ (16), ಮೃತ ದುರ್ದೈವಿಗಳು. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದೆ.
ಕಮಲಮ್ಮನವರು ಬೆಳಗ್ಗೆ 10ನೇ ತರಗತಿ ಓದುತ್ತಿದ್ದ ಮಗಳನ್ನು ಶಾಲೆಗೆ ಬಿಡಲು ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಗಾರ್ಮೆಂಟ್ಸ್ ಬಸ್‌ವೊಂದು ಏಕಾಏಕಿ ತಾಯಿ- ಮಗಳಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಹಾರಿ ಬಿದ್ದ ತಾಯಿ -ಮಗಳು ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೂ ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದೆ. ಮುದ್ದಪ್ಪ (50), ಗಾಯಾಳನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಬೇಜವ್ದಾರಿತನಕ್ಕೆ ಈ ಸಾವು ಸಂಭವಿಸಿದೆ ಎಂದು ಕಿಡಿಕಾರಿದ ಗ್ರಾಮಸ್ಥರು ರಸ್ತೆ ತಡೆದು ಆಕ್ರೋಶ ಹೊರಹಾಕಿದರು.
ಮೃತದೇಹಗಳನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆಗೆ ಮುಂದಾದರು. ಹಲವು ಬಾರಿ ಅಂಡರ್ ಪಾಸ್ ನಿರ್ಮಿಸುವಂತೆ ಮನವಿ ಮಾಡಿದರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಶವಗಳನ್ನು ಎತ್ತಲ್ಲ ಎಂದು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪೊಲೀಸರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆಯಿತು.
ಇದನ್ನೂ ಓದಿ: Road Accident : ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಬಸ್; ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಭೀಕರ ದೃಶ್ಯ
ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು
ಹಾಸನ ತಾಲ್ಲೂಕಿನ, ಕಟ್ಟಾಯ ಬಳಿ ವೇಗವಾಗಿ ಬಂದು ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಕಾರೊಂದು ಹಳ್ಳಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದ್ದು, ಕಾರಿನಲ್ಲಿ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಿಸಿ ಮೇಲಕ್ಕೆ ಕರೆತಂದಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಯಿತು. ಗಾಯಾಳುಗಳು ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದವರು ಎಂದು ತಿಳಿದು ಬಂದಿದೆ. ಹಳ್ಳಕ್ಕೆ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ರೆಫ್ರಿಜರೇಟರ್ ಸ್ಫೋಟ
ಮಂಡ್ಯ ನಗರದ ಕೆರೆ ಅಂಗಳದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡಿದೆ. ಪರಿಣಾಮ ಮನೆಯಲ್ಲಿದ್ದ ಕೆಲವು ವಸ್ತುಗಳು ಬೆಂಕಿಗೆ ಆಹುತಿ ಆಗಿವೆ. ನಗರದ ನಿವಾಸಿ ಶೈಲಜಮ್ಮ ಎಂಬುವವರಿಗೆ ಸೇರಿನ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಫ್ರಿಡ್ಜ್ ಸ್ಫೋಟಗೊಂಡಿದೆ. ಅದೃಷ್ಟವತ್ ಯಾವುದೇ ಪ್ರಾಣಾ ಹಾನಿ ಸಂಭವಿಸಿಲ್ಲ.
ಮಂಡ್ಯದ ಗಿರಿಯಾಸ್ ಶೋರೂಂನಲ್ಲಿ ವರ್ಲ್ ಪೂಲ್ ಕಂಪನಿಯ ಫ್ರಿಡ್ಜ್ ಖರೀದಿ ಮಾಡಲಾಗಿತ್ತು. ಸ್ಫೋಟದಿಂದ ಮನೆಯಲ್ಲಿದ್ದ ಸಾವಿರಾರು ರೂ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸದ್ಯ ಕಂಪನಿಯ ವಿರುದ್ಧ ಪೊಲೀಸ್ ಠಾಣಾಗೆ ದೂರು ದಾಖಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ