Site icon Vistara News

Road Accident | ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾವು

Road Accident

ತುಮಕೂರು: ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ (Road Accident) ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಪಾವಗಡ ತಾಲೂಕಿನ ವೈ.ಎನ್.ಹಳ್ಳಿಯ ಗಂಗಾಧರ್ (27) ಮೃತ ಯುವಕ. ವೈ.ಎನ್.ಹಳ್ಳಿ ಕಡೆಯಿಂದ ಕೊರಟಗೆರೆಗೆ ಕಾರ್ಯನಿಮಿತ್ತ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿ, ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident | ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಬಸ್‌; ಮಹಿಳೆ ಸಾವು, ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

Exit mobile version