Site icon Vistara News

Road Accident: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಜಿಂಕೆ ದಾರುಣ ಸಾವು

Road Accident Two wheeler collision Deer death

ಶಿರಾ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಜಿಂಕೆಯೊಂದು ಸ್ಥಳದಲ್ಲೇ (Deer Death) ಮೃತಪಟ್ಟಿದೆ. ಈ ಘಟನೆಯಲ್ಲಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ತಾಲೂಕಿನ ಅಮರಾಪುರ ರಸ್ತೆಯ ಬಡಕನಹಳ್ಳಿ ಕ್ರಾಸ್‌ ಬಳಿ ಸೋಮವಾರ (Road Accident) ಈ ಘಟನೆ ನಡೆದಿದೆ.

ದ್ವಿಚಕ್ರ ವಾಹನ ಸವಾರ ಬಡಕನಹಳ್ಳಿಯ ಮಂಜುನಾಥ (35) ಎಂಬುವವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಶಿರಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

ರಸ್ತೆಯಲ್ಲಿ ಹೋಗುವ ಮಾರ್ಗದಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಯು ವಾಹನಕ್ಕೆ ಅಡ್ಡ ಬಂತು. ಆಗ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಜಿಂಕೆಗೆ ಡಿಕ್ಕಿ ಹೊಡೆದರು. ಡಿಕ್ಕಿಯ ರಭಸಕ್ಕೆ ಜಿಂಕೆ ಮೃತಪಟ್ಟಿದೆ.

ವಿಷಯ ತಿಳಿದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ನವನೀತ, ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Water Crisis: ತುಂಗಭದ್ರಾ ಜಲಾಶಯ ಖಾಲಿ ಖಾಲಿ! ಮುಂದಿನೆರಡು ತಿಂಗಳಿಗೆ ಕೇವಲ 1 ಟಿಎಂಸಿ ಲಭ್ಯ

ಘಟನೆಯು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Exit mobile version