Site icon Vistara News

Shira News: ಶಿರಾದಲ್ಲಿ ʼಪರೋಪಕಾರಂʼ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಅಭಿಯಾನ

Cleanliness programme in Shira Public Health Center premises

ಶಿರಾ: ಪ್ರತಿಯೊಬ್ಬರೂ ಮನೆ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆಯ ಪೌರಾಯುಕ್ತ ರುದ್ರೇಶ್ (Shira News) ತಿಳಿಸಿದರು.

ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಭಾನುವಾರ “ಪರೋಪಕಾರಂ” ಸೇವಾ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನುಷ್ಯ ತನ್ನ ನಿತ್ಯ ಜೀವನ ನಿರ್ವಹಣೆಯ ಜತೆಗೆ ಸಮಾಜದಲ್ಲಿ ಇತರರಿಗೂ ಸಹಾಯ ಮಾಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪರೋಪಕಾರಂ ಸೇವಾ ಸಂಸ್ಥೆಯ ವತಿಯಿಂದ ಶಿರಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಸ್ವಚ್ಛತೆ, ಜಲ, ಪರಿಸರ ಸಂರಕ್ಷಣೆಗಳಂತಹ ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಾಥ್‌ ಮಾತನಾಡಿ, ಎಲ್ಲರೂ ಸ್ವಚ್ಛತೆಯನ್ನು ಕಾಪಾಡುವುದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ. ಸ್ವಚ್ಛತೆ ಇರುವ ಕಡೆ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಗಟ್ಟಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಿರಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಡಿ.ಎಂ. ಗೌಡ, ನಗರಸಭೆಯ ಸದಸ್ಯರಾದ ಉಮಾ ವಿಜಯರಾಜ್, ರಾಧಾಕೃಷ್ಣ, ಸಮಾಜ ಸೇವಕ ಡೈರಿ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಇತರರು ಪಾಲ್ಗೊಂಡಿದ್ದರು.

Exit mobile version