ಶಿರಾ: ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಈಚೆಗೆ ವರ್ಗಾವಣೆಗೊಂಡ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅನಂತ್‌ರಾಜ್ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು (Shira News) ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ
ತಾಲೂಕು ಪಂಚಾಯಿತಿ ನೌಕರರು ಹಾಗೂ ಸ್ಥಳೀಯ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ತಹಸೀಲ್ದಾರ್ ಡಾ. ದತ್ತಾತ್ರೇಯ ಗಾದ ಮಾತನಾಡಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಅನಿವಾರ್ಯ. ಆದರೆ ಕೆಲಸ ನಿರ್ವಹಿಸಿದ ಸ್ಥಳದಲ್ಲಿ ಅಧಿಕಾರಿ ನಿರ್ವಹಿಸಿದ ಕೆಲಸ ಶಾಶ್ವತವಾಗಿ ಉಳಿಯುವಂತಾದಾಗ ಮಾತ್ರ ಸೇವೆಗೆ ನಿಜವಾದ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಅನಂತ್ ರಾಜ್ ಅವರು ಉತ್ತಮ ಕಾರ್ಯನಿರ್ವಹಿಸುವ ಮೂಲಕ ತಾಲೂಕಿನ ಜನತೆಯ ಮನದಲ್ಲಿ ಇದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತ್ ರಾಜ್, ಸನ್ಮಾನ ಸ್ವೀಕರಿಸಿ, ಬಳಿಕ ಮಾತನಾಡಿದರು.
ಇದನ್ನೂ ಓದಿ: Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್! ಹಾಡು ರಿಲೀಸ್ ಮಾಡಿದ ಲೂಸ್ ಮಾದ
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ರುದ್ರೇಶ್, ತಾಲೂಕು ವೈದ್ಯಾಧಿಕಾರಿ ಡಾ. ಸಿದ್ದೇಶ್ವರ್, ಸಹಾಯ ಕೃಷಿ ನಿರ್ದೇಶಕ ಡಾ. ನಾಗರಾಜ್, ನೂತನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾ.ಪಂ. ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.