Site icon Vistara News

Shira News: ಶಿರಾದಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಟಿ.ಬಿ.ಜಯಚಂದ್ರ ಚಾಲನೆ

Vanamahotsava Programme at Shira

ಶಿರಾ: ಅರಣ್ಯ ಇಲಾಖೆಯ ವತಿಯಿಂದ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ (Shira News) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಶಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ವ್ಯಾಪಕವಾಗಬೇಕು ಎಂದು ತಿಳಿಸಿದರು.

ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ ಎಂದು ಹೇಳಿದರು.

ಇದನ್ನೂ ಓದಿ: Foreign Investment: ರಾಜ್ಯದಲ್ಲಿ ಸ್ಮಾರ್ಟ್ ಫೋನ್ ಕ್ಯಾಮೆರಾ ಬಿಡಿಭಾಗ ತಯಾರಿಕೆ ಘಟಕ; ದ.ಕೊರಿಯಾ ಜತೆ ಕರ್ನಾಟಕ ಒಪ್ಪಂದ

ಗಿಡ ಮರಗಳು ಮಾನವನ ಜೀವನಾಡಿಗಳು. ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವುದರ ಮೂಲಕ ಪರಿಸರ ಜಾಗೃತಿ ಮೂಡಿಸಬೇಕು. ಪರಿಸರ ಅಸಮತೋಲನ ತಪ್ಪಿಸಲು ಹೆಚ್ಚು ಗಿಡಮರಗಳನ್ನು ಬೆಳೆಸಿ, ಕಾಡುಗಳನ್ನು ಸಂರಕ್ಷಿಸಿದರೆ ಮಾತ್ರ ಭವಿಷ್ಯದಲ್ಲಿ ಎಲ್ಲರೂ ಸಮೃದ್ಧ ಜೀವನ ನಡೆಸಲು ಸಾಧ್ಯ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

ಈ ಸಂದರ್ಭದಲ್ಲಿ ತಹಸೀಲ್ದಾರ್ ದತ್ತಾತ್ರೇಯ ಜೆ. ಗಾದ, ಆರ್‌ಎಫ್‌ಒ ನವನೀತ್, ಕೃಷಿ ಇಲಾಖೆ ಸಹಾಯ ನಿರ್ದೇಶಕ ನಾಗರಾಜ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.

Exit mobile version