ಶಿರಾ: ಶಿರಾ ನಗರಕ್ಕೆ ಆಗಮಿಸಿದ ’ಕರ್ನಾಟಕ ಸಂಭ್ರಮ-50’ ರ ಕನ್ನಡ ಜ್ಯೋತಿ ರಥಯಾತ್ರೆಯನ್ನು ಭಾನುವಾರ ಸಂಜೆ ಶಿರಾ ಕ್ಷೇತ್ರದ ಶಾಸಕ ಟಿ.ಬಿ. ಜಯಚಂದ್ರ, ತಾಲೂಕು ಆಡಳಿತ, ನಗರಸಭೆ, ತಾ.ಪಂ. ಹಾಗೂ ಕನ್ನಡಪರ ಸಂಘಟನೆಗಳ ವತಿಯಿಂದ ಅದ್ಧೂರಿಯಾಗಿ (Shira News) ಬರಮಾಡಿಕೊಳ್ಳಲಾಯಿತು.
ಈ ವೇಳೆ ಶಾಸಕ ಟಿ.ಬಿ. ಜಯಚಂದ್ರ, ಮಾತನಾಡಿ, ಕರ್ನಾಟಕ ಎಂದು ನಾಮಕರಣಗೊಂಡ 50 ವರ್ಷಗಳ ಈ ಸವಿನೆನಪಿಗಾಗಿ ರಾಜ್ಯ ಸರ್ಕಾರವು ಕನ್ನಡ ಭುವನೇಶ್ವರಿ ತಾಯಿಯ ಜ್ಯೋತಿ ರಥಯಾತ್ರೆಯ ಮೂಲಕ ಕನ್ನಡ ನಾಡಿನ ಹಿರಿಮೆಯನ್ನು ಪ್ರತಿ ಹಳ್ಳಿಗೂ ತಲುಪಿಸುವ ಮಹತ್ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಇದನ್ನೂ ಓದಿ: Kannada New Movie: ಗಣೇಶ್ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ʼದ್ವಾಪರ ದಾಟುತʼ ಹಾಡು ರಿಲೀಸ್!
ನಂತರ ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯು ಸಂಚರಿಸಿತು. ನೂರಾರು ವಿದ್ಯಾರ್ಥಿಗಳು ಹಾಗೂ ವಾದ್ಯ ಮೇಳಗಳೊಂದಿಗೆ ಕಲಾವಿದರು ಹೆಜ್ಜೆ ಹಾಕಿ, ಮೆರವಣಿಗೆಯನ್ನು ಮೆರಗುಗೊಳಿಸಿದರು. ನಾಡಿನ ಸಂಸ್ಕೃತಿ ಬಿಂಬಿಸುವ ಗಾಯನಕ್ಕೆ ಮಹಿಳೆಯರು ನೃತ್ಯವು ಎಲ್ಲರ ಗಮನ ಸೆಳೆಯಿತು.
ಇದನ್ನೂ ಓದಿ: Economic Survey 2023-24: ದೇಶದ ಆರ್ಥಿಕತೆ ಸುಭದ್ರ, ಜಿಡಿಪಿ 7% ಬೆಳವಣಿಗೆ; ಆರ್ಥಿಕ ಸಮೀಕ್ಷೆ ಪ್ರಕಟ
ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ. ದತ್ತಾತ್ರೇಯ ಜೆ. ಗಾದ, ನಗರಸಭೆಯ ಪೌರಾಯುಕ್ತ ರುದ್ರೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಡಿಪಿಒ ರಾಜಾ ನಾಯಕ್, ಆರ್‌ಎಫ್‌ಒ ನವನೀತ್, ಕೃಷಿ ಇಲಾಖೆ ಸಹಾಯ ನಿರ್ದೇಶಕ ನಾಗರಾಜ್ ಸೇರಿದಂತೆ ಕನ್ನಡ ಪರ ಸಂಘಟನೆಯ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.