Site icon Vistara News

Siddaganga Mutt : ಸಿದ್ದಗಂಗಾ ಮಠದಲ್ಲಿ ಉತ್ತರಾಧಿಕಾರಿಗಳಿಗೆ ಪಟ್ಟಾಭಿಷೇಕ ಕಾರ್ಯಕ್ರಮ ಆರಂಭ

siddaganga mutt

#image_title

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿಗೆ ಪಟ್ಟಾಭಿಷೇಕ ಕಾರ್ಯಕ್ರಮ ಆರಂಭವಾಗಿದೆ. ಸರಳವಾಗಿ ಆಚರಿಸಲು ಸಿದ್ದಗಂಗಾ ಮಠದ ಆಡಳಿತ ಮಂಡಳಿ (Siddaganga Mutt) ನಿರ್ಧರಿಸಿತ್ತು.

ತುಮಕೂರಿನ ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ಆಯ್ಕೆಯಾಗಿದ್ದಾರೆ. ರಾಮನಗರ ಜಿಲ್ಲೆ‌ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಉತ್ತರಾಧಿಕಾರಿಯಾಗಿ ಹರ್ಷಾ, ವಿಜಯಪುರ ಬಸವಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಗೌರೀಶ್ ಕುಮಾರ್ ಅವರನ್ನು ಸಿದ್ದಗಂಗಾ ಮಠದ ಆಡಳಿತ ಮಂಡಳಿ ಆಯ್ಕೆ ಮಾಡಿದೆ.

ಇಂದು ಬಸವ ಜಯಂತಿಯ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಮಠದ ಭಕ್ತಾದಿಗಳು, ಸಾರ್ವಜನಿಕರು ಹಾಗೂ ಹಿತೈಷಿಗಳು ಭಾಗವಹಿಸುತ್ತಿದ್ದಾರೆ.

ಶಿವಕುಮಾರ ಶ್ರೀ ಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಪಟ್ಟಾಭಿಷೇಕ ಪ್ರಕ್ರಿಯೆ ಆರಂಭವಾಗಿದೆ. ವಿಶೇಷ ಪೂಜೆಯಲ್ಲಿ ಸಿದ್ದಲಿಂಗ ಸ್ವಾಮೀಜಿ ಸೇರಿ ಅನೇಕ ಮಠಾಧೀಶರುಗಳು ಭಾಗವಹಿಸಿದ್ದಾರೆ. ಬೆಳಗಿನ ಜಾವದಿಂದ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.

Exit mobile version