Site icon Vistara News

Tumkur News: ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಿದೆ: ವೈ.ಎ. ನಾರಾಯಣಸ್ವಾಮಿ

State Government Completely Neglected Education Sector says MLC Y.A. Narayanaswamy

ಶಿರಾ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಎಲ್ಲಾ ಸಂದರ್ಭದಲ್ಲೂ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಜೆಂಡ ಉತ್ತಮ ಸಮಾಜ ಕಟ್ಟಬೇಕು, ಗುಣಾತ್ಮಕ ಶಿಕ್ಷಣ ನೀಡಬೇಕು. ಶಿಕ್ಷಕರಲ್ಲಿ ನೈಪುಣ್ಯತೆ ತರಬೇಕು. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಬೇಕು ಎಂಬುದು. ನನ್ನ 20 ವರ್ಷದ ಅನುಭವದಲ್ಲಿ ಶೇ.75 ರಷ್ಟು ಶಿಕ್ಷಕರ ಸಮಸ್ಯೆಗಳನ್ನು ಬಿಜೆಪಿ ಸರ್ಕಾರ ಪರಿಹಾರ ಮಾಡಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಎನ್‌ಪಿಎಸ್ ರದ್ದು-ಒಪಿಎಸ್ ಜಾರಿ ಮಾಡುವ ಭರವಸೆ ನೀಡಿದ್ದಾರೆ, ಇದನ್ನು ಕಾರ್ಯಗತಗೊಳಿಸಲು ಮುಂದಾಗಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: Year Ender 2023: ಈ ವರ್ಷ ಕಲಿತ ಆರೋಗ್ಯಪಾಠಗಳ ಮುಖ್ಯಾಂಶಗಳೇನು?

ರಾಜ್ಯ ಸರ್ಕಾರ 7ನೇ ವೇತನ ಆಯೋಗ, ಓಪಿಎಸ್ ಜಾರಿ ಮಾಡಬೇಕು. ಶಿಕ್ಷಕರು ಮತ್ತು ನೌಕರರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: Karnataka Weather: ಮಳೆ ಇಲ್ಲ, ಚಳಿಯೇ ಎಲ್ಲ; ತಣ್ಣಗಾಗಿದೆ ಬೆಂಗಳೂರು; ತಾಪಗೊಂಡಿದೆ ಮಂಗಳೂರು!

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version