ತುಮಕೂರು: ತುಮಕೂರು ತಾಲೂಕಿನ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ಉರುಳಿದ ರಭಸಕ್ಕೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಇದರಿಂದ ಕ್ಯಾತಸಂದ್ರದ ಜಾಸ್ ಟೋಲ್‌ನಿಂದ ನಂದಿಹಳ್ಳಿವರೆಗೂ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ | ಎನ್ಎಚ್-48 ರಾಷ್ಟ್ರೀಯ ಹೆದ್ದಾರಿಯಲ್ಲ, ಇದು ಸಾವಿನ ರಹದಾರಿ