Site icon Vistara News

Theft Case : ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 1 ಕೋಟಿ ರೂ. ಜತೆಗೆ ಚಿನ್ನಾಭರಣ ದೋಚಿದ ಕಳ್ಳರು!

theft case

ತುಮಕೂರು: ಸೇಟುಗಳ ಕಾರು ಅಡ್ಡಗಟ್ಟಿ ಕಳ್ಳರು ಒಂದು ಕೋಟಿ ರೂ. ಹಣ ದೋಚಿರುವ (Theft case) ಆರೋಪ ಕೇಳಿ ಬಂದಿದೆ. ತುಮಕೂರು ತಾಲ್ಲೂಕಿನ ನೆಲಹಾಳ್‌ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಶನಿವಾರ ಬೆಳಗಿನ ಜಾವ ಕಾರು ಅಡ್ಡಗಟ್ಟಿ 350 ಕೆ.ಜಿ ಬೆಳ್ಳಿ ಗಟ್ಟಿಗಳು, 1 ಕೋಟಿ ರೂ. ಹಣ ದರೋಡೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ.

ತಮಿಳುನಾಡಿನ ಸೇಲಂ ನಗರದ ಬೆಳ್ಳಿ ಆಭರಣ ವರ್ತಕ ಅನಿಲ್‌ ಮಹದೇವ್‌ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬೆಳ್ಳಿ ಗಟ್ಟಿ ಖರೀದಿಸಿ ಕಾರಿನಲ್ಲಿ ಸೇಲಂಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಅನಿಲ್‌ ಅವರ ಮಗ ಬಾಲಾಜಿ, ಸ್ನೇಹಿತರಾದ ಗಣೇಶ್‌, ವಿನೋದ್‌ ಜತೆಯಲ್ಲಿದ್ದರು. ನೆಲಹಾಳ್ ಬಳಿ ಮೂರು ಕಾರುಗಳಲ್ಲಿ ಬಂದ ಏಳೆಂಟು ಕಳ್ಳರು ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ತಕ್ಷಣ ಕಾರಿನಿಂದ ಇಳಿದು ಬಾಲಾಜಿ, ಗಣೇಶ್‌, ವಿನೋದ್‌ ಕಳ್ಳರಿಂದ ತಪ್ಪಿಸಿಕೊಂಡು ಓಡಿದ್ದಾರೆ.

ಇತ್ತ ಕಳ್ಳರು ಅನಿಲ್‌ ಅವರನ್ನು ಕಾರು ಸಮೇತ ಅಪಹರಿಸಿಕೊಂಡು ಹೋಗಿದ್ದಾರೆ. ಸ್ವಲ್ಪ ದೂರ ಕರೆದೊಯ್ದು ಕೋರ ಪೊಲೀಸ್ ಠಾಣೆ ವ್ಯಾಪ್ತಿಯ ಅಜ್ಜೇನಹಳ್ಳಿ ಬಳಿ ಅನಿಲ್‌ ಮತ್ತು ಕಾರನ್ನು ಬಿಟ್ಟು, ಹಣ ಮತ್ತು ಬೆಳ್ಳಿ ಗಟ್ಟಿ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಅನಿಲ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಅನಿಲ್‌ ಸೇಲಂನಲ್ಲಿ ಹತ್ತು ವರ್ಷದಿಂದ ಬೆಳ್ಳಿ ಆಭರಣ ಮಾರಾಟ ಮಳಿಗೆ ಹೊಂದಿದ್ದಾರೆ. ಕಳ್ಳರು ಎಲ್ಲಿಂದ ಬಂದಿದ್ದರು, ಬೆಳ್ಳಿ ಗಟ್ಟಿ ಸಾಗಿಸುತ್ತಿರುವ ಮಾಹಿತಿ ಸಿಕ್ಕಿದ್ದೇಗೆ ಎಂಬುದರ ಬಗ್ಗೆ ಕೋರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version