ತುಮಕೂರು: ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿಸೆಂಬರ್ 2ರಂದು ಬಾಲಕನಿಗೆ ಸಕಾಲಕ್ಕೆ ಚಿಕಿತ್ಸೆ ನೀಡುವಲ್ಲಿ ವಿಫಲರಾಗಿದ್ದಕ್ಕೆ ಸಂಬಂಧಿಸಿ, ಆಡಳಿತ ವೈದ್ಯಧಿಕಾರಿ ಹಾಗೂ ಆಂಬ್ಯುಲೆನ್ಸ್ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಆದೇಶ ಹೊರಡಿಸಿದ್ದಾರೆ. ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಪ್ರಕರಣ ಏನು? ಐದು ವರ್ಷದ ಬಾಲಕ ನೀರಿನ ಸಂಪ್ ನಲ್ಲಿ ಬಿದ್ದು ಆಕಸ್ಮಿಕವಾಗಿ ಸಾವಿಗೀಡಾಗಿದ್ದ. ಮಗನನ್ನು ಉಳಿ ಉಳಿಸಿಕೊಳ್ಳುವ ಸಲುವಾಗಿ ಕೊಡಿಗೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ
ಆ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, 24/7 ಸೇವೆ ನೀಡುವ ಆಸ್ಪತ್ರೆಯಾಗಿರುವುದರಿಂದ ಕನಿಷ್ಠ ಇಬ್ಬರು ವೈದ್ಯರು ಇರಬೇಕಿತ್ತು. ಒಬ್ಬ ಡಾಕ್ಟರ್ ಕೂಡ ಇದ್ದಿರಲಿಲ್ಲ. ಈ ಪ್ರಕರಣದ ಬಗ್ಗೆ ಇಲಾಖೆ ತನಿಖೆ ನಡೆಸಿದ್ದು, ಕರ್ತವ್ಯ ಲೋಪ ಕಂಡುಬಂದಿದೆ.ಹೀಗಾಗಿ ಆಡಳಿತ ವೈದ್ಯಧಿಕಾರಿ ಹಾಗೂ ಆಂಬ್ಯುಲೆನ್ಸ್ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.