Site icon Vistara News

Tumkur News: ಕೊರಟಗೆರೆಯಲ್ಲಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 5ನೇ ಪುಣ್ಯಸ್ಮರಣೆ

5th commemoration of dr sri shivakumara swamiji at koratagere

ಕೊರಟಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕ ಕೊರಟಗೆರೆ ವತಿಯಿಂದ ಪಟ್ಟಣದಲ್ಲಿ ಭಾನುವಾರ ತ್ರಿವಿಧ ದಾಸೋಹಿ, ಕಾಯಕಯೋಗಿ ಸಿದ್ದಗಂಗೆಯ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಿದ್ಧಗಂಗೆಯ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ಅರ್ಪಿಸಲಾಯಿತು.

ಇದನ್ನೂ ಓದಿ: Overcooked Foods Lose Their Nutrition: ಆಹಾರವನ್ನು ಅತಿಯಾಗಿ ಬೇಯಿಸಬೇಡಿ; ಏಕೆಂದರೆ…

ಇದೇ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 2024 ರ ಕ್ಯಾಲೆಂಡರ್‌ ಅನ್ನು ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: Job Alert: ಬ್ಯಾಂಕ್ ಆಫ್ ಬರೋಡಾದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸಿದ್ದಮಲ್ಲಪ್ಪ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ಹಾಗೂ ನಾಗರಾಜು, ವೀರಭದ್ರಯ್ಯ, ಉಮಾಶಂಕರಾಧ್ಯ, ಸಂಕೇನಹಳ್ಳಿ ಮಂಜುನಾಥ್, ಸವಿತ, ವೇದಾಂಬ, ಮುದ್ದಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version