ಶಿರಾ: ನಗರದ ಹೊರವಲಯದ ನಗರಸಭೆಯ ಕಸ ವಿಲೇವಾರಿ ಘಟಕಕ್ಕೆ ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿ (Accidental Fire) ಬಿದ್ದು, ಸುತ್ತಮುತ್ತಲೂ ದಟ್ಟ ಹೊಗೆ ಆವರಿಸಿದ ಘಟನೆ (Tumkur News) ಜರುಗಿದೆ.
ಘಟಕದಲ್ಲಿನ ಕಸದ ರಾಶಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ನಗರದ ಹೊರವಲಯದಲ್ಲಿರುವ ಭುವನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನತೆ ಉಸಿರುಗಟ್ಟಿಸುವ ದಟ್ಟ ಹೊಗೆಘಾಟು ಮತ್ತು ದುರ್ವಾಸನೆಯ ನಡುವೆ ದಿನ ದೂಡುವಂತಾಯಿತು.
ಸುತ್ತಮುತ್ತಲಿನ ಗ್ರಾಮಸ್ಥರು ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಇದನ್ನೂ ಓದಿ: Virat Kohli: ಪಂಜಾಬ್ ವಿರುದ್ಧ ಅರ್ಧಶತಕ ಬಾರಿಸಿ ಕೊಹ್ಲಿ ನಿರ್ಮಿಸಿದ ದಾಖಲೆಗಳು ಹೀಗಿವೆ!
ವಿಷಯ ತಿಳಿದ ತಕ್ಷಣ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ನಗರಸಭೆ ಆಯುಕ್ತ ರುದ್ರೇಶ್, ಬೇಸಿಗೆ ಆದ ಕಾರಣ ಕಸದರಾಶಿಗೆ ಬೆಂಕಿ ತಗಲಿರಬಹುದು, ಮುಂಜಾಗ್ರತೆ ಕ್ರಮ ಕೈಗೊಂಡು ಬೆಂಕಿ ನಂದಿಸಲಾಗಿದೆ. ಕಸದ ಪ್ರಮಾಣವು ಹೆಚ್ಚಿರುವುದರಿಂದ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Drowned In River : ನದಿಯಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಯುವಕ
ಕಸ ವಿಲೇವಾರಿ ಘಟಕವನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಈ ರೀತಿ ಪದೇ ಪದೇ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆಯಿಂದಾಗಿ ಸಮಸ್ಯೆ ಅನುಭವಿಸುವಂತಾಗಿದೆ ಆದರೂ ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಇದೇ ರೀತಿ ಮುಂದುವರೆದರೆ ಗ್ರಾಮಸ್ಥರೆಲ್ಲರೂ ಸೇರಿ ಪ್ರತಿಭಟನೆ ನಡೆಸಲಾಗುವುದು ಎಂದು ಭುವನಹಳ್ಳಿ ಗ್ರಾಮದ ಜನಾರ್ಧನ್ ಎಚ್ಚರಿದ್ದಾರೆ.