Site icon Vistara News

Tumkur News: ಮಾದಕ ದ್ರವ್ಯ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಪಿಎಸ್ಐ ಚಂದ್ರಶೇಖರ್

Awareness programme on ill effects of drug consumption on health

ಶಿರಾ: ತಾಲೂಕಿನ ಶ್ರೀ ಸಿದ್ಧಾರ್ಥ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ತಾವರೆಕೆರೆ ಪೊಲೀಸ್ ಠಾಣಾ ವತಿಯಿಂದ ಮಾದಕ ದ್ರವ್ಯ (Drugs) ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ (Awareness) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಠಾಣೆಯ ಪಿಎಸ್ಐ ಚಂದ್ರಶೇಖರ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು ಹಾಗೂ ಮಾದಕ ವ್ಯಸನಿಗಳಿಗೆ ಮತ್ತು ಮಾದಕವಸ್ತು ಸಂಬಂಧಿತ ಅಪರಾಧಗಳಿಗೆ ನೀಡಲಾಗುವ ಶಿಕ್ಷೆಗಳ ಕುರಿತು ಅವರು ತಿಳಿಸಿದರು.

ಇದನ್ನೂ ಓದಿ: Hyundai Creta facelift : ಹೀಗಿದೆ ನೋಡಿ ಎಲ್ಲರ ಅಚ್ಚುಮೆಚ್ಚಿನ ಕ್ರೆಟಾ ಕಾರಿನ ಹೊಸ ವಿನ್ಯಾಸ

ಈ ವೇಳೆ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ವಿರುದ್ಧ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕಾಲೇಜಿನ ಪ್ರಾಂಶುಪಾಲ ಹನುಮಂತರಾಯಪ್ಪ ಮಾತನಾಡಿ, ಮಾದಕ ವಸ್ತುಗಳ ಸೇವನೆಯ ಬಗ್ಗೆ ಜಾಗೃತಿ ಇಂದಿನ ಅಗತ್ಯವಾಗಿದೆ. ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Dog Love : ಓಡೋಡಿ ಬಂದು ಮೇಕೆ ಮರಿಗೆ ಹಾಲುಣಿಸುವ ಶ್ವಾನ! ಮಾತೃತ್ವಕ್ಕೆ ಮಾರುಹೋದ ಜನ

ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Exit mobile version