Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ! Vistara News
Connect with us

ಕರ್ನಾಟಕ

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

Tumkur News : ತುಮಕೂರಿನಲ್ಲಿ ಮತ್ತೆ ಮೌಡ್ಯಾಚರಣೆ (Superstition) ಬಯಲಿಗೆ ಬಂದಿದೆ. ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ವಿಚಿತ್ರ ಸಂಪ್ರದಾಯವನ್ನು ಆಚರಿಸಲಾಗುತ್ತಿದೆ.

VISTARANEWS.COM


on

Villagers exclude menstruating women
ಗೋಮೂತ್ರ ಸಿಂಪಡಿಸಿ ಗ್ರಾಮದೊಳಗೆ ಬಿಟ್ಟುಕೊಂಡ ಗ್ರಾಮಸ್ಥರು
Koo

ತುಮಕೂರು: ತುಮಕೂರಲ್ಲಿ (Tumkur News) ಗೊಲ್ಲ‌ ಸಮುದಾಯದಿಂದ ಮೌಡ್ಯಾಚರಣೆ (Superstition) ಮುಂದುವರೆದಿದೆ. ಮುಟ್ಟಾದ (periods) ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚಿಕ್ಕನೆಟ್ಟಗುಂಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಂಗನವಾಡಿ ಶಿಕ್ಷಕಿ ಸುಜಾತಾ ಹಾಗೂ ಬಿಸಿಯೂಟದ ಕಾರ್ಯಕರ್ತೆ ಸಾವಿತ್ರಮ್ಮ ಜತೆಗೆ ಮತ್ತೊರ್ವ ಮಹಿಳೆಯನ್ನು ಊರ ಹೊರಗಿಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಗುಬ್ಬಿ ತಹಸೀಲ್ದಾರ್‌ ಆರತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಹಸೀಲ್ದಾರ್‌ ಆರತಿ ಅಂಗನವಾಡಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ರೀತಿಯ ಮೌಡ್ಯಾಚರಣೆ ನೆಪದಲ್ಲಿ ಶೋಷಣೆ ಮಾಡಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಬಳಿಕ ಮಹಿಳೆಯರಿಗೆ ಗೋಮಯ್ಯ (ಗೋಮೂತ್ರ) ಸಿಂಪಡಿಸಿ ಗ್ರಾಮಸ್ಥರು ಗ್ರಾಮದೊಳಗೆ ಬಿಟ್ಟುಕೊಂಡಿದ್ದಾರೆ.

Tehsildar Aarti
ಗ್ರಾಮದ ಹೊರಗಿದ್ದವರನ್ನು ಮನೆಗೆ ಕರೆತಂದ ತಹಸೀಲ್ದಾರ್‌ ಆರತಿ ಹಾಗೂ ಸಿಬ್ಬಂದಿ ವರ್ಗ

ವಿಪರೀತ ಗಾಳಿ ಬೀಸಲಿ, ಮಳೆಯೇ ಬರಲಿ, ಸುಡು ಸುಡು ಬಿಸಿಲು ಇದ್ದರೂ ಮಹಿಳೆಯರು ಮುಟ್ಟಾದರೆ ಊರಿನಿಂದ ಹೊರಗೆ ಹೋಗಬೇಕು. ಮುಟ್ಟಿನ ಸಮಯದಲ್ಲಿ ಆರೈಕೆಯಲ್ಲಿ ಇರಬೇಕಾದ ಮಹಿಳೆಯರನ್ನು ಈ ರೀತಿ ಮೌಡ್ಯಾಚರಣೆ ಮೂಲಕ ಹಿಂಸಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಮುಟ್ಟಾದರೆ ಮೂರು ದಿನಗಳ ಕಾಲ ಮಹಿಳೆಯರನ್ನು ಊರಿನಿಂದ ಹೊರಗಿಡುವ ಸಂಪ್ರದಾಯವನ್ನು ಕೆಲವರು ಇಂದಿಗೂ ಮುಂದುವರಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಮೌಢ್ಯಕ್ಕೆ ಮಗು ಬಲಿ, ಗೊಲ್ಲರಹಟ್ಟಿಯ ಮಹಿಳೆಯರ ಸಂಕಟ ಇಲ್ಲಿಗೇ ಕೊನೆಯಾಗಲಿ

ಸೂತಕದ ಸಂಪ್ರದಾಯಕ್ಕೆ ಜೋತು ಬಿದ್ದ ಗೊಲ್ಲ ಸಮುದಾಯ

ತುಮಕೂರು (Tumkur News) ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ (kadugollara Tradition) ಕಳೆದ ಜುಲೈ 26ರಂದು ಸೂತಕದ ಸಂಪ್ರದಾಯಕ್ಕೆ ಮಗುವೊಂದು ಮೃತಪಟ್ಟಿತ್ತು. ಸಿದ್ದೇಶ್ ಮತ್ತು ವಸಂತ ದಂಪತಿಯ ಮಗು ವಿಪರೀತ ಶೀತದಿಂದ (cold weather) ಬಳಲಿ ಮೃತಪಟ್ಟಿತ್ತು.

ಶೀತ ಹೆಚ್ಚಾಗಿದ್ದರಿಂದ ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗೂಸು ಜು.26ರಂದು ಪ್ರಾಣಬಿಟ್ಟಿತ್ತು. ತಮ್ಮ ದೇವರಿಗೆ ಸೂತಕ ಆಗಲ್ಲ ಎಂದು ಬಾಣಂತಿ, ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದರು. ಮಳೆ, ಗಾಳಿಯಿದ್ದರೂ ತಾಯಿ, ಮಗು ಊರ ಹೊರಗಿನ ಚಿಕ್ಕ ಗುಡಿಸಲಿನಲ್ಲಿಯೇ ವಾಸವಿದ್ದರು. ಆದರೆ ಮೌಡ್ಯತೆಯೇ ಮಗುವಿನ ಜೀವ ತೆಗೆದಿತ್ತು.

ದೇವರ ಹೆಸರಲ್ಲಿ ಮೌಢ್ಯ

ಮನುಷ್ಯ ಎಷ್ಟೇ ಆಧುನಿಕತೆಯತ್ತ ಮುಖ ಮಾಡುತ್ತಿದ್ದರೂ, ಚಂದ್ರನ ಮೇಲೆ ರಾಕೆಟ್‌ ಹಾರಿದರೂ ಕೆಲವು ಕಡೆಗಳಲ್ಲಿ ಮೌಡ್ಯಾಚರಣೆಗಳು ಮಾತ್ರ ಇಂದಿಗೂ ರೂಢಿಯಲ್ಲಿವೆ. ದೇವರು, ಸಂಪ್ರದಾಯದ ಹೆಸರಿನಲ್ಲಿ ಮನುಷ್ಯರನ್ನೇ ಕೀಳಾಗಿ ಕಾಣುವ ಪರಿಪಾಠ ಇನ್ನೂ ಕೆಲವು ಸಮುದಾಯಗಳಲ್ಲಿ ಹಾಗೆಯೇ ಇದೆ. ಗೊಲ್ಲರಹಟ್ಟಿಯಲ್ಲಿ ವಾಸಿಸುವ ಕಾಡುಗೊಲ್ಲರಲ್ಲಿ ಇಂದಿಗೂ ಕೂಡ ಸೂತಕದ ಸಂಪ್ರದಾಯ ಆಚರಣೆಯಲ್ಲಿದೆ. ತಮ್ಮ ದೇವರಿಗೆ ಸೂತಕ ಆಗಲ್ಲ ಎಂದು ಬಾಣಂತಿ ಮತ್ತು ಹಸುಗೂಸನ್ನೇ ಊರಿನಿಂದ ಹೊರಗಿಡುತ್ತಾರೆ. ಎರಡು ತಿಂಗಳು ಊರ ಹೊರಗೆ ನಿರ್ಮಿಸಿರುವ ಚಿಕ್ಕ ಗುಡಿಸಲಿನಲ್ಲಿಯೇ ಇರಬೇಕು.

ಊರಿಗೆ ಕೇಡು ಬರುವ ಭೀತಿ

ನಮ್ಮ ದೇವರಿಗೆ ಸೂತಕ ಆಗಲ್ಲ. ಹಾಗಾಗಿ ನಾವು ಬಾಣಂತಿಯನ್ನು ಒಳಗೆ ಬಿಟ್ಟುಕೊಳ್ಳುವುದಿಲ್ಲ. ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು ಆಗುತ್ತದೆ ಎಂಬುದು ಈ ಊರಿನವರ ನಂಬಿಕೆ. ಕಾಡುಗೊಲ್ಲರ ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಸೂತಕ ಆಗಲ್ಲ. ಹಿಂದಿನಿಂದಲ್ಲೂ ಈ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮಳೆ, ಗಾಳಿ ಏನೇ ಬರಲಿ, ಅವರು ಇದ್ದರೂ, ಸತ್ತರೂ ಊರಿಂದ ಆಚೆಯೇ ಇರಬೇಕು. ಮನೆಯೊಳಗೆ ಬಿಟ್ಟುಕೊಳ್ಳಲು ಸಾಧ್ಯವೇ ಇಲ್ಲ ಎಂಬುದು ಊರಿನವರ ಉತ್ತರವಾಗಿತ್ತು.

ಮಗು-ಬಾಣಂತಿಯ ರಕ್ಷಿಸಿದ್ದ ಗುಬ್ಬಿ ನ್ಯಾಯಾಧೀಶೆ

ಇದೇ ರೀತಿ ಪ್ರಕರಣವೊಂದು ಆಗಸ್ಟ್‌ 24ರಂದು ಮರುಕಳಿಸಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ (kadugollara Tradition) ಮಗು ಬಾಣಂತಿಯನ್ನು ಊರಿಂದಾಚೆಗೆ ಇಡಲಾಗಿತ್ತು. ಪ್ರಾಣಿಗಳಿಗೂ ಯೋಗ್ಯವಲ್ಲದ ಚಿಕ್ಕ ಗುಡಿಸಲಿನಲ್ಲಿ ಮಗು ಬಾಣಂತಿಯನ್ನು ಇರಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶೆ (Gubbi Court Judge) ಉಂಡಿ ಮಂಜುಳ ಶಿವಪ್ಪ ಗ್ರಾಮಕ್ಕೆ ಭೇಟಿ ನೀಡಿ ಮಗು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿದ್ದರು. ಮಗುವನ್ನು ತಾವೇ ಕೈಗೆತ್ತಿಕೊಂಡು ಮನೆಗೆ ಕರೆತಂದಿದ್ದರು. ಸರಿಯಾದ ಸಮಯಕ್ಕೆ ಸ್ಥಳಕ್ಕೆ ಭೇಟಿ ನೀಡಿ ಮಗು ಮತ್ತು ಬಾಣಂತಿಯನ್ನು ಮನೆಗೆ ಬಿಟ್ಟು ಬಿದ್ದಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

CM Siddaramaiah : ಶಾಸಕ, ಸಂಸದರಿಗೆ Good News; ಇನ್ನು ಮುಂದೆ ಪ್ರತಿ ಶನಿವಾರ ಸಿಎಂ ಸಿದ್ದರಾಮಯ್ಯ ನಿಮ್ಮನ್ನು ಭೇಟಿಯಾಗ್ತಾರೆ!

CM Siddaramaiah : ಮುಖ್ಯಮಂತ್ರಿಗಳಾದವರು ಶಾಸಕರ ಜತೆ ನಿರಂತರ ಸಂಪರ್ಕದಲ್ಲಿರಬೇಕು ಎನ್ನುವುದನ್ನು ಅರಿತಿರುವ ಸಿದ್ದರಾಮಯ್ಯ ಅದಕ್ಕಾಗಿ ವಾರದಲ್ಲೊಂದು ದಿನ ಫಿಕ್ಸ್‌ ಮಾಡಿದ್ದಾರೆ. ಆಡಳಿತಾತ್ಮಕವಾಗಿಯೂ ಇದು ಉತ್ತಮ ನಿರ್ಧಾರ ಎಂದು ತರ್ಕಿಸಲಾಗಿದೆ.

VISTARANEWS.COM


on

Edited by

CM Siddaramiah new
Koo

ಬೆಂಗಳೂರು: ಇನ್ನು ಮುಂದೆ ಪ್ರತಿ ಶನಿವಾರ ರಾಜ್ಯದ ಯಾವುದೇ ಸಂಸದರು, ಶಾಸಕರು (Every saturday meet with MLAs and MPs) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ (Home office Krishna) ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದು ಸೆಪ್ಟೆಂಬರ್‌ 23ರಿಂದಲೇ ಜಾರಿಗೆ ಬಂದಿದೆ.

ಮುಖ್ಯಮಂತ್ರಿಗಳು ಇನ್ನು ಮುಂದೆ ಪ್ರತಿ ಶನಿವಾರ ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಸಂಸದರು, ರಾಜ್ಯದ ಎಲ್ಲ ವಿಧಾನಸಭೆ ಸದಸ್ಯರು ಮತ್ತು ವಿಧಾನಪರಿಷತ್‌ ಸದಸ್ಯರ ಭೇಟಿಗೆ ಲಭ್ಯವಿರುತ್ತಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನಗಳ ಬಗ್ಗೆ ಚರ್ಚೆ ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದು ಪಕ್ಷಾತೀತವಾಗಿ ನಡೆಯುವ ಕಾರ್ಯಕ್ರಮವಿದ್ದು, ಯಾವ ಪಕ್ಷದ ಶಾಸಕರು, ಸಂಸದರು ಬೇಕಾದರೂ ಮುಕ್ತವಾಗಿ ಬಂದು ತಮ್ಮ ಅಹವಾಲುಗಳ ಬಗ್ಗೆ ಮಾತುಕತೆ ನಡೆಸಬಹುದಾಗಿದೆ.

ಭೇಟಿಗೆ ಮೊದಲು ಚೆಕ್‌ ಮಾಡಿಕೊಳ್ಳಿ

ಇದು ಮುಕ್ತವಾದ ಭೇಟಿಯೇ ಆಗಿದ್ದರೂ ಮುಖ್ಯಮಂತ್ರಿಗಳ ಲಭ್ಯತೆಯ ಆಧಾರದಲ್ಲಿ ನಡೆಯುತ್ತದೆ. ಮುಖ್ಯಮಂತ್ರಿ ತೀರಾ ಅನಿವಾರ್ಯವಾದ ಸಂದರ್ಭ ಹೊರತುಪಡಿಸಿ ಪ್ರತಿ ಶನಿವಾರ ಭೇಟಿಗೆ ಲಭ್ಯರಿರುತ್ತಾರೆ. ಅದರೆ, ಮೊದಲೇ ಅವರ ಇರುವಿಕೆಯನ್ನು ಖಾತರಿ ಮಾಡಿಕೊಂಡು ಬರಬಹುದು ಎಂದು ತಿಳಿಸಲಾಗಿದೆ.

ಎಲ್ಲರೂ ಒಂದೇ ಬಾರಿಗೆ ಬಂದು ಭೇಟಿಯಾಗಲು ಒತ್ತಡ ಸೃಷ್ಟಿಸುವುದಕ್ಕಿಂತ ಒಂದು ದಿನ ಎಷ್ಟು ಜನರು ಭೇಟಿಯಾಗಬಹುದು ಎಂಬುದನ್ನು ಪರಿಗಣಿಸಿ ಒಂದು ದಿನದಲ್ಲಿ ಎಷ್ಟು ಮಂದಿಗೆ ಅವಕಾಶ ನೀಡಬಹುದೋ ಅಷ್ಟು ಜನರು ಮಾತ್ರ ಬಂದರೆ ಒಳ್ಳೆಯದು ಎಂದು ತಿಳಿಸಲಾಗಿದೆ.

ಶಾಕಸರು ಮತ್ತು ಸಂಸದರು ಮುಂದಿನ ಶನಿವಾರದ ಭೇಟಿಗಾಗಿ ಮೊದಲೇ ಬುಕ್‌ ಮಾಡಿಕೊಂಡರೆ ಸಮಯಾವಕಾಶದ ಜತೆಗೆ ಸಮಯವನ್ನೂ ನಿಗದಿಪಡಿಸಲು ಅವಕಾಶವಾಗುತ್ತದೆ ಎನ್ನಲಾಗಿದೆ. ವಿಶೇಷಾಧಿಕಾರಿಗಳು ಈ ಎಲ್ಲ ಅಂಶಗಳನ್ನು ಪರಿಗಣಿಸಿ ಭೇಟಿಗೆ ಅವಕಾಶ ಕಲ್ಪಿಸಲಿದ್ದಾರೆ.

ಶಾಸಕರ ಭೇಟಿಗೆ ಅವಕಾಶ ಕೇಳಿದ್ದ ರಾಯರೆಡ್ಡಿ

ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿಗಳು ಶಾಸಕರ ಜತೆಗೆ ಮುಕ್ತವಾಗಿ ಮಾತನಾಡಲು ಅವಕಾಶ ಸಿಗುವುದರಿಂದ ಹಲವಾರು ಸಮಸ್ಯೆಗಳು ಬಗೆಹರಿಯುತ್ತವೆ ಎನ್ನಲಾಗಿದೆ. ರಾಜಕೀಯವಾದುದು, ಇತರ ಸಾಮಾಜಿಕ ವಿಚಾರಗಳಿಗೂ ಇದು ಅನುಕೂಲ ಎನ್ನಲಾಗಿದೆ. ಹಿಂದಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ತಮಗೆ ಸಿಎಂ ಜತೆ ಮಾತನಾಡಲು ಅವಕಾಶವೇ ಸಿಗುತ್ತಿಲ್ಲ, ಅನುದಾನ ಸಿಗುತ್ತಿಲ್ಲ ಎಂಬ ಕಾರಣ ನೀಡಿಯೇ 17 ಶಾಸಕರು ಪಕ್ಷ ಬಿಟ್ಟು ಹೋಗಿದ್ದರು. ವ್ಯವಸ್ಥೆಯಲ್ಲಿ ಶಾಸಕರ ಜತೆ ಸಂವಹನ ಅತ್ಯಂತ ಮುಖ್ಯ ಎಂಬುದನ್ನು ಮನಗಂಡು ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: CM Siddaramaiah: ಬರಿಗಾಲಲ್ಲಿ ಬರುವವರನ್ನು ಕಾರಲ್ಲಿ ಓಡಾಡೋರು ಗೌರವಿಸಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

CM and DCM

ಸಿದ್ದರಾಮಯ್ಯ ಸಭೆಗಳೆಂದರೆ ಅತ್ಯಂತ ಗಹನ

ಅದರ ಜತೆಗೆ ಆಡಳಿತಾತ್ಮಕ ವಿಷಯದಲ್ಲಿ ಸಾಕಷ್ಟು ಪರಿಣತಿಯನ್ನು ಹೊಂದಿರುವ ಸಿದ್ದರಾಮಯ್ಯ ಅವರು ಯಾವುದೇ ಸಭೆಯನ್ನಾದರೂ ಪರಿಪೂರ್ಣವಾಗಿ ನಡೆಯುತ್ತದೆ. ಅವರು ನಡೆಸುವ ಕೆಡಿಪಿ ಸಭೆಗಳು, ಅಧಿಕಾರಿಗಳ ಸಭೆಗಳೂ ಅತ್ಯಂತ ಗಹನವಾಗಿರುವುದು ಇದೇ ಕಾರಣಕ್ಕಾಗಿ. ಕೆಲವೊಮ್ಮೆ ಅವರು ಮಧ್ಯಾಹ್ನದ ಊಟವನ್ನೂ ಟೇಬಲ್‌ಗೇ ತರಿಸಿಕೊಂಡು ನಿರಂತರ ಏಳೆಂಟು ಗಂಟೆ ಸಭೆ ನಡೆಸಿದ್ದೂ ಇದೆ. ಹಲವಾರು ವಿಚಾರಗಳ ತೀರ್ಮಾನಗಳು ಅಲ್ಲೇ ನಡೆಯುತ್ತವೆ. ಏನು ಮಾಡಬೇಕು, ಏನು ಮಾಡಬಾರದು ಎಂಬ ಸ್ಪಷ್ಟ ಸೂಚನೆಯನ್ನು ಅಲ್ಲೇ ನೀಡಲಾಗುತ್ತದೆ.

Continue Reading

ಕರ್ನಾಟಕ

KSOU Exam: ಪ್ರಶ್ನೆಪತ್ರಿಕೆ ಮಾರಾಟವಾದ ಕಂಪ್ಯೂಟರ್‌ ಇನ್‌ ಬ್ಯುಸಿನೆಸ್‌ ಮರು ಪರೀಕ್ಷೆಗೆ ನಿರ್ಧಾರ, ಯಾವಾಗ ReExam?

KSOU Exam : ಬಿಕಾಂನ ಕಂಪ್ಯೂಟರ್‌ ಇನ್‌ ಬ್ಯುಸಿನೆಸ್‌ ಪ್ರಶ್ನೆ ಪತ್ರಿಕೆ ಪರೀಕ್ಷೆ ಮುನ್ನಾದಿನ ಲೀಕ್‌ ಆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹಾಗಿದ್ದರೆ ಪರೀಕ್ಷೆ ಯಾವಾಗ?

VISTARANEWS.COM


on

Edited by

Karnataka State Open University
Koo

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (Karnataka State Open University) ಬಿಕಾಂ ಕಂಪ್ಯೂಟರ್ ಇನ್ ಬ್ಯುಸಿನೆಸ್ (Computer in Business) ಪರೀಕ್ಷೆಯನ್ನು ಮತ್ತೆ ನಡೆಸಲು (Re examination) ನಿರ್ಧರಿಸಿದೆ. ಸೆಪ್ಟೆಂಬರ್‌ 21ರಂದು ನಡೆದಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ (KSOU Exam) ಒಂದು ದಿನ ಮೊದಲೇ ವಾಟ್ಸ್‌ ಆಪ್‌ನಲ್ಲಿ ಹರಿದಾಡಿತ್ತು. ಅದನ್ನು ಎರಡು ಸಾವಿರ ರೂ.ಗಳಿಗೆ ಮಾರಾಟ (Question paper sold) ಮಾಡಲಾಗಿದೆ ಎಂಬ ಬಗ್ಗೆ ದೂರು ದಾಖಲಾಗಿತ್ತು. ಇದೀಗ ವಿವಿಯು ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಮರು ಪರೀಕ್ಷೆ ದಿನಾಂಕವನ್ನು ಸದ್ಯವೇ ಪ್ರಕಟಿಸಲಾಗಿದೆ.

ಪರೀಕ್ಷೆಗೆ ಒಂದು ದಿನ ಮೊದಲೇ ವಿಶ್ವವಿದ್ಯಾಲಯದ ಬಿಕಾಂನ ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪ್ರಶ್ನೆ ಪತ್ರಿಕೆ ಕೆಲವರ ಕೈಯಲ್ಲಿತ್ತು. ಕೆಎಸ್‌ಓಯು ಮಂಗಳೂರು (KSOU Mangalore Center) ಕೇಂದ್ರದ ಸಿಬ್ಬಂದಿ 2000 ರೂ.ಗೆ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್ ಮೂಲಕ ಆರೋಪಿಗಳಿಗೆ ಕಳುಹಿಸಿರುವ ಶಂಕೆ ವ್ಯಕ್ತವಾಗಿತ್ತು. ಪರೀಕ್ಷೆ ದಿನ ನೀಡಿದ ಪ್ರಶ್ನೆ ಪತ್ರಿಕೆ ಹಾಗೂ ಮಾರಾಟವಾದ ಪ್ರಶ್ನೆ ಪತ್ರಿಕೆ ಎರಡು ಒಂದೇ ಆಗಿದ್ದವು. ಈ ಬಗ್ಗೆ ಚಂದು.ಹೆಚ್.ಎಸ್. ಎಂಬ ವಿದ್ಯಾರ್ಥಿ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಶ್ನೆ ಪತ್ರಿಕೆ ಮಾರಾಟ ಪ್ರಕರಣದಲ್ಲಿ ಜಯಲಕ್ಷ್ಮಿಪುರಂ ಪೊಲೀಸರು ನವೀನ್‌ ಮತ್ತು ಮುರಳೀಧರ್‌ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

exam question paper

ಪ್ರಶ್ನೆ ಪತ್ರಿಕೆ ಮಾರಾಟ
ವಿದ್ಯಾರ್ಥಿಗಳು ಭಾರಿ ಕಷ್ಟಪಟ್ಟು ಓದಿರುತ್ತಾರೆ. ಸಿಬ್ಬಂದಿಗಳು ಈ ರೀತಿ ಮೋಸದಾಟ ಆಡುವುದರಿಂದ ಅವರಿಗೆ ಅನ್ಯಾಯವಾಗುತ್ತದೆ ಎಂಬ ಮಾತು ಕೇಳಿಬಂದಿದೆ. ಅದಕ್ಕಿಂತಲೂ ಹೆಚ್ಚಾಗಿ ಮುಕ್ತ ವಿವಿಯಲ್ಲಿ ಓದುವ ಹೆಚ್ಚಿನವರು ಬೇರೆ ಬೇರೆ ಉದ್ಯೋಗಗಳಲ್ಲಿ ಇದ್ದಾರೆ. ಅವರು ತಮ್ಮ ಕೆಲಸ ಕಾರ್ಯಗಳ ನಡುವೆ ಕಷ್ಟಪಟ್ಟು ಸಮಯ ಹೊಂದಾಣಿಕೆ ಮಾಡಿಕೊಂಡು ಓದುತ್ತಿರುತ್ತಾರೆ. ಹೆಚ್ಚಿನವರಿಗೆ ಒಂದು ದಿನ ಪರೀಕ್ಷೆಗೆ ಅಟೆಂಡ್‌ ಆಗಲೂ ಆಗದಷ್ಟು ಕೆಲಸದ ಒತ್ತಡ ಇರುವುದಿಲ್ಲ, ಹೆಚ್ಚಿನವರಿಗೆ ರಜೆಯೂ ಸಿಗುವುದಿಲ್ಲ. ಇಂಥವರಿಗೆ ಮರು ಪರೀಕ್ಷೆ ಕೂಡಾ ಒಂದು ದೊಡ್ಡ ಹೊರೆಯೇ. ಹೀಗಾಗಿ ವಿಶ್ವವಿದ್ಯಾಲಯ ಈ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಬೇಕು, ಈ ಮೂಲಕ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯನ್ನು ತಡೆಯುವುದು ಮಾತ್ರವಲ್ಲ, ವಿವಿಯ ಘನತೆಯನ್ನು ಉಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: KSOU Scam: ಕೆಎಸ್‌ಒಯು ಹಗರಣದ ತನಿಖೆಗೆ ಸಿಬಿಐ ಎಂಟ್ರಿ

Continue Reading

ಕರ್ನಾಟಕ

Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ

22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.

VISTARANEWS.COM


on

Edited by

gold
Koo

ಬೆಂಗಳೂರು: 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5,495ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 54,950 ಮತ್ತು ₹ 5,49,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹5,995 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,960 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 59,950 ಮತ್ತು ₹ 5,99,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹ 79.30, ಎಂಟು ಗ್ರಾಂ ₹ 634.40 ಮತ್ತು 10 ಗ್ರಾಂ ₹ 793ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,930 ಮತ್ತು 1 ಕಿಲೋಗ್ರಾಂಗೆ ₹ 79,300 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
54,990 59,930
ಮುಂಬಯಿ54,950 59,950
ಬೆಂಗಳೂರು
54,950 59,950
ಚೆನ್ನೈ 55,210 60,320

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading

ಉಡುಪಿ

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Rain News : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ (Weather report) ಸಾಮಾನ್ಯವಾಗಿರಲಿದೆ.

VISTARANEWS.COM


on

Edited by

Rain day Girl enjoying
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸೆ.23-24ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಉತ್ತರ ಕರ್ನಾಟಕದಲ್ಲಿ ಬಿಡುವೇ ಇಲ್ಲ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ. ಎಡಬಿಡದೆ ಮಳೆ ಸುರಿಯಲಿದ್ದು, ಜತೆಗೆ ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಲ್ಲಿ ಲಘು ಮಳೆ

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ತಗ್ಗಿದ ಅಬ್ಬರ

ಕರಾವಳಿಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದಾಗ್ಯೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಬೆಂಗಳೂರಲ್ಲಿ ಸಂಜೆಗೆ ಮಳೆ ಕಾಟ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಿಸಿಲಿನ ತಾಪ ಜಾಸ್ತಿ ಇದ್ದರೆ, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 23ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.6160165735
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.440194
ಘಟಪ್ರಭಾ ಜಲಾಶಯ
(Ghataprabha Dam)
662.9142.402311181
ತುಂಗಾಭದ್ರಾ ಜಲಾಶಯ (Tungabhadra Dam)497.7162.92437810316
ಭದ್ರಾ ಜಲಾಶಯ (Bhadra Dam)657.7343.23290290
ಕಬಿನಿ ಜಲಾಶಯ (Kabini Dam)696.1314.8031664390
ಹಾರಂಗಿ
(Harangi Dam)
871.388.0613352791
ಲಿಂಗನಮಕ್ಕಿ (Linganamakki Dam) 554.4468.3054935393
ಹೇಮಾವತಿ
(Hemavathi Dam)
890.5817.6649861300

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
CM Siddaramiah new
ಕರ್ನಾಟಕ11 mins ago

CM Siddaramaiah : ಶಾಸಕ, ಸಂಸದರಿಗೆ Good News; ಇನ್ನು ಮುಂದೆ ಪ್ರತಿ ಶನಿವಾರ ಸಿಎಂ ಸಿದ್ದರಾಮಯ್ಯ ನಿಮ್ಮನ್ನು ಭೇಟಿಯಾಗ್ತಾರೆ!

Narendra Modi And Justin Trudeau
ದೇಶ47 mins ago

India Canada Row: ಆನೆ ಜತೆ ಇರುವೆ ಜಗಳವಾಡುತ್ತಿದೆ! ಕೆನಡಾಗೆ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಗೇಲಿ!

Karnataka State Open University
ಕರ್ನಾಟಕ49 mins ago

KSOU Exam: ಪ್ರಶ್ನೆಪತ್ರಿಕೆ ಮಾರಾಟವಾದ ಕಂಪ್ಯೂಟರ್‌ ಇನ್‌ ಬ್ಯುಸಿನೆಸ್‌ ಮರು ಪರೀಕ್ಷೆಗೆ ನಿರ್ಧಾರ, ಯಾವಾಗ ReExam?

Vijay Raghavendra
South Cinema51 mins ago

Vijay Raghavendra: ವಿಜಯ್ ರಾಘವೇಂದ್ರ -ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್‌ ಔಟ್‌!

Bigg boss Kannada
ಬಿಗ್ ಬಾಸ್53 mins ago

Bigg Boss Kannada: ಬಿಗ್​ಬಾಸ್ ಕನ್ನಡ ಹತ್ತನೇ ಸೀಸನ್ ಆಟಕ್ಕೆ ದಿನಾಂಕ ಫಿಕ್ಸ್‌!

gold
ಕರ್ನಾಟಕ58 mins ago

Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ

Rain day Girl enjoying
ಉಡುಪಿ1 hour ago

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Ptovocative dance at Ganesha festival
ಕರ್ನಾಟಕ2 hours ago

Ganesha Festival : ಹಿಂದು ಮಹಾಸಭಾ ಗಣೇಶೋತ್ಸವದಲ್ಲಿ ತುಂಡು ಬಟ್ಟೆ ತೊಟ್ಟು ಯುವತಿ ಪ್ರಚೋದಕ ಡ್ಯಾನ್ಸ್‌!

Cauvery protest at Mandya
Live News2 hours ago

Karnataka live news: ರಾಜ್ಯದ ಇಂದಿನ ಮಹತ್ವದ ಸುದ್ದಿಗಳು: ವಿಸ್ತರಿಸುತ್ತಿದೆ ಕಾವೇರಿ ಹೋರಾಟ, ಮಂಡ್ಯ ಬಂದ್

Petal Gehlot At UNGA
ದೇಶ2 hours ago

India At UNGA: ‘ನಿಮ್ಮ ದೇಶ ನೋಡಿಕೊಳ್ಳಿ’; ವಿಶ್ವಸಂಸ್ಥೆಯಲ್ಲಿ ‘ಕಾಶ್ಮೀರ’ ಪ್ರಸ್ತಾಪಿಸಿದ ಪಾಕ್‌ಗೆ ಭಾರತ ಚಾಟಿ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ7 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌