ಶಿರಾ: ಗಣೇಶ ಚತುರ್ಥಿ ಹಬ್ಬದ (Ganesha Chaturthi festival) ಅಂಗವಾಗಿ ತಾಲೂಕಿನ ತಾವರೆಕೆರೆ ಗ್ರಾಮದ ಶ್ರೀ ಬಂಡಿ ರಂಗನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಬುಧವಾರ ತಾವರೆಕೆರೆ ಪೊಲೀಸ್ ಠಾಣೆಯ ವತಿಯಿಂದ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ತಾವರೆಕೆರೆ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಮಾತನಾಡಿ, ಸಾರ್ವಜನಿಕರು ಹಬ್ಬವನ್ನು ಶಾಂತಿಯುತವಾಗಿ ಸಡಗರದೊಂದಿಗೆ ಆಚರಿಸುವಂತೆ ತಿಳಿಸಿದರು.
ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡದೇ ಗಣೇಶೋತ್ಸವವನ್ನು ಆಚರಿಸಬೇಕು ಎಂದು ತಿಳಿಸಿದರು. ಡಿಜೆ ಬಳಸಲು ಅನುಮತಿ ಇಲ್ಲ. ಈ ಹಿನ್ನೆಲೆಯಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮವನ್ನು ಜರುಗಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: Libya flood: ಲಿಬಿಯಾದಲ್ಲಿ ಚಂಡಮಾರುತ, ಪ್ರವಾಹ; 20,000ಕ್ಕೂ ಅಧಿಕ ಮಂದಿ ಸಾವು
ಗಣೇಶ ಹಬ್ಬದ ಪ್ರಯುಕ್ತ ಪೊಲೀಸರಿಂದ ಅನುಮತಿ ಪಡೆದು ಮೈಕ್, ಸ್ಪೀಕರ್ ಬಳಸಬಹುದು, ಆದರೆ ಡಿಜೆ ಬಳಕೆಗೆ ಅವಕಾಶ ನೀಡುವುದಿಲ್ಲ ಎಂದರು. ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದ್ದು, ಅದನ್ನು ಉಲ್ಲಂಘಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.
ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೇ ಹೊಸ ನಿರ್ಬಂಧಗಳನ್ನು ಹೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕಾನೂನು ಪಾಲನೆ ಹಾಗೂ ಶಾಂತಿಯುತವಾಗಿ ಹಬ್ಬ ಆಚರಿಸಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದ ಅವರು, . ಗಣೇಶ ಮೂರ್ತಿಯ ಪ್ರತಿಷ್ಠಾಪನಾ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಪ್ರಯತ್ನಿಸುವಂತೆ ಸಂಘಟಕರಿಗೆ ಅವರು ಸೂಚಿಸಿದರು.
ಇದನ್ನೂ ಓದಿ: Famous Ganesha Temples: ಭಕ್ತರ ಮನಸ್ಸಿಗೆ ನೆಮ್ಮದಿ ನೀಡುವ ತಾಣ, ಕರ್ನಾಟಕದ ಪ್ರಮುಖ ಗಣಪತಿ ದೇವಸ್ಥಾನಗಳಿವು
ಸಾರ್ವಜನಿಕರು ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಅವರು ಹಲವಾರು ಸಲಹೆಗಳನ್ನು ನೀಡಿದರು.