ಶಿರಾ: ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ (KSRTC Bus Stand) ಮುಂಭಾಗದ ರಸ್ತೆಯ ಬದಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಪೆಟ್ಟಿಗೆ ಅಂಗಡಿಗಳನ್ನು ಬುಧವಾರ ನಗರಸಭೆಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು.
ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಮಾರ್ಗದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ತಳ್ಳು ಬಂಡಿಗಳು, ಪೆಟ್ಟಿಗೆ ಅಂಗಡಿಗಳನ್ನು ಇರಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು.
ಇದನ್ನೂ ಓದಿ: Uttara Kannada News: ರವೀಂದ್ರನಾಥ ಟ್ಯಾಗೋರ್ ಬೀಚ್‌ನಲ್ಲಿ ಸ್ವಚ್ಛತೆ ಮಾಯ; ಬರೀ ತ್ಯಾಜ್ಯ
ರಸ್ತೆ ಬದಿಯ ಜಾಗಗಳನ್ನು ಅತಿಕ್ರಮಿಸಿಕೊಂಡು ಹಣ್ಣು,ಹೂವು ಮತ್ತಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಬಸ್ ನಿಲ್ದಾಣದಲ್ಲಿ ಬಸ್‌ಗಳ ಸುಗಮ ಸಂಚಾರಕ್ಕೆ, ಪ್ರಯಾಣಿಕರ ಸಂಚಾರಕ್ಕೂ ಸಮಸ್ಯೆ ಉಂಟಾಗಿತ್ತು. ಅಷ್ಟೇ ಅಲ್ಲದೇ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಹಾಗೂ ಪಾದಾಚಾರಿಗಳಿಗೂ ತೊಂದರೆ ಉಂಟಾಗುತ್ತಿದ್ದ ಕಾರಣ ನಗರಸಭೆ ಆಯುಕ್ತ ರುದ್ರೇಶ್ ನೇತೃತ್ವದಲ್ಲಿ ಬೆಳಿಗ್ಗೆ ತೆರವು ಕಾರ್ಯಾಚರಣೆ ನಡೆಯಿತು.
ಇದನ್ನೂ ಓದಿ: Walmart: ವಾಲ್‌ಮಾರ್ಟ್‌ನಲ್ಲಿ ಮೇಡ್ ಇನ್ ಇಂಡಿಯಾ ಸೈಕಲ್ ಲಾಂಚ್!
ಈ ಕುರಿತು ಶಿರಾ ನಗರಸಭೆ ಆಯುಕ್ತ ರುದ್ರೇಶ್ ಮಾತನಾಡಿ, ರಸ್ತೆಯ ಬದಿಗಳಲ್ಲಿ ಪಾರ್ಕಿಂಗ್ ಜಾಗವನ್ನು ಅತಿಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿದ್ದರಿಂದ ವಾಹನಗಳ, ಪಾದಾಚಾರಿಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಇಂದು ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು.