ಕುಣಿಗಲ್: ಪಟ್ಟಣದಲ್ಲಿ 1650 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಮಾರ್ಚ್ 1ರಂದು ಶುಕ್ರವಾರ ಸಿಎಂ (CM), ಡಿಸಿಎಂ (DCM) ಅವರು ಚಾಲನೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ್ (Tumkur News) ತಿಳಿಸಿದರು.
ಪಟ್ಟಣದ ಸಂಸದರ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಜಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ಮಾ.1ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 1,650 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: Job Alert: ದ್ವಿತೀಯ ಪಿಯುಸಿ ಪಾಸ್ ಆದವರಿಗೆ ಗುಡ್‌ನ್ಯೂಸ್; 2,500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ
ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಹಲವು ಸಚಿವರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು 1000 ಕೋಟಿ ರೂಪಾಯಿ ವೆಚ್ಚದಲ್ಲಿ ಲಿಂಕ್ ಕೆನಾಲ್ ಯೋಜನೆ, 200 ಕೋಟಿ ವೆಚ್ಚದಲ್ಲಿ ತಾಲೂಕಿನ ರಸ್ತೆ ಅಭಿವೃದ್ಧಿ, ಹತ್ತು ಕೋಟಿ ವೆಚ್ಚದಲ್ಲಿ ಪಟ್ಟಣದ ಖಾಸಗಿ ಬಸ್ ನಿಲ್ದಾಣ ನಿರ್ಮಾಣ, ಗ್ರಾಮೀಣ ವಸತಿ ಯೋಜನೆಯಡಿ 3550 ಮನೆಗಳ ಹಂಚಿಕೆ, ಹುಲಿಯೂರುದುರ್ಗ ಪಟ್ಟಣದಲ್ಲಿ 350 ಕೋಟಿ ವೆಚ್ಚದಲ್ಲಿ 440 ಕೆ.ವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ, 35 ಕೋಟಿ ವೆಚ್ಚದಲ್ಲಿ ಪಟ್ಟಣದ ಒಳಚರಂಡಿ ನಿರ್ಮಾಣ, 35 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿ, ಎರಡು ಕೋಟಿ ವೆಚ್ಚದಲ್ಲಿ ಜಿ.ಕೆ.ಬಿ.ಎಂ.ಎಸ್. ಕ್ರೀಡಾಂಗಣ ಅಭಿವೃದ್ದಿ ಹಾಗೂ 25 ಹೊಸ ಕೆ.ಎಸ್.ಆರ್.ಟಿ.ಸಿ. ಬಸ್‌ಗಳಿಗೆ ಚಾಲನೆ ಸೇರಿದಂತೆ ಮಿನಿ ವಿಧಾನಸೌಧ ಕಟ್ಟಡ ಹಾಗೂ ನೂತನವಾಗಿ ನಿರ್ಮಿಸಿರುವ ಅಗ್ನಿಶಾಮಕ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಜತೆಗೆ ಗೃಹಲಕ್ಷ್ಮಿ ಯೋಜನೆಯ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್ಗೆ ಭಾರತ ತಂಡ ಪ್ರಕಟ; ರಾಹುಲ್ ಔಟ್, ಬುಮ್ರಾ ಇನ್
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮತಿ, ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶಂಕರ್, ಮೋಹನ್, ಗ್ಯಾಸ್ ಮೂರ್ತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.