ಶಿರಾ: ಗ್ರಾಮೀಣ ಪ್ರದೇಶ ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗ್ರಹಿಸಿ ಬುಕ್ಕಾಪಟ್ಟಣದ ಬೆಸ್ಕಾಂ ಉಪ ಕಚೇರಿ ಮುಂಭಾಗ ರೈತರು (Farmers) ಪ್ರತಿಭಟನೆ (Tumkur News) ನಡೆಸಿದರು.
ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿ ವ್ಯಾಪ್ತಿ ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಲ ಗ್ರಾಮಗಳು ಹಾಗೂ ರೈತರ ಪಂಪಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ, ಬೆಸ್ಕಾಂ ಉಪ ಕಚೇರಿಯ ಮುಂಭಾಗ ರೈತರು ಸ್ಥಳದಲ್ಲೇ ಅಡುಗೆ ಮಾಡಿ, ಪ್ರತಿಭಟನೆ ನಡೆಸಿದರು.
ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಬೆಳೆಗಳಿಗೆ ನೀರುಣಿಸಲಾಗದೇ ಬೆಳೆಗಳು ಒಣಗುತ್ತಿವೆ. ಇದರಿಂದಾಗಿ ರೈತರು ಶ್ರಮವಹಿಸಿ ಬೆಳೆದ ಬೆಳೆ ಕೈಗೆ ಸಿಗದಾಗಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆರೋಪಿಸಿದರು.
ಇದನ್ನೂ ಓದಿ: Additional Cess: ಇನ್ನು ವಾಹನ ನೋಂದಣಿ ಮತ್ತಷ್ಟು ದುಬಾರಿ; ಹೆಚ್ಚುವರಿ ಶೇ.3 ಸೆಸ್, EVಗಳಿಗೆ ಲೈಫ್‌ಟೈಮ್ ಟ್ಯಾಕ್ಸ್!
ಇನ್ನು ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿಯಾಗಿ ವಿದ್ಯುತ್ ಕಡಿತಗೊಳಿಸುತ್ತಿದ್ದು, ವಿದ್ಯಾರ್ಥಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಕುಡಿವ ನೀರಿನ ಸಮಸ್ಯೆ ತಲೆದೊರಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಹುಳಿಯಾರು ಹೋಬಳಿ ತಿಮ್ಮನಹಳ್ಳಿ ಬೆಸ್ಕಾಂ ಇಲಾಖೆಯ ಸೆಕ್ಷನ್ ಅಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಈ ಕುರಿತು ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ವಾಪಾಸ್ ಪಡೆದರು.
ಇದನ್ನೂ ಓದಿ: Oral Health Tips: ಬಾಯಿಯ ಆರೋಗ್ಯಕ್ಕೆ ಸರಳ ಸೂತ್ರಗಳಿವು
ಪ್ರತಿಭಟನೆಯಲ್ಲಿ ಬುಕ್ಕಾಪಟ್ಟಣ ಸುತ್ತಮುತ್ತಲಿನ ಗ್ರಾಮಗಳ ರೈತರು, ಹುಳಿಯಾರು ಹೋಬಳಿ ಅಂಬಾರಪುರ ಗ್ರಾಮದ ರೈತರು ಹಾಗೂ ಇತರರು ಪಾಲ್ಗೊಂಡಿದ್ದರು.