Site icon Vistara News

Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್

Fodder Bank inauguration at kasaba

ಕೊರಟಗೆರೆ: ತುಮಕೂರು ಜಿಲ್ಲೆಯಲ್ಲಿ ಕೊರಟಗೆರೆ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಸಬಾ ಹೋಬಳಿಯಲ್ಲಿ ಮೇವು ಬ್ಯಾಂಕ್‌ ಅನ್ನು ತೆರೆಯಲಾಗಿದೆ ಎಂದು ತಹಸೀಲ್ದಾರ್ ಮಂಜುನಾಥ್ (Tumkur News) ತಿಳಿಸಿದರು.

ಪಟ್ಟಣದ ಬೈಲಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಮೂರನೇ ಮೇವು ಬ್ಯಾಂಕ್ ಉದ್ಘಾಟಿಸಿ ಮಾತನಾಡಿದ ಅವರು, ಕೊರಟಗೆರೆ ತಾಲೂಕು ಸಂಪೂರ್ಣ ಮಳೆ ಆಶ್ರಿತ ಒಣ ಪ್ರದೇಶವಾಗಿದ್ದು, ಸರ್ಕಾರದಿಂದ ಬರ ಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ ಇದರಿಂದ ರೈತರು ಜಾನುವಾರುಗಳಿಗೆ ಮೇವು ಒದಗಿಸಲು ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ತಾಲೂಕಿನ ಕಸಬಾ ಹೋಬಳಿಯ ಮೇವು ಬ್ಯಾಂಕ್‌ ಅನ್ನು ತೆರೆಯಲಾಗಿದೆ ಎಂದರು.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಮೇವು ಬ್ಯಾಂಕ್ ತೆರೆಯಲಾಗಿದೆ. ಈಗಾಗಲೇ ತಾಲೂಕಿನ ಹೊಳವನಹಳ್ಳಿ ಹಾಗೂ ಬುಕ್ಕಾಪಟ್ಟಣಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಿದ್ದು ರೈತರ ಮನವಿ ಹಿನ್ನಲೆಯಲ್ಲಿ ಕಸಬಾ ಹೋಬಳಿ ರೈತರಿಗೆ ಅನುಕೂಲವಾಗುವಂತೆ ಮೇವು ಬ್ಯಾಂಕ್ ತೆರೆಯಲಾಗಿದೆ, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ತಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಬೇಕು ಇದರಿಂದ ಸರ್ಕಾರದ ಯೋಜನೆಯ ಅನುದಾನಗಳನ್ನು ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯಿಸಲು ಅನುಕೂಲವಾಗುತ್ತದೆ ಎಂದರು.

ಪಶು ಇಲಾಖಾ ಸಹಾಯಕ ನಿರ್ದೇಶಕ ನಾಗಭೂಷಣ್ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲದ ಹಿನ್ನಲೆಯಲ್ಲಿ ಮೇವು ಇಲ್ಲದೆ ರೈತರು ಪರದಾಡುತ್ತಿದ್ದು, ಇದನ್ನು ಮನಗೊಂಡ ಸರ್ಕಾರ ಮೇವು ಬ್ಯಾಂಕ್‌ಗಳನ್ನು ತೆರೆಯಲು ಆದೇಶಿಸಿದೆ, ಈಗಾಗಲೇ ಮಳೆ ಪ್ರಾರಂಭವಾಗಿದ್ದರೂ ಇನ್ನು ಕೆಲವು ದಿನಗಳ ಕಾಲ ಮೇವಿಗೆ ಅಭಾವವಿರುತ್ತದೆ, ಅದರಲ್ಲೂ ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ, ಅದಕ್ಕಾಗಿ ಕಸಬಾ ಹೋಬಳಿಯ ಮೂರನೇ ಮೇವು ಬ್ಯಾಂಕ್ ತೆರೆದಿದ್ದು, ರೈತರು ಶಾಂತಿಯಿಂದ ಮೇವನ್ನು ಪಡೆಯಬೇಕು, ಪ್ರತಿಯೊಬ್ಬ ಜಾನುವಾರು ಹೊಂದಿರುವ ರೈತರಿಗೆ ಮೇವು ತಲುಪಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಇದನ್ನೂ ಓದಿ: Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

ಈ ಸಂದರ್ಭದಲ್ಲಿ ಪಶು ಇಲಾಖೆಯ ಡಾ.ಮಂಜನಾಥ್, ಡಾ.ಚಂದ್ರಶೇಖರ್, ಕಂದಾಯ ಇಲಾಖೆಯ ಕಸಬಾ ಆರ್.ಐ ಬಸವರಾಜು, ವಿ.ಎ.ಗಳಾದ ಮೋಹನ್‌ಕುಮಾರ್, ಪವನ್ ಕುಮಾರ್, ಗುರುಶಂಕರ್, ಮೀನಾಕುಮಾರಿ ಹಾಗೂ ಕಂದಾಯ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version